ಬಿಡದಿ ಟೌನ್‌ಶಿಪ್ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚರ್ಚೆಗೆ ಆಹ್ವಾನಿಸಿದ್ದಾರೆ. ಈ ಕುರಿತು ಸಮಾಲೋಚನೆ ನಡೆಸಲು ಇಂದು (ಜೂನ್ 22) ಮುಖ್ಯಮಂತ್ರಿಗಳು ಅಧಿಕೃತ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿಗಳು ಬರೆದಿರುವ ಪತ್ರದಲ್ಲಿ, “ತಾವು ಪ್ರಾರಂಭಿಸಿದ ಬಿದದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಜೊತೆ ಚರ್ಚಿಸಲು ಉತ್ಸುಕನಾಗಿದ್ದೇನೆ” ಎಂದು ತಿಳಿಸಿದ್ದಾರೆ. ಜೂನ್ 26ರಂದು ಬೆಳಿಗ್ಗೆ 11.00 ಗಂಟೆಗೆ ವಿಧಾನಸೌಧದಲ್ಲಿ ಈ ಕುರಿತು ಸಭೆಯನ್ನು ಆಯೋಜಿಸಲಾಗಿದೆ. ಸಭೆಗೆ ಆಗಮಿಸುವಾಗ ತಮ್ಮ ತಂಡದ ಐದು ಜನ ಪ್ರತಿನಿಧಿಗಳೊಂದಿಗೆ ಬರುವಂತೆ ಕುಮಾರಸ್ವಾಮಿ ಅವರನ್ನು ಸಿಎಂ ಕೋರಿದ್ದಾರೆ.
ಇದನ್ನು ಓದಿದ್ದೀರಾ? ಸಾರ್ವಜನಿಕರಿಂದ ಆಕ್ಷೇಪಣೆ: ಬೆಂಗಳೂರಿನ 27 ವಾರ್ಡ್‌ಗಳ ಮತದಾರರ ಪಟ್ಟಿ ‘SIR’ಗೆ ಆದೇಶ
2006ರಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ‘ಬಿಡದಿ ಟೌನ್‌ಶಿಪ್’ ಯೋಜನೆಗೆ ಅಡಿಪಾಯ ಹಾಕಲಾಗಿತ್ತು. ಬಿಡದಿ ಮತ್ತು ರಾಮನಗರ ಸುತ್ತಮುತ್ತಲಿನ ಸುಮಾರು 9,000 ಎಕರೆಗೂ ಹೆಚ್ಚು ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕೃಷಿ ಭೂಮಿ ಕಿತ್ತುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ರೈತರು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಈ ಯೋಜನೆ ಮುಂದಕ್ಕೆ ಹೋಗಿರಲಿಲ್ಲ. ಇದೀಗ ಎರಡು ದಶಕಗಳ ಬಳಿಕ, ಈ ವಿಚಾರ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.




