ಕೈದಿಗಳಿಗೆ ರಾಜಾತಿಥ್ಯ | ಉನ್ನತ ಮಟ್ಟದ ಸಮಿತಿ ರಚನೆ, ತನಿಖೆಗೆ ಗೃಹ ಸಚಿವ ಪರಮೇಶ್ವರ್‌ ಆದೇಶ

Date:

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದ್ದು, ಪ್ರಕರಣವನ್ನು ತನಿಖೆ ನಡೆಸಲು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ.

- Advertisement -

ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ, ಸಂದೀಪ್ ಪಾಟೀಲ್, ಅಮರನಾಥ್ ರೆಡ್ಡಿ, ರಿಷ್ಯಂತ್ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಒಂದು ತಿಂಗಳಲ್ಲಿ ತನಿಖೆ ನಡೆಸಿ ಸಮಗ್ರ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರಕರಣ ಕುರಿತು ಪರಮೇಶ್ವರ್‌ ಅವರು ಸೋಮವಾರ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡ ಅವರು, “ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲವು ಕಾನೂನು ಬಾಹಿರ ಚಟುವಟಿಕೆಗಳು ನಡೆದಿವೆ ಎಂದು ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗಿವೆ. ಪ್ರಸಾರವಾಗಿರುವ ವಿಡಿಯೋ ಕುರಿತು ಪರಿಶೀಲಿಸಿದ್ದೇವೆ” ಎಂದರು.

“ಮುಖ್ಯವಾದ ಕೆಲವು ವಿಡಿಯೋಗಳು 2023ರಲ್ಲಿ ನಡೆದಿವೆ. ಒಂದೆರಡು ವಿಡಿಯೋಗಳು 3-4 ತಿಂಗಳ ಹಿಂದೆ ನಡೆದಿವೆ. ಈ ಎಲ್ಲ ವಿಡಿಯೋಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಲೋಪಗಳ ಕುರಿತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಆ‌ರ್.ಹಿತೇಂದ್ರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ” ಎಂದು ತಿಳಿಸಿದರು.

“ಸಮಿತಿಯಲ್ಲಿ ಪೊಲೀಸ್ ಮಹಾನಿರ್ದೇಶಕ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಾದ ಅಮರನಾಥ ರೆಡ್ಡಿ ಮತ್ತು ಸಿ.ಬಿ. ರಿಷ್ಯಂತ್ ಸದಸ್ಯರಾಗಿದ್ದಾರೆ. ರಾಜ್ಯದಲ್ಲಿ ಪ್ರಮುಖ ಕಾರಾಗೃಹಗಳು ಇರುವ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಮಿತಿಯ ಸಹ-ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ” ಎಂದು ಹೇಳಿದರು.

ಇಬ್ಬರು ಅಮಾನತು, ಓರ್ವ ಅಧಿಕಾರಿ ವರ್ಗಾವಣೆ

“ಬೆಂಗಳೂರು ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಕೆ. ಸುರೇಶ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಸೂಪರಿಂಟೆಂಡೆಂಟ್ ಇಮಾಮ್‌ಸಾಬ್ ಮ್ಯಾಗೇರಿ ಮತ್ತು ಸಹಾಯಕ ಸೂಪರಿಂಟೆಂಡೆಂಟ್ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಲಾಗಿದೆ. ಇನ್ಮುಂದೆ ಪರಪ್ಪನ ಅಗ್ರಹಾರ ಜೈಲಿನ ಉಸ್ತುವಾರಿಯನ್ನು ಐಪಿಎಸ್ ಅಧಿಕಾರಿಯೊಬ್ಬರು ವಹಿಸಿಕೊಳ್ಳಬೇಕೆಂದು ನಿರ್ಧರಿಸಲಾಗಿದೆ. ಜೈಲಿನಲ್ಲಿರುವ ಎಲ್ಲ ಸಿಸಿಟಿವಿ ಕ್ಯಾಮೆರಾಗಳನ್ನು ಸಂಪರ್ಕಿಸುವ ಕಮಾಂಡ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು” ಎಂದು ಪರಮೇಶ್ವರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...