ಬೆಂಗಳೂರು | ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ವಿರೋಧ; ನ.26ರಂದು ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

Date:

ರಾಜ್ಯ ಸರ್ಕಾರವು ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿಯವರಿಗೆ ದತ್ತು (ಮೆಂಟರಿಂಗ್) ನೀಡಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಮತ್ತು 2009ರ ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್‌ಟಿಇ) ರಾಜ್ಯವ್ಯಾಪಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ನಾಳೆ (ನ.26) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ತಿಳಿಸಿದೆ. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಣ ತಜ್ಞರನ್ನು ಒಳಗೊಂಡಂತೆ 20ಕ್ಕೂ ಅಧಿಕ ಸಂಘಟನೆಗಳು ಪಾಲ್ಗೊಳ್ಳುತ್ತಿವೆ ಎಂದು ತಿಳಿಸಿದೆ.

- Advertisement -

ಪ್ರತಿಭಟನೆ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಎಫ್‌ಐ ನಾಯಕ ಗಣೇಶ್ ರಾಥೋಡ್, “ಸರ್ಕಾರಿ ಕನ್ನಡ ಶಾಲೆಗಳನ್ನು ದತ್ತು ನೀಡುವ ಪದ್ಧತಿಯನ್ನು ಒಪ್ಪಿಕೊಂಡಿರುವ ಸರ್ಕಾರದ ನಿರ್ಧಾರವನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಈಗಾಗಲೇ ವಿವಿಧ ವಿದ್ಯಾರ್ಥಿ ಸಂಘಟನೆಗಳು ಸಹಿ ಸಂಗ್ರಹ ಅಭಿಯಾನ ಮತ್ತು ಹೋರಾಟಗಳನ್ನು ನಡೆಸುತ್ತಿವೆ. ಈ ಹೋರಾಟಕ್ಕೆ ರಾಜ್ಯಮಟ್ಟದ ಸ್ವರೂಪ ನೀಡುವ ಉದ್ದೇಶದಿಂದ ಗುರುವಾರ ಬೃಹತ್ ಹೋರಾಟ ಆರಂಭಿಸಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಎಸ್‌ಎಫ್ ರಾಜ್ಯಾಧ್ಯಕ್ಷೆ ವೀಣಾ ಅವರು ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರ ಕಾರ್ಯವೈಖರಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಹಿಂದೆ ತಾವೇನು ಹೇಳಿದ್ದೆವು ಮತ್ತು ಈಗೇನು ಮಾಡುತ್ತಿದ್ದೇವೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ಸರ್ಕಾರ ನಡೆದುಕೊಳ್ಳುತ್ತಿದೆ. 2009ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆಯ (RTE) ಆಶಯಗಳನ್ನು ಈಗ ರಾಜ್ಯ ಸರ್ಕಾರವೇ ದಿಕ್ಕರಿಸುತ್ತಿದೆ. 2020ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಉಗ್ರವಾಗಿ ವಿರೋಧಿಸಿ, ರಾಜ್ಯ ಶಿಕ್ಷಣ ನೀತಿ (SEP) ಜಾರಿಗೊಳಿಸುವುದಾಗಿ ಸಮಿತಿ ರಚಿಸಿದ್ದ ಸರ್ಕಾರ, ಆ ಸಮಿತಿ ನೀಡಿದ ವರದಿಯನ್ನು ಇದುವರೆಗೂ ಸಾರ್ವಜನಿಕ ಚರ್ಚೆಗೆ ಬಿಟ್ಟಿಲ್ಲ. ಬದಲಾಗಿ ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಎನ್‌ಇಪಿ ಅಂಶಗಳನ್ನೇ ಜಾರಿಗೊಳಿಸಲು ಹೊರಟಿದೆ” ಎಂದು ಕಿಡಿಕಾರಿದ್ದಾರೆ.

“ಶಿಕ್ಷಣ ಸಚಿವರು ಈ ಹಿಂದೆ ಕಡಿಮೆ ದಾಖಲಾತಿ ಇರುವ ಶಾಲೆಗಳನ್ನು ಮುಚ್ಚುವುದಾಗಿ ಹೇಳಿ, ಈಗ ಒಂದು ಮಗುವಿದ್ದರೂ ಶಾಲೆ ಮುಚ್ಚುವುದಿಲ್ಲ ಎಂದು ಗೊಂದಲದ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳು ಯಾರೊಬ್ಬರ ಸ್ವಂತ ಆಸ್ತಿಯಲ್ಲ, ಅವು ಜನರ ಆಸ್ತಿ; ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಜನರ ಅಭಿಪ್ರಾಯ ಕೇಳಬೇಕು. ಎಲ್ಲೆಂದರಲ್ಲಿ ಖಾಸಗಿ ಶಾಲೆಗಳಿಗೆ ಅನುಮತಿ ನೀಡಿ, ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯ ಹಾಗೂ ಶಿಕ್ಷಕರನ್ನು ಒದಗಿಸದೆ ಸರ್ಕಾರವೇ ಅವುಗಳನ್ನು ದುರ್ಬಲಗೊಳಿಸಿದೆ. ಈಗ ಆಧುನಿಕ ಶಿಕ್ಷಣ ನೀಡುವ ಭ್ರಮೆ ಹುಟ್ಟುಹಾಕಿ ಖಾಸಗಿಯವರಿಗೆ ದತ್ತು ನೀಡುವ ಮೂಲಕ, ಬಡವರು, ಜನಸಾಮಾನ್ಯರು ಹಾಗೂ ಹಿಂದುಳಿದ ವರ್ಗದ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿ ಸರ್ಕಾರಿ ಶಾಲೆಗಳನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ

“ಸರ್ಕಾರವು ಕನಿಷ್ಠ ಎಸ್‌ಇಪಿ ವರದಿಯ ಅಂಶಗಳನ್ನಾದರೂ ಜಾರಿಗೊಳಿಸಿದರೆ ಸರ್ಕಾರಿ ಶಾಲೆಗಳು ಉಳಿಯುತ್ತವೆ. ಸರ್ಕಾರದ ಇತ್ತೀಚಿನ ನೀತಿಗಳ ವಿರುದ್ಧ ನಮಗೆ ಹಲವಾರು ಆಕ್ಷೇಪಗಳಿದ್ದರೂ, ನಾಳೆ ಪ್ರಮುಖವಾಗಿ ಆರ್‌ಟಿಇ ಜಾರಿ ಮತ್ತು ಶಾಲೆಗಳ ದತ್ತು ಪ್ರಕ್ರಿಯೆ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಕೆವಿಎಸ್ ನಾಯಕ ಸರೋವರ್ ಬೆಂಕಿಕೆರೆ, “ಜ್ಯೋತಿಬಾ ಫುಲೆ ಅವರ ಆಶಯದಂತೆ ಸರ್ಕಾರಿ ಶಾಲೆಗಳು ಸರ್ಕಾರದ ಅಡಿಯಲ್ಲೇ ಇರಬೇಕು ಮತ್ತು ಎಲ್ಲರಿಗೂ ಸಮಾನ ಶಿಕ್ಷಣ ಸಿಗಲು ಸಮಾನ ಶಾಲಾ ವ್ಯವಸ್ಥೆ ಜಾರಿಯಾಗಬೇಕು” ಎಂದು ಒತ್ತಾಯಿಸಿದ್ದಾರೆ.

“ಶಾಲೆಗಳನ್ನು ದತ್ತು ಕೊಡುವ ಬದಲು, ಸರ್ಕಾರವು ಶ್ರೀಮಂತರ ಮೇಲೆ ಹೆಚ್ಚಿನ ತೆರಿಗೆ ವಿಧಿಸಿ, ಆ ಹಣವನ್ನು ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಬಳಸಬೇಕು. ಶಾಲೆಗಳನ್ನು ಮೆಂಟರಿಂಗ್ ಹೆಸರಿನಲ್ಲಿ ದತ್ತು ನೀಡುವುದನ್ನು ರಾಜ್ಯದ ಎಲ್ಲಾ
ವಿದ್ಯಾರ್ಥಿ ಸಂಘಟನೆಗಳು ಖಡಾಖಂಡಿತವಾಗಿ ವಿರೋಧಿಸುತ್ತವೆ. ಬೆಂಗಳೂರಿನಲ್ಲಿ ನಾಳೆ ಬೃಹತ್ ಹೋರಾಟ ನಡೆಯಲಿದೆ” ಎಂದು ತಿಳಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...