ಗಣೇಶೋತ್ಸವಕ್ಕೆ ಬೆಸ್ಕಾಂನಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ, ಸುರಕ್ಷತಾ ಗೈಡ್‌ಲೈನ್ಸ್‌ ಪ್ರಕಟ

Date:

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ.

- Advertisement -

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ.

ಸುರಕ್ಷತಾ ಕ್ರಮಗಳು

  • ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.
  • ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
  • ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.
  • ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.
  • ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.
  • ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.
  • ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

ತಾತ್ಕಲಿಕ ಸಂಪರ್ಕದ ಮಾಹಿತಿ

  • ತಾತ್ಕಲಿಕ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವಾಗ, ಎಲ್ಲಾ ಸಂಬಂಧಿತ (ಬಿಬಿಎಂಪಿ/ಬಿಡಿಎ/ಗ್ರಾಮ ಪಂಚಾಯಿತಿ/ಆರಕ್ಷಕ ಠಾಣೆ ಹಾಗೂ ಇನ್ನಿತರ) ಪ್ರಾಧಿಕಾರಗಳಿಂದ ನಿರಾಕ್ಷೇಪಣಾ ಪತ್ರ ಪಡೆದಿರಬೇಕು.
  • ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರ ಪಡೆದ ನಂತರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಥವಾ ಸಹಾಯಕ ಇಂಜಿನಿಯರ್‌ಗಳು ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಲು ನಿರ್ಮಾಣ ಮಾಡಿರುವ ಪೆಂಡಾಲ್ ಅಥವಾ ಸಮಾರಂಭ ಸ್ಥಳದ ಸುರಕ್ಷತೆಯನ್ನು ಖಾತ್ರಿ ಪಡಿಸುತ್ತಾರೆ.
  • ವೈರಿಂಗ್ ಸುರಕ್ಷತೆ, ಎಂ.ಸಿ.ಬಿ ಮತ್ತು ಇಐಎ ಅಳವಡಿಕೆಯ ಬಗ್ಗೆ ನೋಂದಾಯಿತ ವಿದ್ಯುತ್ ಗುತ್ತಿಗೆದಾರರಿಂದ ವೈರಿಂಗ್ ಸಮಾಪನ ವರದಿಯನ್ನು ಪಡೆದು ಸ್ಥಳ ಪರಿಶೀಲಿಸಿದ ನಂತರ ಸಂಪರ್ಕ ಕಲ್ಪಿಸಲಾಗುವುದು.
  • ತಾತ್ಕಾಲಿಕ ವಿದ್ಯುತ್ ಸಂಪರ್ಕದ ನಿರೀಕ್ಷಿತ ಸಮಯ ಮುಗಿದ ಬಳಿಕ ಅಂತಿಮ ರೀಡಿಂಗ್ ನಮೂದಿಸಿ ಮಾಪಕ ವಾಪಸ್ ನೀಡಬೇಕು.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...