ದೇಶದ ವಿದ್ಯಾರ್ಥಿಗಳನ್ನು ‘ದೇಶದ್ರೋಹಿ’ಗಳು ಎಂದ ಬಿಜೆಪಿ; ಉಡುಪಿಯಲ್ಲಿ ಕೋಮುವಾದಿಗಳ ಪ್ರತಿಭಟನೆ

Date:

ನೀಟ್ ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶಾಂತಿ ಮತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ ದೇಶದ ಲಕ್ಷಾಂತರ ವಿದ್ಯಾರ್ಥಿ-ಯುವಜರನ್ನು ‘ದೇಶದ್ರೋಹಿ’ಗಳು ಬಿಜೆಪಿ ಕರೆದಿದೆ. ಬೃಹತ್ ಹೋರಾಟ ನಡೆಸಿ, ಕೇಂದ್ರ ಸರ್ಕಾರವನ್ನು ಮಣಿಸಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡುವೆಂತ ಮಾಡಿದ ಕಾಕ್ರೋಚ್‌ಗಳ ವಿರುದ್ಧ ಮಂಗಳವಾರ, ಉಡುಪಿಯಲ್ಲಿ ಬಿಜೆಪಿ ಪ್ರತಿಭಟನೆ ಆಯೋಜಿಸಿದೆ.

- Advertisement -

ಬಿಜೆಪಿಯ ಉಡುಪಿ ಘಟಕವು ತನ್ನ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟರ್‌ನಲ್ಲಿ, “ದೇಶದ್ರೋಹಿಗಳು ಅಷ್ಟು ಸಂಖ್ಯೆಯಲ್ಲಿ ಒಟ್ಟಾಗುವಾಗ ದೇಶಪ್ರೇಮಿಗಳ ಒಗ್ಗಟ್ಟಿನ ಶಕ್ತಿ ಪ್ರದರ್ಶನ ಆಗಲೇಬೇಕು” ಎಂಬ ವಾಕ್ಯವನ್ನು ಬಳಸಿದೆ. ಪರೀಕ್ಷಾ ಅಕ್ರಮದ ವಿರುದ್ಧ ಧ್ವನಿ ಎತ್ತಿದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳನ್ನು ‘ದೇಶದ್ರೋಹಿಗಳು’ ಎಂದು ಸಾರ್ವಜನಿಕವಾಗಿ ಕರೆದಿದೆ. ವಿದ್ಯಾರ್ಥಿಗಳ ಹೋರಾಟವನ್ನು ‘ಅರಾಜಕತೆ’ ಎಂದು ಬಿಂಬಿಸಲು ಯತ್ನಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದೇ ವಿದ್ಯಾರ್ಥಿಗಳ ಹೋರಾಟಕ್ಕೆ ಮೋದಿ ಸರ್ಕಾರ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನೂ ನೀಡಿದ್ದಾರೆ. ದೇಶಾದ್ಯಂತ ಹೋರಾಟ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಬಲವಂತದ ಅಥವಾ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಮೋದಿ ಸರ್ಕಾರ ಭರವಸೆಯನ್ನೂ ನೀಡಿದೆ. ಆದರೂ, ಬಿಜೆಪಿಗರು ಇದೇ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳು, ಅರಾಜಕತೆ ಹುಟ್ಟುಹಾಕಿದವರು ಎಂದು ಕರೆಯುತ್ತಿದ್ದಾರೆ. ಪ್ರಜಾತಾಂತ್ರಿಕವಾಗಿ ಪ್ರತಿಭಟನೆ ನಡೆಸಿದವರನ್ನೇ ದೂಷಿಸುತ್ತಿರುವ ಬಿಜೆಪಿ, ತನ್ನೊಳಗಿನ ವಿಕೃತಿಯನ್ನು ಮತ್ತೆ-ಮತ್ತೆ ಹೊರಹಾಕುತ್ತಿದೆ

ಬಿಜೆಪಿ 27

 ದೇಶಾದ್ಯಂತ ಲಕ್ಷಾಂತರ ಯುವಜನರ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಪರೀಕ್ಷಾ ಮಾಫಿಯಾವನ್ನು ಮಟ್ಟಹಾಕಲು ವಿಫಲವಾಗಿರುವ ಕೇಂದ್ರ ಸರ್ಕಾರ, ತನ್ನ ವೈಫಲ್ಯದಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಈ ರೀತಿಯ ಪ್ರತಿಕಾರದ ಪ್ರತಿಭಟನೆಗಳನ್ನು ಆಯೋಜಿಸುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ವಿದ್ಯಾರ್ಥಿಗಳು ಕೇಳುತ್ತಿರುವ ಸರಳ ಪ್ರಶ್ನೆಗಳಿಗೆ ಉತ್ತರ ನೀಡುವ ಬದಲು, ಹೋರಾಟಗಾರರಿಗೆ ‘ದೇಶದ್ರೋಹಿ’ ಎಂದು ಹಣೆಪಟ್ಟಿ ಕಟ್ಟಿ ಜನಾಭಿಪ್ರಾಯವನ್ನು ದಾರಿ ತಪ್ಪಿಸಲು ಬಿಜೆಪಿ ಮುಂದಾಗಿದೆ ಎಂದು ವಿದ್ಯಾರ್ಥಿ-ಯುವಜನರ ಸಂಘಟನೆಗಳು ಖಂಡಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...

ಕಲಬುರಗಿ | ಕಾಣೆಯಾದ ಮಕ್ಕಳ ಪತ್ತೆಗೆ ವಿಶೇಷ ಕಾರ್ಯಪಡೆ ಸಮಿತಿ ಸಭೆ

ನಗರ ಪೊಲೀಸ್ ಆಯುಕ್ತಾಲಯದ ಪೊಲೀಸ್ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ,...

ಕಲಬುರಗಿ | ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪಾಲಿಕೆ ಎದುರುಗಡೆ ಪ್ರತಿಭಟನೆ

ನಗರದ ವಾರ್ಡ್‌ ನಂ. 2ರ ಕೆ.ಕೆ. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ...