ಬಿಡದಿ ಟೌನ್‌ಶಿಪ್ ವಿವಾದ: ವಿಧಾನಸೌಧದ ಬದಲು ರೈತರ ಮಧ್ಯೆ ಸಭೆ ನಡೆಸಿ; ಸಿಎಂಗೆ ಎಚ್‌ಡಿಕೆ ಪ್ರತ್ಯುತ್ತರ

Date:

ಬಿಡದಿ ಸ್ಮಾರ್ಟ್ ಸಿಟಿ (ಟೌನ್‌ಶಿಪ್) ಯೋಜನೆಯ ಕುರಿತು ಚರ್ಚಿಸಲು ವಿಧಾನಸೌಧದ ಎಸಿ ಕೊಠಡಿಯೊಳಗೆ ಸಭೆ ನಡೆಸುವ ಬದಲು, ಬಾಧಿತ ರೈತರ ಸಮ್ಮುಖದಲ್ಲೇ ಬಹಿರಂಗ ಸಭೆ ಕರೆಯುವಂತೆ ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದ್ದಾರೆ. ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜೂನ್ 26ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಸಲು ಆಹ್ವಾನಿಸಿ ಡಿ.ಕೆ. ಶಿವಕುಮಾರ್ ಬರೆದಿದ್ದ ಪತ್ರಕ್ಕೆ ಸೋಮವಾರ (ಜೂನ್ 22) ಪ್ರತ್ಯುತ್ತರ ನೀಡಿರುವ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

- Advertisement -

ಬಿಡದಿ ಸಮಗ್ರ ಉಪನಗರ ಯೋಜನೆಯ ಅನುಷ್ಠಾನದಿಂದ ರಾಮನಗರ ತಾಲೂಕಿನ ಬಿಡದಿ ಹೋಬಳಿಯ ಎಂಟು ಗ್ರಾಮಗಳು ಹಾಗೂ ಹಾರೋಹಳ್ಳಿ ತಾಲೂಕಿನ ಒಂದು ಗ್ರಾಮದ ರೈತರು, ಗ್ರಾಮಸ್ಥರು ಮತ್ತು ಪಾಲುದಾರರು ತೀವ್ರ ಸಂಕಷ್ಟ ಎದುರಿಸಲಿದ್ದಾರೆ. ಅಲ್ಲದೆ, ಈ ಭಾಗದಲ್ಲಿ ಅಪಾರ ಪ್ರಮಾಣದ ಪರಿಸರ ನಾಶವಾಗಲಿದೆ. ಈ ಹಿನ್ನೆಲೆಯಲ್ಲಿ ಕೇವಲ ಐದಾರು ಜನರೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಸಭೆ ಮಾಡುವುದು ಬೇಡ, ಸಾರ್ವಜನಿಕ ವೇದಿಕೆಯಲ್ಲಿಯೇ ಮುಕ್ತ ಚರ್ಚೆಯಾಗಬೇಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ಟೌನ್‌ಶಿಪ್ ಯೋಜನೆಯ ರಚನೆ ಹಾಗೂ ಅನುಷ್ಠಾನದಲ್ಲಿ ತಮಗೆ ಯಾವುದೇ ವೈಯಕ್ತಿಕ ಹಿತಾಸಕ್ತಿಯಿಲ್ಲ ಎಂದು ಅವರು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಮನಗರ ಮತ್ತು ಹಾರೋಹಳ್ಳಿ ಭಾಗದ ರೈತರ ಬದುಕು ಹಾಗೂ ಆ ಭಾಗದ ಪರಿಸರ ರಕ್ಷಣೆಯಷ್ಟೇ ತಮ್ಮ ಮತ್ತು ತಮ್ಮ ಪಕ್ಷದ ಮುಖ್ಯ ಉದ್ದೇಶವಾಗಿದೆ. ರೈತರು ಮತ್ತು ಸಂತ್ರಸ್ತರನ್ನು ಹೊರಗಿಟ್ಟು ವಿಧಾನಸೌಧದಲ್ಲಿ ನಡೆಸುವ ಯಾವುದೇ ರಹಸ್ಯ ಸಭೆಯಿಂದ ಬಾಧಿತ ಪ್ರದೇಶದ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಮತ್ತು ಅಂತಹ ಸಭೆಗಳು ಫಲಪ್ರದವಾಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಬಿಡದಿ ಟೌನ್‌ಶಿಪ್ ವಿವಾದ: ಕೇಂದ್ರ ಸಚಿವ ಎಚ್‌ಡಿಕೆಗೆ ಚರ್ಚೆಗೆ ಆಹ್ವಾನಿಸಿದ ಸಿಎಂ

ಜೂನ್ 26ರಂದು ತಮಗೆ ಪೂರ್ವ ನಿಗದಿತ ಕಾರ್ಯಕ್ರಮಗಳಿರುವುದರಿಂದ, ಅಂದು ವಿಧಾನಸೌಧದ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಆದ್ದರಿಂದ, ಆ ದಿನಾಂಕದ ಬದಲಾಗಿ ಜೂನ್ 27ರಂದು ಸಭೆ ನಿಗದಿಪಡಿಸುವಂತೆ ಅವರು ಕೋರಿದ್ದಾರೆ. ಈ ಸಭೆಯನ್ನು ಬಿಡದಿ ಅಥವಾ ಭೈರಮಂಗಲದಲ್ಲಿ ಸೂಕ್ತ ಸಾರ್ವಜನಿಕ ಸ್ಥಳವನ್ನು ನಿಗದಿಪಡಿಸಿ, ಯೋಜನೆಯಿಂದ ಮನೆ-ಮಠ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರು, ಕೃಷಿ ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಸ್ಥರ ಸಮ್ಮುಖದಲ್ಲೇ ಆಯೋಜಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ನಿಮಗೆ ನಿಜಕ್ಕೂ ರೈತರ ಮೇಲೆ ಕಾಳಜಿಯಿದ್ದರೆ ಬಿಡದಿಯ ಭೈರಮಂಗಲದ ಸಾರ್ವಜನಿಕ ವೇದಿಕೆಗೆ ಬನ್ನಿ” ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ. ರೈತ ವಿರೋಧಿ ಟೌನ್ ಶಿಪ್ ಯೋಜನೆಯಿಂದ ನೊಂದಿರುವ ಸಾವಿರಾರು ರೈತರು, ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಕಳೆದ 470ಕ್ಕೂ ಹೆಚ್ಚು ದಿನಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ಅವರ ಎದುರೇ ಮುಕ್ತವಾಗಿ ಹಾಗೂ ಬಹಿರಂಗವಾಗಿ ಚರ್ಚೆ ನಡೆಯಲಿ, ನಿಮ್ಮ ಆಗಮನದ ನಿರೀಕ್ಷೆಯಲ್ಲಿ ನೊಂದ ರೈತರಿದ್ದಾರೆ ಎಂದು ಪತ್ರದ ಮೂಲಕ ಡಿ.ಕೆ. ಶಿವಕುಮಾರ್ ಅವರಿಗೆ ತಮ್ಮ ಆಹ್ವಾನವನ್ನು ಮುಂದಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ದ್ವಿಚಕ್ರ ವಾಹನದಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ನಾಲ್ವರು ವಶಕ್ಕೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬಿಸಗೋಡ ರಸ್ತೆ ಮಾರ್ಗದಲ್ಲಿರುವ ಸ್ಮಶಾನದ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ ‘ಮೋದಿ ಜಪ’ದ ಸಂಸದರು

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ...

ಸೆ.25ಕ್ಕೆ ಚುನಾವಣಾ ಕಚೇರಿಗಳಿಗೆ ಕಾಂಗ್ರೆಸ್ ಮುತ್ತಿಗೆ: ಸಿಇಸಿ ಗ್ಯಾನೇಶ್ ಕುಮಾರ್ ಬಂಧನ, ವಜಾಕ್ಕೆ ಆಗ್ರಹ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ತಕ್ಷಣವೇ ಬಂಧಿಸಬೇಕು,...