ಬಿಟ್‌ಕಾಯಿನ್ ಹಗರಣ: ಆರೋಪಿಗಳ ವಿರುದ್ಧ 3,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

Date:

ಕರ್ನಾಟಕದಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯ (ED), ಪ್ರಕರಣದ ಮಾಸ್ಟರ್ ಮೈಂಡ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ‘ಶ್ರೀಕಿ’ ಸೇರಿದಂತೆ ಒಟ್ಟು ಮೂವರು ಪ್ರಮುಖ ಆರೋಪಿಗಳ ವಿರುದ್ಧ 3,500 ಪುಟಗಳ ಬೃಹತ್ ದೋಷಾರೋಪ ಪಟ್ಟಿಯನ್ನು ನಗರದ ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

- Advertisement -

ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವಂತೆ, ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಆಗಿದ್ದು, ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವ ಕಲೆ ಕರಗತ ಮಾಡಿಕೊಂಡಿದ್ದನು. ಈತ ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಜಾಲತಾಣವನ್ನು ಹ್ಯಾಕ್ ಮಾಡಿ 11.5 ಕೋಟಿ ರೂ. ಲಪಟಾಯಿಸಿದ್ದಾಗಿ ಇಡಿ ತನ್ನ ವರದಿಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಈ ಹಗರಣದಲ್ಲಿ ಇನ್ನುಳಿದ ಇಬ್ಬರು ಪ್ರಮುಖ ಆರೋಪಿಗಳಾದ ಉದ್ಯಮಿ ಸುನೀಶ್ ಹೆಗ್ಡೆ ಮತ್ತು ಕ್ರಿಪ್ಟೋ ಕರೆನ್ಸಿ ವ್ಯಾಪಾರಿ ರಾಬಿನ್ ಖಂಡೇವಾಲಾ ಅವರ ಪಾತ್ರವನ್ನೂ ಇಡಿ ಬಯಲು ಮಾಡಿದೆ.

ರಾಜಕೀಯ ನಂಟು ಹೊಂದಿದ್ದ ಉದ್ಯಮಿ ಸುನೀಶ್ ಹೆಗ್ಡೆ, ಶ್ರೀಕಿಯ ಐಷರಾಮಿ ಜೀವನಕ್ಕೆ ಹಣಕಾಸಿನ ನೆರವು ನೀಡುತ್ತಿದ್ದನು. ಅಲ್ಲದೆ, ಆನ್‌ಲೈನ್ ಗೇಮಿಂಗ್ ಆ್ಯಪ್‌ಗಳನ್ನು ಹ್ಯಾಕ್ ಮಾಡುವಂತೆ ಪ್ರೇರೇಪಿಸಿ, ಸಂತ್ರಸ್ತ ಕಂಪನಿಗಳಿಂದ ಸುಲಿಗೆ ಮೂಲಕ 2 ಕೋಟಿ ರೂ. ನಗದು ಹಾಗೂ ಕ್ಯಾಸಿನೋ ಚಿಪ್‌ಗಳನ್ನು ವಸೂಲಿ ಮಾಡಿದ್ದ.

ಜಾಗತಿಕ ಮಟ್ಟದ ಕ್ರಿಪ್ಟೋ ವ್ಯಾಪಾರಿಯಾಗಿದ್ದ ರಾಬಿನ್ ಖಂಡೇವಾಲಾ, ಶ್ರೀಕಿ ಮತ್ತು ಸುನೀಶ್ ಹೆಗ್ಡೆ ಕದ್ದಿದ್ದ ಬಿಟ್‌ಕಾಯಿನ್‌ಗಳನ್ನು ಕ್ರಿಪ್ಟೋ ಕರೆನ್ಸಿ ಮೂಲಕ ನಗದೀಕರಿಸುತ್ತಿದ್ದನು. ನಂತರ, ಈ ಹಣವನ್ನು ಶ್ರೀಕಿ ಗ್ಯಾಂಗ್‌ನವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವ ಮೂಲಕ ಹಣದ ಸುರುಳಿಯನ್ನು ನಿರ್ವಹಿಸುತ್ತಿದ್ದನು.

ಇದನ್ನೂ ಓದಿ: ಮಗುವಿನ ಜವಾಬ್ದಾರಿ ಹೊರದ ತಂದೆಗೆ ಭೇಟಿಯ ಹಕ್ಕಿಲ್ಲ: ಕರ್ನಾಟಕ ಹೈಕೋರ್ಟ್

2017ರಲ್ಲಿ ಯುನಿಕಾನ್ ಕ್ರಿಪ್ಟೋ ಎಕ್ಸ್‌ಚೇಂಜ್‌ನಲ್ಲಿ 60 ಬಿಟ್‌ಕಾಯಿನ್‌ಗಳನ್ನು ಹ್ಯಾಕ್ ಮಾಡುವ ಮೂಲಕ ತಮ್ಮ ಕೃತ್ಯ ಆರಂಭಿಸಿದ್ದ ಶ್ರೀಕಿ ಗ್ಯಾಂಗ್, 2018-19ರ ಅವಧಿಯಲ್ಲಿ ರಾಜ್ಯ ಸರ್ಕಾರದ ಇ-ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಹ್ಯಾಕ್ ಮಾಡಿ ಕೋಟ್ಯಂತರ ರೂಪಾಯಿ ದೋಚಿತ್ತು. 2020ರಲ್ಲಿ ಡ್ರಗ್ಸ್ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದಾಗ ಶ್ರೀಕಿಯ ಹ್ಯಾಕಿಂಗ್ ಜಾಲದ ಅಸಲಿ ಮುಖ ಜಗಜ್ಜಾಹೀರಾಯಿತು. ಈ ಬಹುಕೋಟಿ ಹಗರಣದ ತನಿಖೆಗಾಗಿ ರಾಜ್ಯ ಸರ್ಕಾರ 2023ರಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಬಳಿಕ, ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸಿದ ಇಡಿ, ಕಳೆದ ಏಪ್ರಿಲ್‌ನಲ್ಲಿ ದಾಳಿ ನಡೆಸಿ ಮೇ ತಿಂಗಳಲ್ಲಿ ಶ್ರೀಕಿ, ಸುನೀಶ್ ಹೆಗ್ಡೆ ಮತ್ತು ರಾಬಿನ್ ಖಂಡೇವಾಲಾರನ್ನು ಬಂಧಿಸಿತ್ತು. ಸದ್ಯ ಈ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ಇಳಕಲ್ | SIR ರದ್ದು, ಜ್ಞಾನೇಶ್ ಕುಮಾರ್ ವಜಾಕ್ಕೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪಗಳು...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...