ಬೆಂಗಳೂರು ಟೆಕ್ ಸಮಿಟ್-2026; ಸ್ಟಾರ್ಟ್‌ಅಪ್‌ಗಳಿಗೆ ಸರ್ಕಾರವೇ ಮೊದಲ ಗ್ರಾಹಕ: ಸಚಿವ ಪ್ರಿಯಾಂಕ್ ಖರ್ಗೆ

Date:

ನವೋದ್ಯಮಗಳು ರೂಪಿಸುವ ನವೀನ ಆವಿಷ್ಕಾರಗಳನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳುವ ಮೂಲಕ, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರವೇ ನವೋದ್ಯಮಗಳಿಗೆ ‘ಮೊದಲ ಗ್ರಾಹಕ’ನಾಗಿ ನಿಲ್ಲುವ ಕ್ರಾಂತಿಕಾರಿ ನೀತಿಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

- Advertisement -

‘ಬೆಂಗಳೂರು ಟೆಕ್ ಸಮಿಟ್-2026’ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೋದ್ಯಮಗಳ ಅಭಿವೃದ್ಧಿ ಮತ್ತು ಆಡಳಿತ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ತಳಪಾಯವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಲಿದ್ದಾರೆ. ‘ನವೋದ್ಯಮಗಳಿಗೆ ಮೊದಲ ಗ್ರಾಹಕ’ ನೀತಿಯಡಿ ಆಯ್ಕೆಯಾಗುವ ನವೋದ್ಯಮಗಳಿಗೆ ‘ರೆಗ್ಯುಲೇಟರಿ ಸ್ಯಾಂಡ್‌ಬಾಕ್ಸ್’) ವಾತಾವರಣದಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸುವುದರ ಜೊತೆಗೆ, ಸರ್ಕಾರದ ಸಾಂಸ್ಥಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿ ನವೋದ್ಯಮಕ್ಕೆ ತಲಾ 25 ಲಕ್ಷ ರೂಪಾಯಿ ಬಂಡವಾಳವನ್ನು ಒದಗಿಸಲಾಗುತ್ತಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸರ್ಕಾರಿ ಸೇವೆಗಳನ್ನು ನಾಗರಿಕರಿಗೆ ಇನ್ನಷ್ಟು ಪಾರದರ್ಶಕವಾಗಿ ಮತ್ತು ಉತ್ತರದಾಯಿಯನ್ನಾಗಿ ತಲುಪಿಸುವ ಉದ್ದೇಶದಿಂದ ಮೊದಲ ಹಂತದ ಕೋಹಾರ್ಟ್ ಅಡಿಯಲ್ಲಿ ಜನಸೇವಾ ಇಲಾಖೆಗೆ ನವೋದ್ಯಮಗಳಿಂದ ಆಹ್ವಾನಿಸಲಾಗಿದ್ದು, ಒಟ್ಟು 76 ಅರ್ಜಿಗಳು ಸಲ್ಲಿಕೆಗೊಂಡಿವೆ. ಇದರಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕುಂದುಕೊರತೆ ನಿರ್ವಹಣೆ ಮತ್ತು ಪರಿಹಾರ ವ್ಯವಸ್ಥೆ, AI ಚಾಲಿತ ಏಕೀಕೃತ ನಾಗರಿಕ ಕಾಲ್ ಸೆಂಟರ್, ಇ-ಆಫೀಸ್ ಹಾಗೂ ಏಕೀಕೃತ ಅಧಿಕಾರಿಗಳ ಕಾರ್ಯ ಜತೆಗೆ ನಾಗರಿಕರಿಗೆ ಲಭ್ಯವಿರುವ ಸರ್ಕಾರದ ಐಟಿ ಸೇವೆಗಳ ನಿರಂತರ ಕಾರ್ಯಕ್ಷಮತೆ ಮತ್ತು ತಾಂತ್ರಿಕ ಅಡಚಣೆ ಎದುರಾದಾಗ ಅನುಸರಿಸಬೇಕಾದ ಬ್ಯಾಕಪ್ ವ್ಯವಸ್ಥೆಗಳ ಕುರಿತು ನವೋದ್ಯಮಗಳ ಆವಿಷ್ಕಾರಗಳನ್ನು ಸಕ್ರಿಯವಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇದಲ್ಲದೆ, ಎರಡನೇ ಹಂತದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯಾಚರಣೆಯನ್ನು ಮತ್ತಷ್ಟು ಸ್ಮಾರ್ಟ್ ಹಾಗೂ ದಕ್ಷವಾಗಿಸಲು ಅಕ್ಟೋಬರ್ 8 ರಿಂದ 23ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಒಟ್ಟು 74 ಅರ್ಜಿಗಳು ಬಂದಿವೆ. ಈ ಹಂತದಲ್ಲಿ AI ಮೂಲಕ ಆದಾಯ ರಹಿತ ನೀರಿನ ಸೋರಿಕೆಯನ್ನು ಕಡಿಮೆ ಮಾಡುವುದು, ಸಂಸ್ಕರಿಸಿದ ತ್ಯಾಜ್ಯನೀರಿನ ಮರುಬಳಕೆ ಯೋಜನೆ, ಆಸ್ತಿ ನಿರ್ವಹಣೆ ಮತ್ತು ಜಿಐಎಸ್ ಆಧಾರಿತ ಆದಾಯ ಹಾಗೂ ಕಾರ್ಯಾಚರಣಾ ಗುಪ್ತಚರ ವ್ಯವಸ್ಥೆಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಖರ್ಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ನಿರುದ್ಯೋಗ, ಭ್ರಷ್ಟಾಚಾರ, ಮಹಿಳಾ ದೌರ್ಜನ್ಯಗಳ ವಿರುದ್ಧ ಯುವಜನರು ಸಂಘಟಿತರಾಗಲಿ: ಸಿದ್ದಲಿಂಗ ಬಾಗೇವಾಡಿ

ನಿರುದ್ಯೋಗ, ಭ್ರಷ್ಟಾಚಾರ, ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ಅಕ್ರಮ ಹಾಗೂ ಮಹಿಳೆಯರ ಮೇಲಿನ...

ಡಿಜಿಟಲ್ ಅರೆಸ್ಟ್‌ಗಿಂತ ಭಯಾನಕ ‘ಎಐ ವಾಯ್ಸ್ ಕ್ಲೋನಿಂಗ್’ ವಂಚನೆ; ನಿಮ್ಮ ಆತ್ಮೀಯರ ಧ್ವನಿಯಲ್ಲೇ ಕರೆ ಬರುತ್ತದೆ ಎಚ್ಚರ!

ಸೈಬರ್ ವಂಚಕರು ಜನರನ್ನು ವಂಚಿಸಲು ದಿನಕ್ಕೊಂದು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಇತ್ತೀಚಿನ...