ಬಿಡದಿ ಟೌನ್‌ಶಿಪ್‌ | ‘ರೈತರು ಪರಿಹಾರ ಪಡೆಯಲು ಒಪ್ಪಿದ್ದಾರೆ, ಪಾದಯಾತ್ರೆ ಸಾಂಕೇತಿಕ ಅಷ್ಟೇ’: ವಿಜಯೇಂದ್ರ ಹೇಳಿಕೆ ವೈರಲ್

Date:

ರಾಮನಗರದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಗೆ ಬಿಜೆಪಿ ಬೆಂಬಲ ನೀಡಿದೆ. ಆದಾಗ್ಯೂ, ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಡಿರುವ ಮಾತುಗಳು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿವೆ. ಕಾರ್ಯಕ್ರಮವೊಂದರಲ್ಲಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಪಿಸುಗುಟ್ಟಿರುವ ವಿಜಯೇಂದ್ರ, “ಪ್ರತಿಭಟನೆ ಮಾಡುತ್ತಿದ್ದ ರೈತರೂ ಪರಿಹಾರಕ್ಕೆ ಒಪ್ಪಿದ್ದಾರೆ, ಬಿಡದಿ ವಿರುದ್ಧದ ಪಾದಯಾತ್ರೆ ಕೇವಲ ಸಾಂಕೇತಿಕ (ಸಿಂಬಾಲಿಕ್) ಅಷ್ಟೇ” ಎಂದಿದ್ದಾರೆ.

- Advertisement -

ಶಿಕಾರಿಪುರದಲ್ಲಿ ಅಧಿಕಾರಿಗಳ ಜೊತೆ ನಡೆಸ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮತ್ತು ವಿಜಯೇಂದ್ರ ವೇದಿಕೆಯಲ್ಲಿದ್ದರು. ಈ ವೇಳೆ, ಬಿಡದಿ ಟೌನ್‌ಶಿಪ್ ವಿರುದ್ಧ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯ ಕುರಿತು ವಿಜಯೇಂದ್ರ ಅವರನ್ನು ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಅದಕ್ಕೆ ನೇರವಾಗಿ ಪ್ರತಿಕ್ರಿಯಿಸಿದ ವಿಜಯೇಂದ್ರ, “ಅದು ಸಾಂಕೇತಿಕ ಅಷ್ಟೇ. ಯಾರ್ಯಾರು ಹೋರಾಟಕ್ಕೆ ಬಂದಿದ್ದಾರೋ ಅವರೆಲ್ಲರೂ ಪರಿಹಾರ ಪಡೆಯುತ್ತಿದ್ದಾರೆ. ಇದು ರಿಯಲ್ ಎಸ್ಟೇಟ್‌ನವರ ವಿಚಾರ ಎಂಬುದು ನಿಮಗೂ ಗೊತ್ತಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಸಭೆಯಲ್ಲಿ ಮೈಕ್‌ ಆನ್‌ ಇರುವುದನ್ನು ಗಮನಿಸದೆ ವಿಜಯೇಂದ್ರ ಮಾತನಾಡಿರುವ ಮಾತುಗಳು ಮೈಕ್‌ ಮೂಲಕ ಎಲ್ಲರಿಗೂ ಕೇಳಿಸಿದೆ. ಅಲ್ಲದೆ, ಅಲ್ಲಿದ್ದವರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ದೋಸ್ತಿ ಪಕ್ಷವಾದ ಜೆಡಿಎಸ್‌ನ ಪಾದಯಾತ್ರೆಯ ನೈತಿಕತೆಯನ್ನೇ ಪ್ರಶ್ನಿಸುವಂತಿರುವ ವಿಜಯೇಂದ್ರ ಅವರ ಈ ಹೇಳಿಕೆಯು ಭಾರೀ ಸಂಚಲನ ಮೂಡಿದಿದೆ. ಇದೇ ಹೇಳಿಕೆಯನ್ನು ಇಟ್ಟುಕೊಂಡು ಬಿಜೆಪಿ-ಜೆಡಿಎಸ್‌ ವಿರುದ್ಧ ಆಡಳಿತಾರೂಢ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಮಧು ಬಂಗಾರಪ್ಪ ಮತ್ತು ವಿಜಯೇಂದ್ರರ ಸಂಭಾಷಣೆಯ ವಿಡಿಯೋ ತುಣುಕನ್ನು ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಮೈತ್ರಿಕೂಟದ ಕಾಲೆಳೆದಿದೆ. “ಯೋಜನೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ರೈತರೇ ಸರ್ಕಾರದ ಪರಿಹಾರಕ್ಕೆ ಒಪ್ಪಿಕೊಂಡಿದ್ದಾರೆ ಮತ್ತು ಈ ಹೋರಾಟ ಕೇವಲ ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ್ದು ಎಂದು ಸ್ವತಃ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಅವರೇ ಒಪ್ಪಿಕೊಂಡಿದ್ದಾರೆ. ಹೀಗಿರುವಾಗ, ಎಚ್.ಡಿ ಕುಮಾರಸ್ವಾಮಿ ಅವರು ನಡೆಸುತ್ತಿರುವ ಪಾದಯಾತ್ರೆ ಯಾವ ಪುರುಷಾರ್ಥಕ್ಕಾಗಿ? ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ನೆಲೆಗಾಗಿಯೋ ಅಥವಾ ಕುಮಾರಸ್ವಾಮಿ ಅವರ ಬೇನಾಮಿ ಆಸ್ತಿಯನ್ನು ರಕ್ಷಿಸಿಕೊಳ್ಳಲೋ” ಎಂದು ಪ್ರಶ್ನಿಸಿದೆ.

ಅಂದಹಾಗೆ, ಬಿಡದಿ ಟೌನ್‌ಶಿಪ್ ವಿರುದ್ಧ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಡೀ ಯೋಜನೆಯನ್ನೇ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ. ಸದ್ಯಕ್ಕೆ ಯೋಜನೆಯನ್ನು ಸ್ಥಗಿತಗೊಳಿಸಿರುವ ಸರ್ಕಾರ, ಯಾರು ತಾವೇಗಿಯೇ ಭೂಮಿ ಕೊಡುತ್ತಾರೆಯೋ, ಆ ರೈತರಿಗೆ ಪರಿಹಾರ ಕೊಟ್ಟು ಭೂಮಿ ಸ್ವಾಧೀನ ಮಾಡಿಕೊಳ್ಳುತ್ತೇವೆಂದು ಹೇಳುತ್ತಿದೆ. ಅಲ್ಲದೆ, ಅಲ್ಲಿನ ಬಹುತೇಕ ರೈತರು ಭೂಮಿ ಕೊಡಲು ಒಪ್ಪಿದ್ದಾರೆಂದು ಈವರೆಗೆ ಕಾಂಗ್ರೆಸ್‌ ಮತ್ತು ಸರ್ಕಾರದ ಹಲವು ಸಚಿವರು ಹೇಳುತ್ತಿದ್ದರು. ಇದೀಗ, ಸರ್ಕಾರ ಧಾಟಿಯಲ್ಲಿಯೇ ಬಿಜೆಪಿಗರು ಮಾತನಾಡಲಾರಂಭಿಸಿದ್ದಾರೆ. ಆದರೆ, ರೈತರು ಮಾತ್ರ ತಮ್ಮ ಭೂಮಿಯನ್ನು ಬಿಟ್ಟುಕೊಡುವ ಮಾತೇ ಇಲ್ಲ. ನಾವು ಪರಿಹಾರ ಪಡೆಯಲು ಒಪ್ಪಿಯೂ ಇಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾವೇರಿ ವಿವಾದ: 20 ಟಿಎಂಸಿ ಕೊರತೆ ಎಂದ ತಮಿಳುನಾಡು, ತೀವ್ರ ಬರಗಾಲದ ಸಂಕಷ್ಟ ಬಿಚ್ಚಿಟ್ಟ ಕರ್ನಾಟಕ

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...