ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

Date:

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಅಭ್ಯರ್ಥಿ ಎ.ಪಿ ರಂಗನಾಥ್ ಅವರು ಚುನಾಯಿತರಾಗಿರುತ್ತಾರೆ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

- Advertisement -

ಅಕ್ಟೋಬರ್ 23 ರಂದು ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನದಲ್ಲಿ ಒಟ್ಟು 27,405 ಮತದಾರರ ಪೈಕಿ 22,468 ಮಂದಿ ಮತ ಚಲಾಯಿಸಿದ್ದು, ಶೇ.81.98ರಷ್ಟು ಮತದಾನವಾಗಿತ್ತು. ಮತ ಚಲಾಯಿಸಿದವರಲ್ಲಿ 8,360 ಪುರುಷರು ಹಾಗೂ 14,108 ಮಹಿಳೆಯರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇಂದು ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭಗೊಂಡಿದ್ದು, ಮೊದಲನೆಯ ಪ್ರಾಶಸ್ಯದ ಮತ ಎಣಿಕೆ ಅಂತ್ಯದಲ್ಲಿ ಎ.ಪಿ. ರಂಗನಾಥ್ ಅವರು 10810 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಮತ ಎಣಿಕೆಯ ವಿವಿಧ ಸುತ್ತುಗಳಲ್ಲಿ ಎ.ಪಿ. ರಂಗನಾಥ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪುಟ್ಟಣ್ಣನವರಿಂದ 908 ಅಂತರದ ಮುನ್ನಡೆಯನ್ನು ಪಡೆದು ಚುನಾಯಿತರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪುಟ್ಟಣ್ಣ ಅವರು 9902,
ಕರ್ನಾಟಕ ರಾಷ್ಟ್ರ ಸಮಿತಿಯ ಅಭ್ಯರ್ಥಿಯಾದ
ಡಾ. ಜಿ.ಆರ್. ಹೆಬ್ಬೂರು 94 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಉಮೇಶ್ ಬಾಬು ಪಿಳ್ಳೆಗೌಡ 215 ಮತಗಳು, ಪಕ್ಷೇತರ ಅಭ್ಯರ್ಥಿಯಾದ ಬಿ .ಎಸ್. ನಾಗರಾಜು 11 ಹಾಗೂ ಪಕ್ಷೇತರ ಅಭ್ಯರ್ಥಿಯಾದ ಡಾ. ಎನ್. ಲಕ್ಷ್ಮಣ ಸ್ವಾಮಿ ಅವರು 24 ಮತಗಳನ್ನು ಪಡೆದಿದ್ದಾರೆ.

ಒಟ್ಟು 21056 ಮತಗಳು ಮಾನ್ಯವಾಗಿದ್ದು, 1857 ಮತಗಳು ತಿರಸ್ಕೃತಗೊಂಡಿದೆ ಎಂದು ಬಿಸ್ವಾಸ್ ಅವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಶಕಗಳಿಂದ ಯಾರು ಯಾರೋ ನನ್ನ ಕಥೆ ಹೇಳಿದ್ದಾರೆ, ಈಗ ನನ್ನ ಸರದಿ: ಸೋನಿಯಾ ಗಾಂಧಿ

ನನ್ನ ಜೀವನದ ಕಥೆಯನ್ನು ಇತರರು ದಶಕಗಳಿಂದ ಹೆಣೆಯುತ್ತಾ ಬಂದಿದ್ದರು. ಈಗ ನನ್ನ...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ ಭವಿಷ್ಯ

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ...

ರಾಹುಲ್ ಗಾಂಧಿ ಅಕ್ರಮ ಆಸ್ತಿ ಆರೋಪ: ‘ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡ್ತೀರಾ’; ವಕೀಲರಿಗೆ ಸಿಜೆಐ ತರಾಟೆ

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ವಕೀಲರೊಬ್ಬರು ಯಾವುದೇ ಆಧಾರವಿಲ್ಲದಯೇ ರಾಹುಲ್ ಗಾಂಧಿ...

ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ: ಡಿಪಿಡಿಪಿ ಕಾಯ್ದೆ ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (ಡಿಪಿಡಿಪಿ) ಕಾಯ್ದೆ ಮತ್ತು ನಿಯಮಗಳು ಮಾಧ್ಯಮ...