BIG BREAKING: ಧರ್ಮಸ್ಥಳ ಕೇಸ್‌ನಲ್ಲಿ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರು; ಮಹತ್ವದ ತಿರುವು

Date:

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಅನ್ವಯ ಆಗುತ್ತಿರುವ ತನಿಖೆಯ ಬೆನ್ನಲ್ಲೇ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ದೂರು ದಾಖಲಿಸಲು ಮತ್ತು ಮಹತ್ವದ ಸಾಕ್ಷ್ಯಗಳನ್ನು ಸಲ್ಲಿಸಲು ಹೊಸ ಸಾಕ್ಷಿಯೊಬ್ಬರು ಬೆಳ್ತಂಗಡಿಯಲ್ಲಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಗೆ ಬಂದಿದ್ದಾರೆ. ಸಂಜೆ ಏಳು ಗಂಟೆಗೆ ಅವರು ಬರುವುದು ನಿಶ್ಚಿತವಾಗಿತ್ತು.

- Advertisement -

ಸರಿಸುಮಾರು 20 ವರ್ಷಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದ ಈ ಹೊಸ ಸಾಕ್ಷ್ಯವು ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ತಿರುವು ನೀಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಾಕ್ಷಿದಾರ, “ನನ್ನ ಹೆಸರು ಜಯಂತ್ ಟಿ. ನಾನು ಇಂದು ದೂರು ಕೊಡಲು ಬಂದಿದ್ದೇನೆ. ಹಲವು ವರ್ಷಗಳ ಹಿಂದೆ ಈ ಧರ್ಮಸ್ಥಳ ಗ್ರಾಮದಲ್ಲಿ ಹಲವು ಕೊಲೆಗಳಾಗಿವೆ ಎಂದು ಹೇಳುತ್ತಿದ್ದೆ. ಹಲವು ವೇದಿಕೆಗಳಲ್ಲೂ ಇದನ್ನೇ ಹೇಳಿದ್ದೇನೆ. ಈ ವಿಷಯಗಳನ್ನು ಎಲ್ಲವನ್ನೂ ಪ್ರಸ್ತಾಪಿಸಿದ್ದೇನೆ” ಎಂದು ಹೇಳಿದರು.

“ದೇಶದಲ್ಲೇ ಉತ್ತಮವಾದ ಎಸ್‌ಐಟಿ ರಚನೆಯಾಗಿದೆ. ಇದು ಒಳ್ಳೆಯ ಬೆಳವಣಿಗೆ. ಅದಕ್ಕಾಗಿ ದೂರು ನೀಡಲು ಬಂದಿದ್ದೇನೆ. ಆದರೆ ಸೋಮವಾರ ಬರಲು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ನಾಳೆ ರಜೆ ಇದೆ. ಸೋಮವಾರ ಎಲ್ಲ ಮಾಹಿತಿಯನ್ನು ಅವರಿಗೆ ನೀಡುತ್ತೇನೆ. ಮುಂದಿನ ತನಿಖೆ ಏನಾಗುತ್ತದೆ ಎಂದು ನೋಡೋಣ. ಕೊಲೆಗಳನ್ನು ಯಾರೋ ಮಧ್ಯದ ವ್ಯಕ್ತಿ ನಿಂತು ಮುಚ್ಚಿ ಹಾಕಿದ್ದಾನೆ. ಧರ್ಮಸ್ಥಳದಲ್ಲಿ ಕೊಲೆಗಳು ಎಲ್ಲರಿಗೂ ಗೊತ್ತಿರುವ ವಿಚಾರ. ಭಯದಿಂದ ಯಾರೂ ಹೇಳುತ್ತಿರಲಿಲ್ಲ. ಇಂದು ರಾಜ್ಯ ಸರ್ಕಾರದ ಎಸ್‌ಐಟಿ ತಂಡ ಆ ಭಯವನ್ನೂ ದೂರ ಮಾಡಿದೆ. ಅದನ್ನು ನೋಡಿ ನಾನು ಮುಂದೆ ಬಂದಿದ್ದೇನೆ. ಇನ್ನೂ ಐದಾರು ಜನ ಸಾಕ್ಷಿಗಳು ಬರುವುದಾಗಿ ಹೇಳುತ್ತಿದ್ದಾರೆ. ತಮ್ಮ ನೋವುಗಳನ್ನು ಹಂಚಿಕೊಳ್ಳಲು ಸಿದ್ಧವಿದ್ದಾರೆ” ಎಂದು ವಿವರಿಸಿದರು.

“ನಾವು ಮೃತದೇಹಗಳನ್ನು ನೋಡಿದ್ದೇನೆ. ಯಾವುದೇ ಡೆಡ್‌ ಬಾಡಿ ಸಿಕ್ಕರೆ, ಅದನ್ನು ಆಸ್ಪತ್ರೆಗೆ ಸಾಗಿಸಬೇಕು, ಮರಣೋತ್ತರ ಪರೀಕ್ಷೆ ನಡೆಸಬೇಕು. ನಂತರ ಹೂತುಹಾಕಬೇಕು. ಆದರೆ ಯಾವುದೇ ಕಾರಣಕ್ಕೂ ಎಫ್‌ಐಆರ್ ಆಗಿಲ್ಲ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿಲ್ಲ. ಒಂದು ವಾರ ಕಾಲ ಹಾಗೆಯೇ ಬಿದ್ದಿದ್ದ ಬಾಲಕಿಯ ಮೃತದೇಹವನ್ನು ಪೊಲೀಸರಿಗೆ ತಿಳಿಸದೆ ಹೂತು ಹಾಕಿದ್ದನ್ನು ಕಣ್ಣಾರೆ ಕಂಡಿದ್ದೇನೆ. ನಾವು ಅಂದು ಬಾಯಿಬಿಡಲು ಆಗುತ್ತಿರಲಿಲ್ಲ. ಇಂದು ಇಷ್ಟೆಲ್ಲ ಇದ್ದರೂ ಹೇಳಲು ಆಗುತ್ತಿಲ್ಲ. ಇದನ್ನೆಲ್ಲ ಅಂದು ಕೂಡ ಹೇಳಲು ಆಗುತ್ತಿರಲಿಲ್ಲ” ಎಂದಿದ್ದಾರೆ.

‘ಅಂದು ಯಾಕೆ ಇದನ್ನೆಲ್ಲ ಪ್ರಶ್ನಿಸಲಿಲ್ಲ’ ಎಂದು ಮಾಧ್ಯಮಗಳು ಪದೇಪದೇ ಕೇಳಿದಾಗ, “ನನ್ನ ಕುಟುಂಬದ ಹೆಣ್ಣುಮಗಳ ಹೆಸರು ಪದ್ಮಲತಾ. ಆಕೆಗೆ ಏನಾಯಿತು? ಆ ಪ್ರಕರಣ ಏನಾಯಿತು? ಎಂಬುದನ್ನೆಲ್ಲ ಎಸ್‌ಐಟಿಗೆ ತಿಳಿಸುವವರೂ ಇದ್ದಾರೆ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ʼಬಾಂಬೆ ಬಾಯ್ಸ್‌ʼ ಪುಸ್ತಕ ಹೊರಬಂದರೆ ಮೂರೂ ಪಕ್ಷಗಳ ನಾಯಕರು ಬೆತ್ತಲು: ಎಚ್‌ ವಿಶ್ವನಾಥ್‌ ಹೊಸ ಬಾಂಬ್!‌

‘ಬಾಂಬೆ ಬಾಯ್ಸ್‌’ ಪುಸ್ತಕ ಪ್ರಕಟವಾದರೆ ರಾಜ್ಯದ ಮೂರೂ ಪ್ರಮುಖ ರಾಜಕೀಯ ಪಕ್ಷಗಳ...

ಪ್ರಜಾಪ್ರಭುತ್ವದ ಗಟ್ಟಿತನವಿರುವುದು ಪ್ರಜೆಗಳಿಗೆ ಸರ್ಕಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯ ಇರುವಲ್ಲಿ: ಸಿಎಂ ಡಿ.ಕೆ ಶಿವಕುಮಾರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ಹೊಣೆಗಾರಿಕೆಯೇ ಬುನಾದಿಯಾಗಿದೆ. ಎಲ್ಲರೂ ಸರ್ಕಾರಕ್ಕೆ ಕುರುಡಾಗಿ ತಲೆಬಾಗುವುದೇ...