ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

Date:

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಪೊಲೀಸರು ಯಶಸ್ವಿಯಾಗಿದ್ದಾರೆ. ಸರ್ಕಾರಿ ಯೋಜನೆಯೊಂದಕ್ಕೆ ಆಧಾರ್‌ ಕಾರ್ಡ್‌ ಬಳಸಿ ಪಡೆದ ಒಟಿಪಿ ಈ ಪ್ರಕರಣಕ್ಕೆ ಪ್ರಮುಖ ತಿರುವು ನೀಡಿದೆ.

- Advertisement -

ಕಳೆದ ಜನವರಿ 31 ರಂದು ಬೆಂಗಳೂರಿನ ವಿದ್ಯಾರಣ್ಯಪುರದ ನಿವಾಸಿಯಾದ ತನಿಷ್ಕಾ ಎಂಬ 18 ವರ್ಷದ ವಿದ್ಯಾರ್ಥಿನಿ, ತನ್ನ ಗೆಳತಿಯೊಂದಿಗೆ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆ ಬಿಟ್ಟಿದ್ದಳು. ಆ ನಂತರ ಇಬ್ಬರೂ ವಾಪಸ್ ಬಂದಿರಲಿಲ್ಲ. ತನಿಖೆ ವೇಳೆ ಅವರು ಮೊಬೈಲ್ ಫೋನ್, ಎಟಿಎಂ ಕಾರ್ಡ್ ಅಥವಾ ಯಾವುದೇ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರಲಿಲ್ಲ; ಕೇವಲ ತಮ್ಮ ಆಧಾರ್ ಕಾರ್ಡ್ ಹಾಗೂ ಕಾಲೇಜು ಬ್ಯಾಗ್ ಮಾತ್ರ ಕೊಂಡೊಯ್ದಿದ್ದರು ಎಂಬುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಇದನ್ನೂ ಓದಿ: ‘ಆಳಂದ’ ಕ್ಷೇತ್ರದಲ್ಲಿ ಭಾರೀ ಮತ ಕಳ್ಳತನ; ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

Advertisements

ಸ್ಥಳೀಯ ವಿದ್ಯಾರಣ್ಯಪುರ ಪೊಲೀಸರ ವಿಶೇಷ ತಂಡ ಹಲವು ಕಡೆ ಹುಡುಕಾಟ ನಡೆಸಿದರೂ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಇದರಿಂದ ಕಂಗಾಲಾದ ಪೋಷಕರು ಹೈಕೋರ್ಟ್‌ನಲ್ಲಿ ‘ಹೇಬಿಯಸ್ ಕಾರ್ಪಸ್’ ಅರ್ಜಿ ಸಲ್ಲಿಸಿದ ನಂತರ, ನ್ಯಾಯಾಲಯದ ನಿರ್ದೇಶನದಂತೆ ತನಿಖೆಯನ್ನು ಏಪ್ರಿಲ್ ತಿಂಗಳಲ್ಲಿ ಸಿಐಡಿಗೆ ಹಸ್ತಾಂತರಿಸಲಾಯಿತು.

ನಾಪತ್ತೆಯಾಗಲು ಕಾರಣವೇನು?

ಸಿಐಡಿ ತನಿಖೆಯಲ್ಲಿ ತಿಳಿದುಬಂದಂತೆ, ಪರೀಕ್ಷಾ ಭಯ ಮತ್ತು ಮನೆಯಲ್ಲಿ ತಮಗಾಗುತ್ತಿದ್ದ ಕಡೆಗಣನೆಯ ಭಾವನೆಯಿಂದ ಬೇಸತ್ತು ಇಬ್ಬರೂ ಮನೆ ತೊರೆದಿದ್ದರು. ಮೈಸೂರು ಮತ್ತು ಚಾಮರಾಜನಗರದ ದೇವಾಲಯಗಳಿಗೆ ಭೇಟಿ ನೀಡಿದ ನಂತರ ಅವರು ಮಲೆ ಮಹದೇಶ್ವರ ಬೆಟ್ಟ ತಲುಪಿದ್ದರು. ಅಲ್ಲಿ ಜೀವನ ಕೊನೆಗೊಳಿಸುವ ಆಲೋಚನೆಯಲ್ಲಿದ್ದಾಗ, ಪರಿಚಯವಾದ ಯುವಕರು ಅವರಿಗೆ ಧೈರ್ಯ ತುಂಬಿ ಆ ನಿರ್ಧಾರದಿಂದ ಹಿಂದೆ ಸರಿಯುವಂತೆ ಮಾಡಿದ್ದರು.

ಬಳಿಕ, ತಮಗೆ ಯಾರೂ ಇಲ್ಲವೆಂದು ಹೇಳಿಕೊಂಡಿದ್ದ ತನಿಷ್ಕಾ, ಕನಕಪುರ ತಾಲೂಕಿನ ಯುವಕನೊಬ್ಬನನ್ನು ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ಆತನ ಗ್ರಾಮದಲ್ಲಿ ವಾಸಿಸುತ್ತಿದ್ದಳು. ಸದ್ಯ ಆಕೆ ಗರ್ಭಿಣಿಯಾಗಿದ್ದಾಳೆ.

ಪ್ರಕರಣ ಭೇದಿಸಿದ್ದು ಒಟಿಪಿ!

ಸಾಕಷ್ಟು ದಿನಗಳಿಂದ ಯುವತಿಯರ ಸುಳಿವು ಸಿಗದಿದ್ದಾಗ, ಸಿಐಡಿ ಅಧಿಕಾರಿಗಳು ತನಿಷ್ಕಾಳ ಆಧಾರ್ ವಿವರಗಳ ಮೇಲೆ ತಾಂತ್ರಿಕ ನಿಗಾ ಇಟ್ಟಿದ್ದರು. ಇತ್ತೀಚೆಗೆ ಆಕೆ ಸರ್ಕಾರಿ ಕಲ್ಯಾಣ/ಆರೋಗ್ಯ ಯೋಜನೆಯೊಂದರ ಪ್ರಯೋಜನ ಪಡೆಯಲು ತನ್ನ ಆಧಾರ್ ಕಾರ್ಡ್ ವಿವರಗಳನ್ನು ನಮೂದಿಸಿ, ಪತಿಯ ಮೊಬೈಲ್ ಸಂಖ್ಯೆಗೆ ಒಟಿಪಿ (One Time Password) ಬರುವಂತೆ ಮಾಡಿದ್ದಳು. ಈ ಆಧಾರ್ ಅಪ್‌ಡೇಟ್ ಮಾಹಿತಿಯ ಸುಳಿವು ಸಿಐಡಿಗೆ ಸಿಗುತ್ತಿದ್ದಂತೆ, ಆ ಮೊಬೈಲ್ ಸಂಖ್ಯೆಯ ಜಾಡು ಹಿಡಿದು ಕನಕಪುರದ ಗ್ರಾಮಕ್ಕೆ ತೆರಳಿದ ಪೊಲೀಸರು ತನಿಷ್ಕಾಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಹೈಕೋರ್ಟ್ ಮುಂದೆ ಹಾಜರುಪಡಿಸಿದ ಬಳಿಕ ಪೋಷಕರಿಗೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.

ಸದ್ಯ, ಸಿಐಡಿ ಪೊಲೀಸರು ತನಿಷ್ಕಾಳನ್ನು ಪತ್ತೆ ಹಚ್ಚಿದ್ದಾರೆ. ಆದಾಗ್ಯೂ, ಆಕೆಯ ಸ್ನೇಹಿತೆ ತೇಜಸ್ವಿನಿ ಇನ್ನೂ ಪತ್ತೆಯಾಗಿಲ್ಲ!

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ...

ರಾಯಚೂರು | ಮೀಸಲಾತಿ ಬದಲಾವಣೆಗೆ 150ಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ!

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಕುರಿತು...

ಸಶಸ್ತ್ರ ಪಡೆಗಳಿಗೆ 2.12 ಲಕ್ಷ ಕೋಟಿ ರೂ. ವೆಚ್ಚದ ಶಸ್ತ್ರಾಸ್ತ್ರ ಖರೀದಿ: ರಕ್ಷಣಾ ಮಂಡಳಿ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿಯು (DAC)...