ಬಿಡದಿ ಟೌನ್‌ಶಿಪ್‌ | ನಾನು ಕೈಬಿಟ್ಟಿದ್ದ ಯೋಜನೆಯನ್ನ ಲೂಟಿ ಮಾಡಲು ಹೊರಟಿದ್ದಾರೆ: ಹೆಚ್‌ಡಿಕೆ

Date:

ಬಿಡದಿ ಉಪನಗರ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡುವಿನ ಜಟಾಪಟಿ ತಾರಕಕ್ಕೇರಿದೆ. ಈ ಯೋಜನೆಯು ರಾಜ್ಯದ ಸಂಪತ್ತನ್ನು ಲೂಟಿ ಮಾಡುವ ಸಂಚು. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲೇ ಈ ಯೋಜನೆಯನ್ನು ಕೈಬಿಟ್ಟಿದ್ದೆ. ಆದರೆ 2025ರ ಮಾರ್ಚ್‌ನಲ್ಲಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ರೈತರ ಹಿತಕ್ಕೆ ವಿರುದ್ಧವಾಗಿ ಮತ್ತೆ ಭೂಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಜೆ.ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್‌ಡಿಕೆ, “2007ರ ಜುಲೈ ತಿಂಗಳಲ್ಲಿ ನಡೆದ ವಿಧಾನಸಭೆ ಕಲಾಪದ ಸುದೀರ್ಘ ಚರ್ಚೆಯಾಗಿತ್ತು. ಅಂದು ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕರು ಭೂಸ್ವಾಧೀನದ ವಿಷಯದಲ್ಲಿ ನನ್ನ ವಿರುದ್ಧ ಆರೋಪ ಮಾಡಿದ್ದರು. ಆದರೆ, ಅಂದಿನಿಂದ ಇಂದಿನವರೆಗೂ ನಾನು ರೈತರನ್ನು ಒಕ್ಕಲೆಬ್ಬಿಸುವಂತಹ ಯಾವುದೇ ಕೆಲಸಕ್ಕೆ ಕೈಹಾಕಿಲ್ಲ. 2018ರಲ್ಲಿ ನಾನು ಸಿಎಂ ಆಗಿದ್ದಾಗ ಈ ಯೋಜನೆಯನ್ನು ವೇಗವಾಗಿ ಜಾರಿಗೊಳಿಸುವ ಅವಕಾಶವಿದ್ದರೂ, ರೈತರ ಸಂಕಷ್ಟ ಗಮನಿಸಿ ಅದರಿಂದ ಹಿಂದೆ ಸರಿದೆ. ಆದರೆ ಈಗ ಡಿ.ಕೆ. ಶಿವಕುಮಾರ್ ಅವರು ರೈತರ ಭೂಮಿ ಲಪಟಾಯಿಸಲು ಹೊರಟಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

“ಸಾರ್ವಜನಿಕ ಹಿತಾಸಕ್ತಿಗೆ ಡಿನೋಟಿಫೈ ಮಾಡಿದರೆ ಯಾರೂ ಜೈಲಿಗೆ ಹೋಗಲ್ಲ. ಯಾರೋ ಮೃತರ ಆಸ್ತಿಯನ್ನು, ಸತ್ತವರ ಹೆಬ್ಬೆಟ್ಟು ಹಾಕಿ ಡಿನೋಟಿಫೈ ಮಾಡಿದರೆ ಜೈಲಿಗೆ ಹೋಗ್ತಾರೆ, ಅದಕ್ಕೆ ಸಿಎಂಗೆ ಭಯ ಇರಬೇಕು” ಎಂದು ಲೇವಡಿ ಮಾಡಿದರು. ಅರ್ಕಾವತಿ ಲೇಔಟ್ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಡಿನೋಟಿಫಿಕೇಷನ್ ಮಾಡಿದ್ದನ್ನು ಉಲ್ಲೇಖಿಸಿದ ಅವರು, ಆಗ ಅವರು ಜೈಲಿಗೆ ಹೋದ್ರಾ ಎಂದು ಪ್ರಶ್ನಿಸಿದರು. ಅಲ್ಲದೆ, ಬಿಡದಿ ಯೋಜನೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ರೈತರು ಆಕ್ಷೇಪಣೆ ಸಲ್ಲಿಸಿದರೂ, ಒಬ್ಬರಿಗೂ ಉತ್ತರ ನೀಡದ ಸರ್ಕಾರ ಪ್ರಜಾ ಸೇವೆ ಮಾಡುತ್ತಿದೆಯೇ ಎಂದು ತರಾಟೆಗೆ ತೆಗೆದುಕೊಂಡರು.

“ನೈಸ್ ಕಂಪನಿಯ ಪಿತಾಮಹನೇ ಡಿ.ಕೆ. ಶಿವಕುಮಾರ್. ಶೋಭಾ ಕಟ್ಟಡಕ್ಕಾಗಿ ಡಿನೋಟಿಫಿಕೇಷನ್ ಮಾಡಿಸಿ, ರೈತರಿಗೆ 30 ವರ್ಷವಾದರೂ ನಿವೇಶನ ಕೊಡದ ಕಂಪನಿಗೆ ಎನ್​ಒಸಿ ತಂದುಕೊಟ್ಟಿದ್ದು ನಿಮ್ಮ ಸಾಧನೆಯೇ?” ಎಂದು ಪ್ರಶ್ನಿಸಿದ ಅವರು, ಇದೊಂದು ಲೂಟಿಯ ಯೋಜನೆ ಎಂದು ಆರೋಪಿಸಿದರು. ಇದೇ ವೇಳೆ ಬೈರಮಂಗಲಕ್ಕೆ ಬರುವಂತೆ ಡಿ.ಕೆ. ಶಿವಕುಮಾರ್‌ಗೆ ಸವಾಲು ಹಾಕಿದ ಕುಮಾರಸ್ವಾಮಿ, ಅಲ್ಲಿ ರೈತರ ಎದುರೇ ಮುಕ್ತ ಚರ್ಚೆ ನಡೆಸೋಣ, ಅವರು ಭೂಮಿ ಕೊಡಲು ಸಿದ್ಧರಿದ್ದಾರಾ ಇಲ್ಲವಾ ಎಂಬುದನ್ನು ನೀವೇ ಕೇಳಿ ಎಂದು ಪಂಥಾಹ್ವಾನ ನೀಡಿದರು.

“ಈಗ ರಾಜ್ಯದ ಖಜಾನೆಯಲ್ಲಿ ದುಡ್ಡಿಲ್ಲ, ಆದರೆ ಯೋಜನೆ ಹೆಸರಿನಲ್ಲಿ ಲೂಟಿ ಮಾಡಲು ಹೊರಟಿದ್ದೀರಾ? ಬೆಂಗಳೂರಿನಲ್ಲಿ ನಾನು ಘೋಷಿಸಿದ್ದ ಐದು ಬಡಾವಣೆಗಳೇ ಇನ್ನೂ ಪೂರ್ಣಗೊಂಡಿಲ್ಲ, ಈಗ ಹೊಸ ಯೋಜನೆ ಯಾಕೆ?” ಎಂದು ಕಿಡಿಕಾರಿದರು. ರಾಜ್ಯದ ಜನರ ಸಂಪತ್ತನ್ನು ಲೂಟಿ ಮಾಡಿ ಬೇರೆ ರಾಜ್ಯಗಳಿಗೆ ಕೊಂಡೊಯ್ಯಲು ಸಂಚು ನಡೆಯುತ್ತಿದೆ. ಇದರ ವಿರುದ್ಧ ಕಾನೂನಾತ್ಮಕವಾಗಿ ಹೋರಾಡಲಾಗುವುದು. ಅಧಿಕಾರದ ಅಮಲಿನಲ್ಲಿ ಇರುವವರಿಗೆ ತಕ್ಕ ಉತ್ತರ ಕೊಡುವ ಕಾಲ ದೂರವಿಲ್ಲ” ಎಂದು ಎಚ್ಚರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ ಸಾಕೇ, ಇನ್ನಷ್ಟು ಬೇಕೇ?

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು....

ಕೇರಳದಲ್ಲಿ ಮತ್ತೆ ಭೂಕುಸಿತ; 9 ಮಂದಿ ಸಾವು, ಹಲವರು ನಾಪತ್ತೆ

ಕೇರಳ ರಾಜ್ಯದಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತ ಮತ್ತು ಪ್ರವಾಹದಿಂದ...

ವಿಧಾನ ಮಂಡಲದಲ್ಲಿ ಕಸ್ತೂರಿರಂಗನ್ ವರದಿ ಕುರಿತು ಗಂಭೀರ ಚರ್ಚೆ; ಕಾಡಂಚಿನ ಜನರ ಹಿತ ಕಾಯಲು ಶಾಸಕರ ಒಕ್ಕೊರಲ ಆಗ್ರಹ

ಸದನದಲ್ಲಿ ಮಾತನಾಡಿದ ಈ ಎಲ್ಲಾ ನಾಯಕರು, ಕಸ್ತೂರಿರಂಗನ್ ವರದಿಯನ್ನು ಅರಣ್ಯದ ಸಮೀಪ...

ಜಾರ್ಖಂಡ್ ಸಿಎಂ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವ್‌ಗೆ ಕಾಂಗ್ರೆಸ್‌ ಶೋಕಾಸ್ ನೋಟಿಸ್

ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿರುದ್ಧ ಮಾಜಿ ಸಚಿವ ಹಾಗೂ ಹಿರಿಯ...