ಪೊಲೀಸ್ ಅಧಿಕಾರಿ ಮೇಲೆ ಕೈಎತ್ತಿದ್ದ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

Date:

ಧಾರವಾಡದ ಎಎಸ್‌ಪಿ ಆಗಿದ್ದ ನಾರಾಯಣ.ವಿ.ಭರಮನಿ ಅವರ ಮೇಲೆ ಕೈಎತ್ತಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.

- Advertisement -

ಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ನಾರಾಯಣ ಅವರಿಗೆ ಸಾರ್ವಜನಿಕವಾಗಿ ಸಿಎಂ ಕೈಎತ್ತಿದ್ದು, ಈ ಸಂಬಂಧ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು ಕೋರಿ ಭೀಮಪ್ಪ ಗಡಾದ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಜಾ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಕೆಲ ತಿಂಗಳುಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನಕ್ಕೆ ಆಕ್ರೋಶಗೊಂಡಿದ್ದ ಸಿದ್ದರಾಮಯ್ಯ, ವೇದಿಕೆ ಮೇಲೆಯೇ ಧಾರವಾಡ ಎಎಸ್‌ಪಿ ನಾರಾಯಣ.ವಿ.ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಅವರನ್ನು ಹೇಗೆ ಒಳಗೆ ಬಿಟ್ಟಿದ್ದೀರಿ ಎಂದು ವೇದಿಕೆ ಮೇಲೆಯೇ ಎಎಸ್‌ಪಿ ನಾರಾಯಣ ಅವರನ್ನು ಕರೆದು ಹೊಡೆಯಲು ಕೈ ಎತ್ತಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಇನ್ನು ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು ಕೋರಿ ಭೀಮಪ್ಪ ಗಡಾದ ಎನ್ನುವರು ಕೋರ್ಟ್​​​ಗೆ ಖಾಸಗಿ ದೂರು ಸಲ್ಲಿಸಿದ್ದು, ಇದನ್ನು ಇಂದು (ಡಿಸೆಂಬರ್ 10) ಪರಿಶೀಲನೆ ಮಾಡಿದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಭೀಮಪ್ಪ ಗಡಾದ ಸಲ್ಲಿಸಿದ್ದ ಖಾಸಗಿ ದೂರು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ ಬರಮನಿ ಅವರನ್ನು ಸಿಎಂ ಸಿದ್ದರಾಮಯ್ಯನವರು ತಮ್ಮ ಆಪ್ತರ ಮೂಲಕ ಮನವೊಲಿಸಿದ್ದರು. ಅಲ್ಲದೇ ಧಾರವಾಡ ಎಎಸ್ಪಿಯಾಗಿದ್ದ ನಾರಾಯಣ ಬರಮನಿ ಅವರಿಗೆ ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿ ಹುದ್ದೆ ನೀಡಲಾಗಿದೆ. ಇದರೊಂದಿಗೆ ನಾರಾಯಣ ಬರಮನಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...