ಬೀದರ್‌ | ಏ.11, 12ರಂದು ಪತ್ರಕರ್ತರ ರಾಜ್ಯ ಸಮ್ಮೇಳನ : 5 ಸಾವಿರ ಪತ್ರಕರ್ತರು ಭಾಗಿ

Date:

ಬೀದರ್ ನಗರದಲ್ಲಿ ಏ.11 ಮತ್ತು 12 ರಂದು ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ 5 ಸಾವಿರ ಪತ್ರಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.

- Advertisement -

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸಮ್ಮೇಳನದ ಮೆರವಣಿಗೆ, ವಸತಿ, ಸಾರಿಗೆ ಸೇರಿ ವಿವಿಧ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ರಾಜ್ಯದ ಎಲ್ಲ ಜಿಲ್ಲೆಗಳಿಂದ ಪತ್ರಕರ್ತರು ಬರಲಿದ್ದಾರೆ. ಪತ್ರಕರ್ತರಿಗೆ ವಸತಿ, ಆಹಾರ ಸೇರಿದಂತೆ ಯಾವುದೇ ರೀತಿಯ ತೊಂದರೆ ಆಗದಂತೆ ಅರ್ಥಪೂರ್ಣವಾಗಿ ಸಮ್ಮೇಳನ ನಡೆಸಲು ಸರ್ವಸಿದ್ಧತೆ ನಡೆದಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು:...

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ ಕುಸಿದರೆ ಅರಣ್ಯದ ಜೀವನಾಡಿಗಳೇ ದುರ್ಬಲವಾಗುತ್ತವೆ. ಇದರ ಪರಿಣಾಮ ಮನುಷ್ಯರಿಗಷ್ಟೇ ಸೀಮಿತವಾಗುವುದಿಲ್ಲ. ಕಾಡಿನಲ್ಲಿರುವ ಆನೆ, ಹುಲಿ, ಚಿರತೆ, ಕಾಡೆಮ್ಮೆ, ಜಿಂಕೆ ಸೇರಿದಂತೆ...

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

“ಏ.11 ರಂದು ಬೆಳಿಗ್ಗೆ 11ಕ್ಕೆ ಝೀರಾ ಕನ್ವೆನ್ಶನ್ ಹಾಲ್‍ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು ಹಾಗೂ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆ ವಹಿಸಲಿದ್ದಾರೆ. ಬೈಲೂರು ನಿಷ್ಕಲ ಮಂಟಪದ ನಿಜಗುಣಪ್ರಭು ಸ್ವಾಮೀಜಿ ಹಾಗೂ ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ʼಸಮ್ಮೇಳನದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಹಾಗೂ ಮಾಧ್ಯಮ, ಗಾಂಧಿ ಮತ್ತು ಅಂಬೇಡ್ಕರ್, ಎ.ಐ. ಸೇರಿ ನಾಲ್ಕು ಗೋಷ್ಠಿಗಳು ಜರುಗಲಿವೆ. ಸಂಘದ ಪ್ರಶಸ್ತಿಗಳ ಪ್ರದಾನವೂ ನಡೆಯಲಿದೆ. ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 9ಕ್ಕೆ ಬಸವೇಶ್ವರ ವೃತ್ತದಿಂದ ಝೀರಾ ಕನ್ವೆನ್ಶನ್ ಹಾಲ್‍ವರೆಗೆ ಭವ್ಯ ಮೆರವಣಿಗೆ ನಡೆಸಲು ನಿರ್ಣಯಿಸಲಾಗಿದೆ. 40ನೇ ಸಮ್ಮೇಳನದ ಅಂಗವಾಗಿ ಮೆರವಣಿಗೆಯಲ್ಲಿ 40 ಬೃಹತ್ ಕೊಡೆಗಳು ಗಮನ ಸೆಳೆಯಲಿವೆ.

ಜಿಲ್ಲೆಯಲ್ಲಿ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಸಮ್ಮೇಳನ ಸಿದ್ಧತಾ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಸಮ್ಮೇಳನವನ್ನು ಸರ್ವ ರೀತಿಯಿಂದಲೂ ಯಶಸ್ವಿಗೊಳಿಸಲು ಶಕ್ತಿ ಮೀರಿ ಪ್ರಯತ್ನಿಸಲಾಗುತ್ತಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ಮಾಹಿತಿ ನೀಡಿದರು.

ಜಿಲ್ಲಾ ಅಡಾಕ್ ಸಮಿತಿ ಸದಸ್ಯರಾದ ಅಪ್ಪಾರಾವ್ ಸೌದಿ, ಶಿವಕುಮಾರ ಸ್ವಾಮಿ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕ ಡಾ. ರಜನೀಶ್ ವಾಲಿ, ಸಂಚಾಲಕ ವಿಜಯಕುಮಾರ ಸೋನಾರೆ, ಸಹ ಸಂಚಾಲಕ ನಂದಕುಮಾರ ಕರಂಜೆ, ವಸತಿ ಸಮಿತಿಯ ಸಂಚಾಲಕ ಶ್ರೀಕಾಂತ ಪಾಟೀಲ, ಸಹ ಸಂಚಾಲಕ ಸಂತೋಷ್ ಚೆಟ್ಟಿ, ಸಾರಿಗೆ ಸಮಿತಿಯ ಪ್ರಧಾನ ಸಂಚಾಲಕ ಪೃಥ್ವಿರಾಜ್ ಎಸ್., ಸಂಚಾಲಕ ಸುನೀಲ್ ಕುಲಕರ್ಣಿ, ಛಾಯಾಚಿತ್ರ ಪ್ರದರ್ಶನ ಸಮಿತಿಯ ಪ್ರಧಾನ ಸಂಚಾಲಕ ಗೋಪಿಚಂದ್ ತಾಂದಳೆ, ಶಿಸ್ತು ಪಾಲನಾ ಹಾಗೂ ಸ್ವಯಂ ಸೇವಕರ ಸಮಿತಿಯ ಪ್ರಧಾನ ಸಂಚಾಲಕ ಎಂ.ಪಿ. ಮುದಾಳೆ, ಹಿರಿಯ ಪತ್ರಕರ್ತರಾದ ಅಶೋಕುಮಾರ ಕರಂಜಿ, ಬಸವರಾಜ ಕಾಮಶೆಟ್ಟಿ, ಅನಿಲ್ ಪಾಟೀಲ ಹಾಲಹಿಪ್ಪರ್ಗಾ, ಸಿದ್ರಾಮಯ್ಯ ಸ್ವಾಮಿ, ಹಾಜಿಪಾಶಾ, ಧಮೇಂದ್ರ ಪೂಜಾರಿ, ಮಾಣಿಕೇಶ್ ಪಾಟೀಲ, ಪ್ರವೀಣ್ ಮೇತ್ರೆ, ಸತೀಶ್ ತುಪ್ಪದ್ ಮತ್ತಿತರರು ಇದ್ದರು.

ಜಿಲ್ಲಾಧಿಕಾರಿಗಳೊಂದಿಗೆ ಸಮ್ಮೇಳನ ಸಿದ್ಧತೆ ಚರ್ಚೆ :

ಬೀದರ್ ಪ್ರವಾಸದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರನ್ನು ಭೇಟಿ ಮಾಡಿದರು.

ಏ.11, 12ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಸಿದ್ಧತೆ ಬಗ್ಗೆ ಚರ್ಚೆ ಮಾಡಿದರು. ಅದಕ್ಕೆ ಡಿಸಿ ಅವರು ಮುಖ್ಯಮಂತ್ರಿಗಳು ಉದ್ಘಾಟಿಸಲಿರುವ ಪತ್ರಕರ್ತರ ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಇದನ್ನೂ ಓದಿ : ಬೀದರ್‌ | ಬಿಎಸ್‌ಎಸ್‌ಕೆ ಪುನಾರಂಭ, ರೈತರ ಸಾಲಮನ್ನಾಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

ಈ ಸಂದರ್ಭದಲ್ಲಿ ಬೀದರ ಘಟಕ ಜಿಲ್ಕಾಧ್ಯಕ್ಷ ಆನಂದ ದೇವಪ್ಪ, ಸಮಿತಿ ಸದಸ್ಯರಾದ ಅಪ್ಪರಾವ್ ಸೌದಿ, ಶಿವಕುಮಾರಸ್ವಾಮಿ, ನಂದಕುಮಾರ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಮಕ್ಕಳು ದೇಶದ ನಿಜವಾದ ಸಂಪತ್ತು: ಮನೋಹರ ಬಿರಾದರ

ದೇಶದ ಉಳಿವು ಮತ್ತು ಪ್ರಗತಿಯಲ್ಲಿ ಮಾನವ ಸಂಪನ್ಮೂಲ ಪ್ರಮುಖ ಪಾತ್ರ ವಹಿಸಲಿದ್ದು,...

ಬೀದರ್‌ | ‘ಬಸವ ಮಂಟಪ’ ಕೃತಿ ಮುಟ್ಟುಗೋಲು ನಿರ್ಧಾರ ಸ್ವಾಗತ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು...

ಬೀದರ್ | ಪ್ರಸ್ಥಭೂಮಿ ಗುಡ್ಡಗಳ ಅಕ್ರಮ ಕಡಿತಕ್ಕೆ ಕಡಿವಾಣ ಹಾಕಿ : ವಿನಯಕುಮಾರ ಮಾಳಗೆ

ಬೀದರ್ ಪ್ರಸ್ಥಭೂಮಿಯ ಸುತ್ತಮುತ್ತಲಿನ ಗುಡ್ಡಗಳನ್ನು ಅಕ್ರಮವಾಗಿ ಕಡಿದು, ನೈಸರ್ಗಿಕ ಪರಿಸರ ನಾಶಪಡಿಸುತ್ತಿರುವ...

ಬೀದರ್‌ | ʼಬಸವ ಮಂಟಪ’ ಕೃತಿಗೆ ಮುಟ್ಟುಗೋಲು : ಸ್ವಾಗತಾರ್ಹ ನಿರ್ಧಾರ

ಲೇಖಕ ರವಿ ಹಂಜ್ ರಚಿಸಿರುವ ‘ಬಸವ ಮಂಟಪ’ ಕೃತಿಗೆ ಮುಟ್ಟುಗೋಲು ಹಾಕಿಕೊಳ್ಳಲು...