ಬೀದರ್‌ | ಬ್ರಿಮ್ಸ್ ವೈದ್ಯನ ಮೇಲೆ ಹಲ್ಲೆ ಪ್ರಕರಣ : ಸಂಸದ ಸಾಗರ್‌ ಖಂಡ್ರೆ, ಡಿಸಿ ಶಿಲ್ಪಾ ಶರ್ಮಾ ಭೇಟಿ, 7 ಜನರ ಬಂಧನ

Date:

ಬೀದರ್ ಬ್ರಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ (ಗುರುವಾರ) ತಡರಾತ್ರಿ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆ ಗುಂಪೊಂದು ನಡೆಸಿದ ಹಲ್ಲೆಯಿಂದ ಗಾಯಗೊಂಡು ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಾ.ತುಕಾರಾಮ ಅವರನ್ನು ಸಂಸದ ಸಾಗರ ಖಂಡ್ರೆ ಅವರು ಶುಕ್ರವಾರ ಸಂಜೆ ಭೇಟಿಯಾಗಿ ಕುಶಲೋಪರಿ ವಿಚಾರಿಸಿ ಧೈರ್ಯ ತುಂಬಿದರು.

- Advertisement -

“ಜೀವ ಉಳಿಸುವ ವೈದ್ಯರ ಮೇಲೆಯೇ ಹಲ್ಲೆ ನಡೆಯುತ್ತಿರುವುದು ಅತ್ಯಂತ ದುಃಖಕರ ಮತ್ತು ಖಂಡನೀಯ. ರಾತ್ರಿ-ಹಗಲು ಸೇವೆ ಸಲ್ಲಿಸುವ ವೈದ್ಯರಿಗೆ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪ್ರಕರಣ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಸೂಕ್ತ ತನಿಖೆ ನಡೆಸಿ ಶೀಘ್ರದಲ್ಲೇ ಚಾರ್ಜ್ ಸೀಟ್ ಸಲ್ಲಿಸಲು ಸೂಚಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

“ಸಾರ್ವಜನಿಕರು ಆಸ್ಪತ್ರೆಯ ನಿಯಮಗಳನ್ನು ಗೌರವಿಸಬೇಕು. ಯಾವುದೇ ಸಮಸ್ಯೆಗಳಿದ್ದರೂ ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳಬೇಕೇ ಹೊರತು, ಚಿಕಿತ್ಸೆ ನೀಡುವ ವೈದ್ಯರ ಮೇಲೆಯೇ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧವಾಗಿದೆ. ಗಾಯಾಳು ವೈದ್ಯರಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

ʼಬ್ರಿಮ್ಸ್ ಆಸ್ಪತ್ರೆಯಲ್ಲಿ ಭದ್ರತೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸ್ ಸಿಬ್ಬಂದಿ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗಿದೆ. ಈ ಹಿಂದೆ ಕರ್ತವ್ಯದಲ್ಲಿದ್ದ ಮೂವರು ಪೊಲೀಸರ ಬದಲಿಗೆ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಹೊಸ ಭದ್ರತಾ ಏಜೆನ್ಸಿಯ ಮೂಲಕ ಸುಮಾರು 50 ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ವೈದ್ಯರ ರಕ್ಷಣೆಗೆ ವಿಶೇಷ ಕಾನೂನು ಜಾರಿಗೆ ತರಬೇಕುʼ ಸಂಸದ ಸಾಗರ ಖಂಡ್ರೆ ಒತ್ತಾಯಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬ್ರಿಮ್ಸ್‌ಗೆ ಭೇಟಿ ನೀಡಿ ಪ್ರತಿಭಟನೆ ನಿರತ ಕಿರಿಯ ವೈದ್ಯರು, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಅವರು ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವೈದ್ಯ ತುಕರಾಮ ಅವರ ಆರೋಗ್ಯ ವಿಚಾರಿಸಿದರು.

WhatsApp Image 2026 05 22 at 8.48.30 PM
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಎಸ್ಪಿ ಪ್ರದೀಪ ಗುಂಟಿ ಭೇಟಿ ನೀಡಿ ಗಾಯಾಳು ಡಾ.ತುಕರಾಮ ಅವರ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, “ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರೊಬ್ಬರ ಮೇಲೆಯುವಕರ ಗುಂಪು ಹಲ್ಲೆ ನಡೆಸಿರುವ ಘಟನೆ ವಿಷಾದನೀಯ. ಈ ಘಟನೆಯ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರು ತುಂಬಾ ಒತ್ತಡದಲ್ಲಿ ಇರ್ತಾರೆ, ಹೀಗಾಗಿ ಸಾರ್ವಜನಿಕರು ಅವರಿಗೆ ಯಾವುದೇ ತೊಂದರೆ ಕೊಡದಂತೆ ಸಹಕಾರ ನೀಡಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್ ನಿರ್ದೇಶಕಿ ಡಾ.ಶಾಂತಲಾ ಕೌಜಲಗಿ, ವೈದ್ಯಕೀಯ ಅಧೀಕ್ಷಕರು ಸೇರಿದಂತೆ ಇತರರು ಉಪಸ್ಥಿತರಿದ್ದರು

ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ :

ಬೀದರ್ ಜಿಲ್ಲಾಸ್ಪತ್ರೆ ಬ್ರಿಮ್ಸ್ ನಲ್ಲಿ ನಿನ್ನೆ ತಡರಾತ್ರಿ ಕೆಲವರು ವೈದ್ಯರ ಮೇಲೆ ಹಲ್ಲೆ ಮಾಡಿರುವುದು ಸಮರ್ಥನೀಯವಲ್ಲ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ʼಯಾರಿಗೂ ಕಾನೂನು ಕೈಗೆ ತೆಗೆದುಕೊಳ್ಳಲು ಅವಕಾಶ ಇರುವುದಿಲ್ಲ. ಇಂತಹ ಪ್ರಕರಣಗಳು ವೈದ್ಯರ ಆತ್ಮಸ್ಥೈರ್ಯವನ್ನೇ ಕುಗ್ಗಿಸುತ್ತವೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಹಾಗೂ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಭದ್ರತೆ ನಡೆಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

7 ಜನ ಆರೋಪಿಗಳ ಬಂಧನ :

ಬೀದರ್‌ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಬ್ರಿಮ್ಸ್)‌ ಪಿಜಿ ಪ್ರಥಮ ವರ್ಷದ ಅರ್ಥೋಪೆಡಿಕ್ ವಿದ್ಯಾರ್ಥಿ ಡಾ.ತುಕಾರಾಂ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಏಳು ಜನ ಆರೋಪಿಗಳನ್ನು ಜಿಲ್ಲಾ ಪೊಲೀಸರ ತಂಡ 12 ಗಂಟೆಗಳ ಒಳಗಾಗಿ ಶುಕ್ರವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2026 05 22 at 1.35.32 PM
ವೈದ್ಯನ ಮೇಲೆ ಹಲ್ಲೆ ಖಂಡಿಸಿ ವೈದ್ಯರು, ವಿದ್ಯಾರ್ಥಿಗಳು ಬ್ರಿಮ್ಸ್‌ ಎದುರು ಇಡೀ ದಿನ ಪ್ರತಿಭಟನೆ ನಡೆಸಿದರು.

ʼಬೀದರ್‌ ತಾಲೂಕಿನ ತಾಜಲಾಪುರ ಗ್ರಾಮದ ಆದಿತ್ಯ ಹಾಗೂ ವಿನೋದ ಚಾಂಬೋಳ, ಗೋವಿಂದ ಬೆನಕನಳ್ಳಿ, ಬಾಲಾಜಿ ತಾಜಲಾಪುರ, ಪವನ ಚಾಂಬೋಳ, ಅನೀಲ ಬೆನಕನಳ್ಳಿ, ಮಹಾದೇವ ಬೆನಕನಳ್ಳಿ ಬಂಧಿತ ಆರೋಪಿಗಳಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | KKRTC ಬಸ್‌ಗಳಲ್ಲಿ UPI ಕ್ರಾಂತಿ: ಚಿಲ್ಲರೆ ಸಮಸ್ಯೆಗೆ ಸಿಕ್ತು ಮುಕ್ತಿ!

“ಯಾವುದೇ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ, ಜೀವ ಬೆದರಿಕೆ ಹಾಕುವುದು ಮಾಡಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು” ಎಂದು ಎಸ್ಪಿ ಪ್ರದೀಪ ಗುಂಟಿ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...