ಬೀದರ್‌ | ಸುಸೂತ್ರವಾಗಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ; 663 ಅಭ್ಯರ್ಥಿಗಳು ಗೈರು

Date:

ಬೀದರ್ ನಗರದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಯಾವುದೇ ಗೊಂದಲವಿಲ್ಲದೆ ಸುಸೂತ್ರವಾಗಿ ನಡೆಯಿತು.

- Advertisement -

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ, ಅಭ್ಯರ್ಥಿಗಳಿಗೆ ಕಲ್ಪಿಸಿರುವ ಸೌಲಭ್ಯಗಳು ಹಾಗೂ ಅಕ್ರಮ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬೆಳಿಗ್ಗೆ 10 ಗಂಟೆಗೆ ಕಲ್ಯಾಣ ಕರ್ನಾಟಕದ ಹೊರತಾದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಯಿತು. ಸಂಜೆ 4 ಗಂಟೆಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳು ಪರೀಕ್ಷೆ ಬರೆದರು. ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ, 10,627 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 9,994 ಅಭ್ಯರ್ಥಿಗಳು ಹಾಜರಾಗಿದ್ದು, 663 ಅಭ್ಯರ್ಥಿಗಳು ಗೈರಾಗಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗಿತ್ತು. ಅಕ್ರಮಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಭ್ಯರ್ಥಿಗಳ ಅನುಕೂಲಕ್ಕಾಗಿ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿತ್ತು.

ಇದನ್ನೂ ಓದಿ : ಬೀದರ್ ಮಹಾನಗರ ಮುಖ್ಯರಸ್ತೆಗಳ ಅಂದ ಕಸಿದ ಗುಂಡಿಗಳು!

ಎಸ್ಪಿ ಪ್ರದೀಪ ಗುಂಟಿ ನೇತ್ರತ್ವದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಹಾಗೂ ಮಾರ್ಗಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...