ಬಿಡದಿ ಟೌನ್‌ಶಿಪ್ | ರೈತ ಹೋರಾಟಕ್ಕೆ ಜಯ: ಬಲವಂತದ ಭೂಸ್ವಾಧೀನವಿಲ್ಲ ಎಂದ ಸಿಎಂ ಡಿಕೆಶಿ

Date:

ತೀವ್ರ ಜನಾಕ್ರೋಶ ಮತ್ತು ರೈತರ ಪ್ರತಿಭಟನೆಗೆ ಕಾರಣವಾಗಿದ್ದ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಸ್ಥಗಿತಗೊಳಿಸುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಬಲವಂತದ ಭೂಸ್ವಾಧೀನಕ್ಕೆ ಮುಂದಾಗುವುದಿಲ್ಲ. ಸ್ವಯಂಪ್ರೇರಿತರಾಗಿ ಭೂಮಿ ಕೊಡುವವರು ಕೊಡಬಹುದು. ಟೌನ್‌ಶಿಪ್ ಯೋಜನೆಯ ಸಾಧಕ-ಬಾಧಕಗಳ ವಿಶ್ಲೇಷಣೆಗೆ ಸಮಿತಿ ರಚಿಸಲಾಗುವುದು ಎಂದು ಹೇಳಿದ್ದಾರೆ.  

- Advertisement -

ವಿಧಾನಸೌಧದಲ್ಲಿ ಬುಧವಾರ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ ಶಿವಕುಮಾರ್, “ಬಿಡದಿ ಭೂಸ್ವಾಧೀನದ ವಿಚಾರದಲ್ಲಿ ಸರ್ಕಾರವು ದೇವನಹಳ್ಳಿ ಮಾದರಿಯನ್ನು ಅನುಸರಿಸಲು ತೀರ್ಮಾನಿಸಿದೆ. ರೈತರು ತಾವಾಗಿಯೇ ಒಪ್ಪಿ ಜಮೀನು ನೀಡಿದರೆ ಮಾತ್ರ ಪರಿಹಾರ ನೀಡಿ ಸ್ವಾಧೀನಪಡಿಸಿಕೊಳ್ಳಲಾಗುವುದು. ಯಾರನ್ನೂ ಬಲವಂತವಾಗಿ ಒಕ್ಕಲೆಬ್ಬಿಸುವ ಅಗತ್ಯ ಸರ್ಕಾರಕ್ಕಿಲ್ಲ. ಬೆಂಗಳೂರಿನ ಸುತ್ತಮುತ್ತ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಯೋಜನೆಗಳಿಗೆ ಜಮೀನು ನೀಡಿದ ರೈತರ ಭೂಮಿಯ ಬೆಲೆ ಇಂದು ಗಗನಕ್ಕೇರಿದೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ರೈತ ಮಹಿಳೆಯರ ಬದುಕನ್ನು ಕಸಿದುಕೊಳ್ಳುವ ಯಾವುದೇ ಕೆಲಸವನ್ನು ಈ ಸರ್ಕಾರ ಮಾಡುವುದಿಲ್ಲ. ಬಿಡದಿ ಟೌನ್‌ಶಿಪ್ ಯೋಜನೆಯ ಅನುಷ್ಠಾನ ಮತ್ತು ಅದರ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು. ಈ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ತೀರ್ಮಾನ ಕೈಗೊಳ್ಳಲಿದ್ದು, ಆ ಸಮಿತಿ ನೀಡುವ ಅಂತಿಮ ವರದಿಯ ಆಧಾರದ ಮೇಲೆಯೇ ಯೋಜನೆಯ ಮುಂದಿನ ಭವಿಷ್ಯವನ್ನು ನಿರ್ಧರಿಸಲಾಗುವುದು” ಎಂದು ಶಿವಕುಮಾರ್ ಪ್ರಕಟಿಸಿದರು.

“ಬಿಡದಿಯಲ್ಲಿ ಇತ್ತೀಚೆಗೆ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ನಡೆದ ಹಲ್ಲೆಯ ಘಟನೆಯು ತಮಗೆ ತೀವ್ರ ಬೇಸರ ತಂದಿದೆ. ರಾಜಕೀಯ ಪ್ರೇರಿತ ಕುಮ್ಮಕ್ಕಿನಿಂದಾಗಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲಾಗಿದ್ದು, ರೈತರನ್ನು ತಪ್ಪು ದಾರಿಗೆ ಎಳೆಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ” ಎಂದು ಆರೋಪಿಸಿದರು.

“ನಾನು ಹುಟ್ಟಾ ರೈತನ ಮಗ. ರೈತರ ಶ್ರಮ, ಭೂಮಿಯ ಬೆಲೆ ಮತ್ತು ಅವರ ಬದುಕಿನ ಬಗ್ಗೆ ತಮಗೆ ವೈಯಕ್ತಿಕ ಅನುಭವವಿದೆ. ನಾನು ಮುಖ್ಯಮಂತ್ರಿಯಾಗಿರುವುದನ್ನು ಮತ್ತು ನನಗೆ ಸಿಗುತ್ತಿರುವ ಸಾರ್ವಜನಿಕ ಬೆಂಬಲವನ್ನು ಕೆಲವು ರಾಜಕೀಯ ವಿರೋಧಿಗಳಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಹಾಗಾಗಿಯೇ, ನನ್ನನ್ನು ಜೈಲಿಗೆ ಕಳುಹಿಸಲು ಹಲವು ವರ್ಷಗಳಿಂದ ನಿರಂತರ ಸಂಚು ರೂಪಿಸಲಾಗುತ್ತಿದೆ” ಕಿಡಿಕಾರಿದರು.

ಬಿಡದಿ ಟೌನ್‌ಶಿಪ್ ಯೋಜನೆಯ ಇತಿಹಾಸದ ಕುರಿತು ದಾಖಲೆಗಳನ್ನು ಪ್ರದರ್ಶಿಸಿದ ಡಿಕೆ ಶಿವಕುಮಾರ್, “ಇದು ನಮ್ಮ ವೈಯಕ್ತಿಕ ಕನಸಿನ ಯೋಜನೆಯಲ್ಲ. ಇದಕ್ಕೆ ನಾನು ಶಂಕುಸ್ಥಾಪನೆ ನೆರವೇರಿಸಿಲ್ಲ. ಇದರ ಪಿತಾಮಹ ಆಗುವ ಆಸೆಯೂ ನನಗಿಲ್ಲ. ಕೇವಲ ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ಮುನ್ನಡೆಯುತ್ತಿದ್ದೇವೆ” ಎಂದು ಪರೋಕ್ಷವಾಗಿ ಎಚ್‌.ಡಿ ಕುಮಾರಸ್ವಾಮಿ ಅವರಿಗೆ ಟಾಂಗ್ ಕೊಟ್ಟರು.

“2006ರ ಸೆಪ್ಟೆಂಬರ್ 23ರಂದು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಐದು ಉಪನಗರಗಳ ಸಮಗ್ರ ಅಭಿವೃದ್ಧಿಗೆ ತೀರ್ಮಾನ ಕೈಗೊಳ್ಳಲಾಗಿತ್ತು. ತದನಂತರ ಬಿಎಂಆರ್‌ಡಿಎ ವತಿಯಿಂದ ಪಿಪಿಪಿ ಮಾದರಿಯಲ್ಲಿ ಜಾಗತಿಕ ಟೆಂಡರ್ ಕರೆಯಲು ನಿರ್ಧರಿಸಲಾಗಿತ್ತು. ಅಂದು ಸಚಿವರಾಗಿದ್ದ ಆರ್ ಅಶೋಕ್ ಅವರೂ ಸಹ ಈ ಸಚಿವ ಸಂಪುಟದಲ್ಲಿದ್ದರು. 2006ರ ನವೆಂಬರ್ 20ರಂದು ಕುಮಾರಸ್ವಾಮಿ ಅವರೇ ಈ ಎಲ್ಲ ಖಾಸಗಿ ಜಮೀನುಗಳನ್ನು ಪೂರ್ವಾನುಮತಿಯಿಲ್ಲದೆ ಅಭಿವೃದ್ಧಿಪಡಿಸದಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ‘ರೆಡ್ ಝೋನ್’ ಎಂದು ಗುರುತಿಸಿದ್ದರು. ಆಸ್ತಿ ಹಾಗೂ ಮನೆಗಳನ್ನು ಒಕ್ಕಲೆಬ್ಬಿಸಲು ಪರಿಹಾರ ಘೋಷಿಸಿದ್ದಲ್ಲದೆ, ಖಾಸಗಿ ಡೆವಲಪರ್ ಡಿಎಲ್‌ಎಫ್ ಸಂಸ್ಥೆಯಿಂದ 400 ಕೋಟಿ ರೂಪಾಯಿ ಸೆಕ್ಯುರಿಟಿ ಡೆಪಾಸಿಟ್ ಪಡೆದು ರಿಯಲ್ ಎಸ್ಟೇಟ್‌ಗೆ ಅವಕಾಶ ಮಾಡಿಕೊಟ್ಟಿದ್ದರು” ಎಂದು ಶಿವಕುಮಾರ್ ವಿವರಿಸಿದರು.

 “2020ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗಲೂ ಅಶೋಕ್ ಅವರ ಸಮ್ಮುಖದಲ್ಲೇ ಎರಡನೇ ಬಾರಿ ಟೆಂಡರ್ ಕರೆಯಲಾಗಿತ್ತು” ಎಂದು ಅವರು ನೆನಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...