ಬಿಡದಿ ಟೌನ್‌ಶಿಪ್ | ರೈತರ ಅಹವಾಲು ಆಲಿಸಲು ಜುಲೈ 11ರಂದು ‘ಸಂಯುಕ್ತ ಹೋರಾಟ-ಕರ್ನಾಟಕ’ದಿಂದ ಬೃಹತ್ ಪಬ್ಲಿಕ್ ಹಿಯರಿಂಗ್

Date:

ತಮ್ಮ ಕೃಷಿ ಭೂಮಿಯ ಉಳಿವಿಗಾಗಿ ‘ಬಿಡದಿ ಟೌನ್‌ಶಿಪ್’ ಯೋಜನೆ ವಿರುದ್ಧ ಕಳೆದ 480 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ರೈತರ ಅಳಲು-ಅಹವಾಲು ಆಲಿಸಬೇಕಿದ್ದ ಸರ್ಕಾರ ಮತ್ತು ವಿಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ, ರೈತರ ಅಹವಾಲು ಆಲಿಸಲು ‘ಸಂಯುಕ್ತ ಹೋರಾಟ-ಕರ್ನಾಟಕ’ ಒಕ್ಕೂಟವು ಜುಲೈ 11ರಂದು ಬಿಡದಿಯ ಬೈರಮಂಗಲದಲ್ಲಿ ಬೃಹತ್ ‘ಪಬ್ಲಿಕ್ ಹಿಯರಿಂಗ್’ ಕಾರ್ಯಕ್ರಮ ಆಯೋಜಿಸಿದೆ.

- Advertisement -

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೈತ ಹೋರಾಟಗಾರ ಟಿ ಯಶವಂತ್, “ಸಂಯುಕ್ತ ಹೋರಾಟ – ಕರ್ನಾಟಕ ಮತ್ತು ‘ಬೈರಮಂಗಲ-ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೂ ಹಿತರಕ್ಷಣಾ ಸಂಘ’ವು ಜಂಟಿಯಾಗಿ ‘ಪಬ್ಲಿಕ್ ಹಿಯರಿಂಗ್’ ಕ್ರಾರ್ಯಕ್ರಮ ಆಯೋಜಿಸಿದ್ದು, ಬೈರಮಂಗಲ ವೃತ್ತದಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

“ರೈತರ ಅಹವಾಲುಗಳನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ನೇತೃತ್ವದಲ್ಲಿ ಆಲಿಸಲಾಗುತ್ತದೆ. ಈ ವೇಳೆ, ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ, ಕೃಷಿ ಅರ್ಥಶಾಸ್ತ್ರಜ್ಞ ಡಾ. ಪ್ರಕಾಶ್ ಕಮ್ಮರಡಿ, ಖ್ಯಾತ ಸಮಾಜಶಾಸ್ತ್ರಜ್ಞೆ ಡಾ. ಎ.ಆರ್. ವಾಸವಿ ಹಾಗೂ ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರು ಇರಲಿದ್ದಾರೆ” ಎಂದು ತಿಳಿಸಿದ್ದಾರೆ.

“ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರು ಸಂವಿಧಾನ, ನಾಗರಿಕ ಹಕ್ಕುಗಳು, ಸಾಮಾಜಿಕ ನ್ಯಾಯ ಹಾಗೂ ಪ್ರಜಾಪ್ರಭುತ್ವದ ದೃಷ್ಟಿಕೋನದಿಂದ ಟೌನ್‌ಶಿಪ್ ಯೋಜನೆಯ ವಿವಿಧ ಆಯಾಮಗಳನ್ನು ಪರಾಮರ್ಶಿಸಲಿದ್ದಾರೆ.  ಕೃಷಿ ಆರ್ಥಿಕತೆ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ-ಆರ್ಥಿಕ ಪರಿಣಾಮಗಳ ಕುರಿತು ಡಾ. ಪ್ರಕಾಶ್ ಕಮ್ಮರಡಿ, ಡಾ. ಎ.ಆರ್. ವಾಸವಿ ಮತ್ತು ಡಿ. ಉಮಾಪತಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ” ಎಂದು ವಿವರಿಸಿದ್ದಾರೆ.

“ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟೌನ್‌ಶಿಪ್ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿರುವ ರೈತರ ಅಹವಾಲುಗಳನ್ನು ಆಲಿಸಿದ ಬಳಿಕ, ತಜ್ಞರ ತಂಡ ತನ್ನ ಅಭಿಪ್ರಾಯ ಹಾಗೂ ತೀರ್ಪನ್ನು ಪ್ರಕಟಿಸಲಿದೆ” ಎಂದು ಯಶವಂತ್ ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಡದಿ ಟೌನ್‌ಶಿಪ್ ವಿವಾದ: ಬೆಂಗಳೂರು ಮಾತ್ರವೇ ಕರ್ನಾಟದ ಅಭಿವೃದ್ಧಿಯೇ?

“ಬೆಂಗಳೂರು ಸುತ್ತಮುತ್ತಲಿನ ಸಮೃದ್ಧ ಹಸಿರು ಪ್ರದೇಶಗಳು ಮತ್ತು ನೀರಾವರಿ ಹೊಂದಿರುವ ಕೃಷಿ ಭೂಮಿಗಳು ನಗರದ ಪರಿಸರ ಸಮತೋಲನ ಮತ್ತು ಆಮ್ಲಜನಕದ ಮೂಲವಾಗಿವೆ.ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಇಂತಹ ಪ್ರದೇಶಗಳ ಸಂರಕ್ಷಣೆ ಅತ್ಯಂತ ಮಹತ್ವದ್ದಾಗಿದೆ” ಎಂದಿದ್ದಾರೆ.

“ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ, ‘ಈ ಪ್ರದೇಶದಲ್ಲಿ ಕೃಷಿ ಭೂಮಿಯೇ ಇಲ್ಲ’ ಎಂಬ ಅಪಪ್ರಚಾರ ಮೊದಲು ನಡೆದಿತ್ತು. ಇದೀಗ ಸಮೃದ್ಧ ಕೃಷಿ ಪ್ರದೇಶದ ವಾಸ್ತವ ಚಿತ್ರಣ ಹೊರಬರುತ್ತಿದ್ದಂತೆ, ‘ಬಹುಸಂಖ್ಯಾತ ರೈತರು ಭೂಸ್ವಾಧೀನಕ್ಕೆ ಒಪ್ಪಿಗೆ ನೀಡಿದ್ದಾರೆ’ ಎಂಬ ಮತ್ತೊಂದು ಅಪಪ್ರಚಾರ ನಡೆಯುತ್ತಿದೆ. ಆದರೆ, ಯಾವೊಬ್ಬ ರೈತರೂ ತಮ್ಮ ಕೃಷಿ ಭೂಮಿ ನೀಡಲು ಸಿದ್ಧರಿಲ್ಲ” ಎಂದು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಬೈರಮಂಗಲ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ನಾಗರಾಜು ಮಂಡಲಳ್ಳಿ ಮತ್ತು ಆನಂದ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್‌ಘಾಟ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಮೌನ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...