ಬೀದರ್‌ | VB-G RAM G ಯೋಜನೆಯಡಿ 2.04 ಕೋಟಿ ಮಾನವ ದಿನ ಸೃಜನೆ :ಸಚಿವ ಈಶ್ವರ ಖಂಡ್ರೆ

Date:

ಗ್ರಾಮೀಣ ಉದ್ಯೋಗ ಖಾತ್ರಿ VB-G RAM G ಯೋಜನೆಯಡಿ ಜುಲೈ 1 ರಿಂದ ಅ.12ರವರೆಗೆ ರಾಜ್ಯದಲ್ಲಿ ದಾಖಲೆಯ 2.04 ಕೋಟಿ ಮಾನವ ದಿನಗಳ ಉದ್ಯೋಗ ಸೃಜಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

- Advertisement -

ಕಳೆದ ವರ್ಷ ಇದೇ ಅವಧಿಯಲ್ಲಿ ಮನರೇಗಾ ಯೋಜನೆಯಡಿ 1.71 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆಯಾಗಿತ್ತು. ಈ ಬಾರಿ ʼಎಲ್‌ ನಿನೊʼ ಪ್ರಭಾವದಿಂದ ಮಳೆಯ ಕೊರತೆ ಉಂಟಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಬಡವರು, ದಲಿತರು, ವಂಚಿತರು, ಅಕುಶಲ ಕಾರ್ಮಿಕರು ಹಾಗೂ ಭೂರಹಿತ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಒದಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು, ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಪತ್ರಕರ್ತರ ಮೇಲೆ ಪೊಲೀಸರು ಕನಿಕರವಿಲ್ಲದೆ ಮೃಗಗಳಂತೆ ಎರಗಿಬೀಳುತ್ತಿದ್ದಾರೆ. ಎಸ್‌ಐಆರ್‌ ವಿರುದ್ಧದ ಹೋರಾಟದಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ...

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ರಾಯಚೂರು ಪ್ರಥಮ, ಬೀದರ್‌ಗೆ ಎರಡನೇ ಸ್ಥಾನ

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಜುಲೈ 1 ರಿಂದ ಅ. 12ರವರೆಗೆ ಒಟ್ಟು 24 ಲಕ್ಷ ಮಾನವ ದಿನಗಳ ಉದ್ಯೋಗ ಸೃಜನೆಯಾಗಿದ್ದು, ರಾಯಚೂರು ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬೀದರ್ ಜಿಲ್ಲೆಯಲ್ಲಿ 21 ಲಕ್ಷ ಮಾನವ ದಿನಗಳು ಹಾಗೂ ಕೊಪ್ಪಳ ಜಿಲ್ಲೆಯಲ್ಲಿ 18 ಲಕ್ಷ ಮಾನವ ದಿನಗಳ ಉದ್ಯೋಗ ಸೃಜನೆಯಾಗಿದ್ದು, ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿವೆ.

WhatsApp Image 2026 10 10 at 7.46.08 PM 6
ಜಾಹೀರಾತು

ಕಳೆದ ವರ್ಷಕ್ಕೆ ಹೋಲಿಸಿದರೆ ಉದ್ಯೋಗ ಸೃಜನೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಶೇ. 340, ಕಲಬುರಗಿ ಜಿಲ್ಲೆಯಲ್ಲಿ ಶೇ. 257, ಕೊಪ್ಪಳದಲ್ಲಿ ಶೇ. 207, ಬಳ್ಳಾರಿಯಲ್ಲಿ ಶೇ. 175 ಹಾಗೂ ಬೀದರ್ ಜಿಲ್ಲೆಯಲ್ಲಿ ಶೇ. 173ರಷ್ಟು ಹೆಚ್ಚಳವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

87,164 ಹೊಸ ಜಾಬ್‌ ಕಾರ್ಡ್‌ ವಿತರಣೆ

ಮನರೇಗಾ ಯೋಜನೆಯಡಿ ಈ ಹಿಂದೆ ವಿತರಿಸಲಾಗಿದ್ದ ಜಾಬ್‌ ಕಾರ್ಡ್‌ಗಳ ಇ-ಕೆವೈಸಿ ಪ್ರಕ್ರಿಯೆ ಕೈಗೊಳ್ಳುವುದರ ಜೊತೆಗೆ, ಜಾಬ್‌ ಕಾರ್ಡ್‌ ಮೇಳಗಳನ್ನು ಆಯೋಜಿಸಿ ಹೊಸ ಕಾರ್ಡ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದ ನೂರಾರು ಕುಟುಂಬಗಳಿಗೆ ತಮ್ಮ ಊರಿನಲ್ಲಿಯೇ ಉದ್ಯೋಗ ಪಡೆಯಲು ಅನುಕೂಲವಾಗಿದೆ. ಪ್ರಸಕ್ತ ವರ್ಷದಲ್ಲಿ ರಾಜ್ಯದಲ್ಲಿ 87,164 ಹೊಸ ಜಾಬ್‌ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಯೋಜನೆಯಡಿ ಕೆರೆಗಳ ಹೂಳೆತ್ತುವುದು, ಸಾಮಾಜಿಕ ಅರಣ್ಯೀಕರಣ, ಕಾಲುವೆ, ಕೆರೆ ಹಾಗೂ ಸರೋವರಗಳ ಪುನಶ್ಚೇತನ, ಜಾನುವಾರು ಶೆಡ್‌ ನಿರ್ಮಾಣ, ಕೃಷಿ ಹೊಂಡಗಳ ನಿರ್ಮಾಣ, ಗುಡ್ಡಗಳಲ್ಲಿ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಾಣ, ಗೊಬ್ಬರ ಗುಂಡಿ ಹಾಗೂ ಸಂಪರ್ಕ ರಸ್ತೆಗಳ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

WhatsApp Image 2026 10 10 at 6.59.31 PM 2
ಜಾಹೀರಾತು

ಇದೀಗ ಹೊಸದಾಗಿ ವಸತಿ ಯೋಜನೆ, ಸಮುದಾಯ ಭವನ ಹಾಗೂ ಗ್ರಾಮೀಣ ಬಸ್‌ ನಿಲ್ದಾಣಗಳ ನಿರ್ಮಾಣಕ್ಕೂ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಶಾಶ್ವತ ಆಸ್ತಿಗಳನ್ನು ಸೃಜಿಸುವುದರ ಜೊತೆಗೆ ಗ್ರಾಮಗಳ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ವಿಬಿ- ಜಿ ರಾಮ್‌ ಜಿ ಯೋಜನೆಯಡಿ ಒಂದು ಕುಟುಂಬಕ್ಕೆ ವರ್ಷದಲ್ಲಿ ಗರಿಷ್ಠ 125 ದಿನಗಳ ಉದ್ಯೋಗ ಒದಗಿಸಲು ಅವಕಾಶವಿದೆ. ಮಹಿಳೆ ಮತ್ತು ಪುರುಷರೆಂಬ ತಾರತಮ್ಯವಿಲ್ಲದೆ ದಿನಕ್ಕೆ ₹382 ಕೂಲಿ ನೀಡಲಾಗುತ್ತಿದೆ. ಈ ಲೆಕ್ಕಾಚಾರದ ಪ್ರಕಾರ, ಒಂದು ಕುಟುಂಬವು ವರ್ಷದಲ್ಲಿ ಪೂರ್ಣ 125 ದಿನಗಳ ಉದ್ಯೋಗ ಪಡೆದರೆ ₹47,750 ಕೂಲಿ ಆದಾಯ ಗಳಿಸಲು ಅವಕಾಶವಿದೆ ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...

ನ್ಯಾಯಯುತ ಷರತ್ತುಗಳಡಿ ಚೀನಾದೊಂದಿಗೆ ಆರ್ಥಿಕ ಸಹಭಾಗಿತ್ವಕ್ಕೆ ಸಿದ್ಧ: ಪಿಯೂಷ್ ಗೋಯಲ್

ವ್ಯಾಪಾರ ಒಪ್ಪಂದಗಳು ನ್ಯಾಯಯುತವಾಗಿದ್ದರೆ ಹಾಗೂ ಜಾಗತಿಕ ರಾಜಕೀಯ ಪರಿಸ್ಥಿತಿ ಸ್ಥಿರವಾಗಿದ್ದರೆ ಚೀನಾದೊಂದಿಗೆ...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...