ಬಿಡದಿ ಟೌನ್ ಶಿಪ್‌ ಯೋಜನೆ | ನಾನು ಬಂದ ಮೇಲೆ ಯಾಕೆ ರೈತರ ಹೋರಾಟ: ಡಿ ಕೆ ಶಿವಕುಮಾರ್ ಪ್ರಶ್ನೆ

Date:

Advertisements

9 ಸಾವಿರ ಎಕರೆ ಪೈಕಿ 1 ಸಾವಿರಕ್ಕೂ ಹೆಚ್ಚು ಜಮೀನು ಈಗಾಗಲೇ ಕೆಐಎಡಿಬಿಗೆ ನೀಡಲಾಗಿದೆ. ಅದಕ್ಕೆ ರೈತರು ಪರಿಹಾರ ಸಹ ಪಡೆದಿದ್ದಾರೆ. ಆಗ ಹೋರಾಟ ಮಾಡದೆ ಈಗ ಯಾಕೆ? ಇದರಲ್ಲೂ 75% ಜನ ತಮಗೆ ಏನು ಪರಿಹಾರ ಬೇಕು ಎಂದು ಕೇಳಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬಿಡದಿ ಟೌನ್ ಶಿಪ್‌ಗೆ ಕೆಲವು ಪಂಚಾಯ್ತಿ ರೈತರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾಗರು ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ಈ ಯೋಜನೆ ನಾನು ಮಾಡಿದ್ದಲ್ಲ. ಕುಮಾರಸ್ವಾಮಿ ಅವರು ಮಾಡಿರುವುದು. ಅದನ್ನು ನಾನು ಡಿನೋಟಿಫಿಕೇಷನ್ ಮಾಡಲು ಬರಲ್ಲ. ರೈತರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇವೆ. ಅವತ್ತಿನಿಂದ ಹೋರಾಟ ಮಾಡದೇ, ನಾನು ಬಂದಾಗ ಮಾತ್ರ ಯಾಕೆ ಹೋರಾಟ ಮಾಡಬೇಕು” ಎಂದು ಪ್ರಶ್ನಿಸಿದರು.

ರೈತರನ್ನು ಕರೆದು ಚರ್ಚೆ ಮಾಡುತ್ತಿಲ್ಲ ಎಂದು ಕೇಳಿದಾಗ, “ರೈತರ ಜೊತೆ ಚರ್ಚೆ ಮಾಡುತ್ತೇನೆ. ಅವರನ್ನು ಕರೆಯುವುದಿಲ್ಲ. ನಾನೇ ಅವರ ಬಳಿ ಹೋಗಿ ಚರ್ಚೆ ಮಾಡುವೆ. ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಕೂಡ ನಮ್ಮ ರೈತರು” ಎಂದು ತಿಳಿಸಿದರು.

Advertisements

“ಇ.ಡಿ ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ. ನನ್ನ ಮೇಲೆ ಕೇಸ್ ಹಾಕಿ ತಿಹಾರ್ ಜೈಲಿಗೆ ಕಳುಹಿಸಿದರು. ನಂತರ ಆ ಕೇಸ್ ರದ್ದಾಯಿತು. ರಾಜಕೀಯ ಒತ್ತಡಕ್ಕೆ ಸಿಲುಕುವ ಬಗ್ಗೆ ಇ.ಡಿ ಪರಿಶೀಲನೆ ನಡೆಸಬೇಕು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಮೇಲ್ಮನವಿ ಸಲ್ಲಿಸುವ ಪ್ರಶ್ನೆ ಇರಲಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಮುಡಾ ವಿಚಾರದಲ್ಲಿ ಈ ರೀತಿ ಹೇಳಿರಬೇಕು” ಎಂದರು.

ಕೇಂದ್ರ ಸರ್ಕಾರ ಇ.ಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ ಎಂದು ಕೇಳಿದಾಗ, “ಈ ಕಾರಣಕ್ಕೆ ಈ ರೀತಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ. ಬಿಜೆಪಿ ನಾಯಕರ ಮೇಲೆ ಮಾತ್ರ ಇ.ಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ? ಕೇವಲ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಬರ್ಟ್ ವಾದ್ರಾ, ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಯಾಕೆ ಕೇಸ್ ಹಾಕಲಾಗುತ್ತಿದೆ. ಬಿಜೆಪಿಗೆ ಹೋದವರೆಲ್ಲಾ ಶುದ್ಧರೇ? ಇದೇ ಅಲ್ಲವೇ ಬಿಜೆಪಿ ವಾಷಿಂಗ್ ಮಷಿನ್” ಎಂದು ಹರಿಹಾಯ್ದರು.

ಟನಲ್ ಕಾರಿಡಾರ್ ಅಗತ್ಯವಿದೆಯೇ ಎಂಬ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, “ಪಾಪ ಸಣ್ಣ ಹುಡುಗ, ಅವರ ಪಕ್ಷದಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರಲ್ಲಾ ಅವರ ಮೂಲಕ ಸದನದಲ್ಲಿ ಚರ್ಚೆ ಮಾಡಿಸಲಿ” ಎಂದು ತಿರುಗೇಟು ನೀಡಿದರು.

ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಸಮಸ್ಯೆ ಏನು ಇಲ್ಲ. ನಮ್ಮ ಕಾರ್ಯಕರ್ತರು, ಸ್ಥಳೀಯ ನಾಯಕರು ಇಲ್ಲಿ ಜನರ ಸಂಪರ್ಕ ಸಾಧಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂದು ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ನೀಡುತ್ತೇವೆ. ಕೆಲವು ಅರ್ಜಿಗಳು ಪಿಂಚಣಿ, ಇ-ಖಾತಾ, ಜಿಎಸ್ ಟಿ ವಿಚಾರವಾಗಿ ಬಂದಿವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X