ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿದುಕೊಳ್ಳದಂತೆ ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

Date:

“ಫಲವತ್ತಾದ ಕೃಷಿ ಭೂಮಿಯನ್ನು ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್‌ ಯೋಜನೆ ರೈತ ವಿರೋಧಿ ಹಾಗೂ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶಕಾರಿ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು. ಯೋಜನೆಗಾಗಿ ಉದ್ದೇಶಿಸಲಾದ ಸುಮಾರು 9,640 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಬೇಕು” ಎಂದು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹಿಸಿದೆ.

- Advertisement -

ಸೋಮವಾರ (ಮೇ.18), ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ನಾಯಕರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ರಾಮನಗರ ಜಿಲ್ಲೆ ಬಿಡದಿ ಹೋಬಳಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ 25 ಗ್ರಾಮಗಳ ಸುಮಾರು 9,640 ಎಕರೆ ಕೃಷಿ ಭೂಮಿಯು ನೀರಾವರಿ ಹೊಂದಿರುವ ತೆಂಗು, ಅಡಿಕೆ, ಬಾಳೆ, ಮಾವು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆ ಬೆಳೆಗಳನ್ನು, ಬೆಳೆಯುತ್ತಿರುವ ಸಮೃದ್ಧ ಹಸಿರು ಪ್ರದೇಶವಾಗಿದೆ. ಇಂತಹ ಭೂಮಿಯನ್ನು ಸರ್ಕಾರ ವಶಪಡಿಸಿಕೊಳ್ಳಲು ಎಂದಿಗೂ ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡ ನೂರ್‌ ಶ್ರೀಧರ್‌ ಮಾತನಾಡಿ, “ಸರ್ಕಾರದ ರೈತ ವಿರೋಧಿ ನಡೆಯಿಂದಾಗಿ ಬಿಡದಿ ಮತ್ತೊಂದು ದೇವನಹಳ್ಳಿ ಹೋರಾಟ ಆಗಲಿದೆ. ಎರಡು ದಿನಗಳಾದರೆ ಸಿದ್ದರಾಮಯ್ಯ ಸರಕಾರಕ್ಕೆ ಮೂರು ವರ್ಷ ತುಂಬಲಿದೆ. ಬಿಡದಿ ಟೌನ್‌ಶಿಪ್ ಯೋಜನೆಗೆ ರೈತರು ಯಾವುದೇ ಕಾರಣಕ್ಕೂ ಭೂಮಿ ಬಿಡುವುದಿಲ್ಲ. ಸರ್ಕಾರ ರಾಜಧಾನಿಯನ್ನು ಬಂಡವಾಳಿಗರ ಬೆಂಗಳೂರು ಮಾಡಲಿಕ್ಕೆ ಹೊರಟಿದೆ. ಇದರ ವಿರುದ್ಧ ದೊಡ್ಡ ಹೋರಾಟ ನಡೆಯಬೇಕಾಗುತ್ತದೆ. ಬಂಡವಾಳಿಗರ ಪರ ಆಡಳಿತ ನಡೆಸಿದ್ದೇ ಆದಲ್ಲಿ, ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಖಂಡಿತವಾಗಿಯೂ ಅಧಿಕಾರ ಕಳೆದುಕೊಳ್ಳುತ್ತದೆ. ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೂಡಲೇ ಕೈ ಬಿಡಬೇಕು” ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.

ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ಕೃಷಿ ಪ್ರದೇಶವನ್ನು ನಾಶ ಮಾಡಿ ನಿರ್ಮಾಣಗೊಂಡ ಲೇಔಟ್ ಹಾಗೂ ಬಡಾವಣೆಗಳು ಅಗತ್ಯ ಮೂಲಭೂತ ಸೌಕರ್ಯಗಳು ಇಲ್ಲದೇ ರಿಯಲ್ ಎಸ್ಟೇಟ್ ಕಾಂಕ್ರೀಟ್ ಕಾಡಾನ್ನಾಗಿಸಿದೆ. ಲಕ್ಷಾಂತರ ನಿವೇಶನಗಳು, ನೂರಾರು ಅಪಾರ್ಟ್ಮೆಂಟ್‌ಗಳು ಹತ್ತಾರು ವರ್ಷಗಳಿಂದ ಖಾಲಿ ಬಿದ್ದಿವೆ. ಇಂತಹ ದುಸ್ಥಿತಿಯನ್ನು ವಿಸ್ತರಿಸಿ ಮಹಾನಗರದ ಜನ ಜೀವನವನ್ನು ಮತ್ತಷ್ಟು ಕಷ್ಟಕ್ಕೆ ಸಿಲುಕಿಸುವ ಬಿಡದಿ ಟೌನ್ ಎಲ್ಲ ನಾಗರಿಕರು ವಿರೋಧಿಸಬೇಕು” ಎಂದು ಆಗ್ರಹಿಸಿದರು.

“ಜಿಬಿಎ ಅನುಷ್ಠಾನಗೊಳಿಸುತ್ತಿರುವ ಬಿಡದಿ ಸಮಗ್ರ ಉಪ ನಗರ ಯೋಜನೆಗಾಗಿ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987ರ ಕಲಂ 17(1)ರ ಅಡಿಯಲ್ಲಿ 2025ರ ಮಾ.13 ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಿದ ತಕ್ಷಣವೇ ಸುಮಾರು 3,500ಕ್ಕೂ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರು ಈ ಭೂ ಸ್ವಾಧೀನಕ್ಕೆ ಒಪ್ಪಿಗೆ ಇಲ್ಲ ಎಂದು ಲಿಖಿತವಾಗಿ ಆಕ್ಷೇಪಣೆಗಳನ್ನು ಸಲ್ಲಿಸಿದ್ದಾರೆ. ಇದುವರೆಗೂ ಈ ಯಾವ ರೈತರ ಆಕ್ಷೇಪಣೆಗಳನ್ನು ಸರ್ಕಾರ ಆಲಿಸಿಲ್ಲ” ಎಂದು ಹೋರಾಟಗಾರ ಟಿ ಯಶವಂತ್‌ ಆಕ್ರೋಶ ವ್ಯಕ್ತಪಡಿಸಿದರು.

ಈ ಲೇಖನ ಓದಿದ್ದೀರಾ?: ಕನ್ನಡಿಗರೇ ಎಚ್ಚರ: ಎಸ್‌ಐಆರ್‌ – ಮತಪಟ್ಟಿ ಪರಿಶೀಲನೆಯಲ್ಲ, ಪೌರತ್ವ ಪರೀಕ್ಷೆ!

“ಈ ಪ್ರದೇಶವು ಜಿಬಿಎ ಗಡಿಗೆ ಹೊಂದಿಕೊಂಡಂತೆ ಇದ್ದು ಬೆಂಗಳೂರು ಮಹಾನಗರಕ್ಕೆ ಹಾಲು, ಹಣ್ಣು, ತರಕಾರಿ ಮುಂತಾದ ದಿನನಿತ್ಯದ ಅಗತ್ಯಗಳನ್ನು ಪೂರೈಸುವ ಅಮೂಲ್ಯ ಆಹಾರದ ಕಣಜವಾಗಿದೆ. ಇಲ್ಲಿನ ಎಲ್ಲ ಕೃಷಿ ಕುಟುಂಬಗಳು ತಮ್ಮ ಸಣ್ಣ ಹಿಡುವಳಿಯಲ್ಲೇ ಮಿಶ್ರ ಬೆಳೆ ಪದ್ದತಿಯನ್ನು ಅಳವಡಿಸಿಕೊಂಡು ಅಡಿಕೆ ತಟ್ಟೆ ತಯಾರಿಕೆ ಮುಂತಾದ ಕೃಷಿ ಆಧಾರಿತ ಸಣ್ಣ ಉದ್ದಿಮೆಗಳನ್ನು ಕಟ್ಟಿಕೊಂಡು ಉತ್ತಮ ಮಾರುಕಟ್ಟೆಯನ್ನು ಕಂಡುಕೊಂಡಿದ್ದಾರೆ. ಇಂತಹ ಸುಸ್ಥಿರ ಬದುಕಿನ ಮೇಲೆ ಬಲವಂತ ಹಾಗೂ ಅನ್ಯಾಯದ ಭೂ ಸ್ವಾಧೀನವನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ” ಎಂದು ಹೋರಾಟಗಾರರು ತಿಳಿಸಿದರು.

ಒಂದೂವರೆ ವರ್ಷದಿಂದ ವಿವಿಧ ಮಾದರಿಯಲ್ಲಿ ತಮ್ಮ ಬಲವಾದ ವಿರೋಧವನ್ನು ಇಲ್ಲಿನ ರೈತರು ದಾಖಲಿಸಿದ್ದು, 428ಕ್ಕೂ ಹೆಚ್ಚು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಾ ಬಂದಿದ್ದರೂ ಭಾಧಿತ ರೈತರ ಜೊತೆ ಯಾವುದೇ ಸಮಾಲೋಚನೆ ನಡೆಸದೇ ಸಂಪುಟ ಅನುಮೋದನೆ ನೀಡಿರುವುದು ರೈತರ ಪ್ರಜಾಪ್ರಭುತ್ವ ಹಕ್ಕುಗಳ ನಗ್ನ ಉಲ್ಲಂಘನೆ ಹಾಗೂ ಸರ್ವಾಧಿಕಾರಿ ಕ್ರಮ. ಕೂಡಲೇ ಸಿದ್ದರಾಮಯ್ಯ ಸರ್ಕಾರ ಈ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ, ಹೋರಾಟಗಾರರಾದ ಸಿದ್ದನಗೌಡ ಪಾಟೀಲ, ಪಿ.ಪಿ.ಅಪ್ಪಣ್ಣ, ಪ್ರಕಾಶ್ ಸೇರಿದಂತೆ ಬಿಡದಿ ಭಾಗದ ಅನೇಕ ರೈತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...