ಮಹಿಳಾ ಮೀಸಲಾತಿಯ ಜತೆ ಕ್ಷೇತ್ರ ಮರುವಿಂಗಡಣೆ ಸೇರಿಸಿದ್ದರಿಂದ ಮಸೂದೆ ವಿಫಲವಾಗಿದೆ: ಸಿದ್ದರಾಮಯ್ಯ

Date:

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ. ಮಹಿಳಾ ಮೀಸಲಾತಿಯ ಜತೆ ಕ್ಷೇತ್ರ ಮರುವಿಂಗಡಣೆ ಸೇರಿಸಿದ್ದರಿಂದ ಮಸೂದೆ ವಿಫಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಶನಿವಾರ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. “2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಮೀಸಲಾತಿ ಮರೆಯಲ್ಲಿ ಮೋದಿ ಸರ್ಕಾರದ ಮಸಲತ್ತು!

“ಕ್ಷೇತ್ರ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡಣೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದೆ” ಎಂದು ದೂರಿದರು.

ಜನಸಂಖ್ಯೆಯ ಆಧಾರದಲ್ಲಿ ನಡೆಯುವ ಕ್ಷೇತ್ರ ಮರುವಿಂಗಡಣೆಗೆ ದಕ್ಷಿಣ ಭಾರತದ ರಾಜ್ಯಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜನಸಂಖ್ಯೆಯನ್ನು ಯಶಸ್ವಿಯಾಗಿ ನಿಯಂತ್ರಿಸಿದ ಕರ್ನಾಟಕ, ತಮಿಳುನಾಡು ಮತ್ತು ಕೇರಳದಂತಹ ದಕ್ಷಿಣ ರಾಜ್ಯಗಳ ಲೋಕಸಭಾ ಸ್ಥಾನಗಳ ಸಂಖ್ಯೆ ಕಡಿಮೆಯಾಗುವ ಭೀತಿ ಉಂಟಾಗಿದೆ. ವಿರೋಧವಿರುವ ಈ ಮಸೂದೆಯ ಜತೆಗೆ ಮಹಿಳಾ ಮೀಸಲಾತಿ ಮಸೂದೆಯನ್ನು ಜೋಡಿಸಿ ಮಂಡಿಸುವ ಕೇಂದ್ರದ ನಿಲುವಿಗೆ ವಿರೋಧ ಪಕ್ಷಗಳ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಸೆಪ್ಟೆಂಬರ್ 2023ರಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ವಿಪಕ್ಷಗಳು ಬೆಂಬಲವಾಗಿ ನಿಂತಿತ್ತು. ಆದರೆ ಈಗ ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಿದ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದರೆ ಕ್ಷೇತ್ರ ಮರುವಿಂಗಡಣೆಯನ್ನೂ ಅಂಗೀಕರಿಸಿದಂತೆ. ಈ ಕಾರಣದಿಂದಾಗಿ ವಿಪಕ್ಷಗಳು ಈ ಸಂವಿಧಾನ ತಿದ್ದುಪಡಿ ವಿರುದ್ಧವಾಗಿ ನಿಂತಿತು. ಚುನಾವಣಾ ಸಮಯದಲ್ಲಿ ಲಾಭಕ್ಕಾಗಿಯೇ ಈ ತಂತ್ರ ರೂಪಿಸಿದ ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಈಗ ವಿಪಕ್ಷಗಳನ್ನು ಮಹಿಳಾ ವಿರೋಧಿ ಎಂದು ಬಿಂಬಿಸುವ ಯತ್ನ ಮಾಡುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ 5 ವರ್ಷದ ಶ್ರಮ ಕಳವು’: ಬ್ಲಾಕ್‌ಮೇಲ್‌ಗೆ ಬೇಸತ್ತು ಯೂಟ್ಯೂಬರ್ ಹರೀಶ್ ಆತ್ಮಹತ್ಯೆ

ಸೋಷಿಯಲ್ ಮೀಡಿಯಾದಲ್ಲಿ 'ಫೈನಾನ್ಸ್ ವಿತ್ ಹರೀಶ್' ಹೆಸರಿನಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಡಿಯೋಗಳನ್ನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...