ಬೀದರ್ ಹೊರವಲಯದ ನಂದಿನಗರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 9ನೇ ಪ್ರಭಾರ ಕುಲಪತಿಯಾಗಿ ಡಾ.ಎ.ಟಿ.ರಾಮಚಂದ್ರ ನಾಯ್ಕ ಅವರು ಅ.15ರಂದು ಅಧಿಕಾರ ಸ್ವೀಕರಿಸಿದರು.
ರಾಜ್ಯಪಾಲರ ಆದೇಶದ ಮೇರೆಗೆ ಅವರು ಅಧಿಕಾರ ವಹಿಸಿಕೊಂಡಿದ್ದು, ಈ ಹಿಂದೆ ಕುಲಪತಿಗಳಾಗಿದ್ದ ಡಾ.ಕೆ.ಸಿ. ವೀರಣ್ಣ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಜವಾಬ್ದಾರಿ ವಹಿಸಲಾಗಿದೆ.
ಡಾ.ರಾಮಚಂದ್ರ ನಾಯ್ಕ ಅವರು ಮಂಗಳೂರಿನ ಮೀನುಗಾರಿಕೆ ಮಹಾವಿದ್ಯಾಲಯದಲ್ಲಿ 25 ವರ್ಷಗಳಿಗೂ ಅಧಿಕ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದು, ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಅನುಭವ ಹೊಂದಿದ್ದಾರೆ.

ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಎಲ್ಲ ವಿವಿಯ ಡೀನ್ ಹಾಗೂ ಅಧಿಕಾರಿಗಳು ಹಾಗೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವಿಜಯಕುಮಾರ ಎಸ್. ಪಾಟೀಲ್ ಗಾದಗಿ ಅವರು ಪಾಲ್ಗೊಂಡಿದ್ದರು ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್





