ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಅಸೂಕ್ಷ್ಮತೆ ಮೆರೆದ ಬಿಜೆಪಿ: ಸಿದ್ದರಾಮಯ್ಯ ವಾಗ್ದಾಳಿ

Date:

ರಾಜ್ಯ ಹೈಕೋರ್ಟ್‌ನ ನಿರ್ಬಂಧದ ಹೊರತಾಗಿಯೂ ದುರುಳರಿಂದ ದೌರ್ಜನ್ಯಕ್ಕೆ ಒಳಗಾಗಿರುವ ಬೆಳಗಾವಿಯ ಸಂತ್ರಸ್ತ ಮಹಿಳೆಯನ್ನು ಭೇಟಿ‌ಮಾಡುವ ಮೂಲಕ ಬಿಜೆಪಿ ನಾಯಕರು ನ್ಯಾಯಾಲಯದ ಸೂಚನೆಯನ್ನು ಉಲ್ಲಂಘಿಸಿ ಅಗೌರವಿಸಿರುವುದು ಮಾತ್ರ ಅಲ್ಲ ತಮ್ಮ ಅಸೂಕ್ಷ್ಮತೆಯನ್ನು‌ ಮೆರೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮಹಿಳೆಯ ವಿವಸ್ತ್ರ ಪ್ರಕರಣದ ಸಂತ್ರಸ್ತೆಯನ್ನು ಭೇಟಿ ಮಾಡದಂತೆ ಹೈಕೋರ್ಟ್‌ ನಿರ್ಬಂಧ ನೀಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, “ಸಂತ್ರಸ್ತ ಮಹಿಳೆಯು ಮಾನಸಿಕವಾಗಿ ತೀವ್ರವಾಗಿ ಜರ್ಝರಿತರಾಗಿರುವ ಹಿನ್ನೆಲೆಯಲ್ಲಿ ಹಾಗೂ ಮಾನಸಿಕ ಆಘಾತದಲ್ಲಿರುವ ಈ ಸಂದರ್ಭದಲ್ಲಿ ಆಕೆಯ ಭೇಟಿಗೆ ಅಗಮಿಸುವವರನ್ನು ನಿರ್ಬಂಧಿಸಬೇಕು ಎಂದು ಹೈಕೋರ್ಟ್ ಮುಖ್ಯನ್ಯಾಯಾಧೀಶರು ಸ್ವಯಂಪ್ರೇರಿತರಾಗಿ ಇಂದು ಬೆಳಿಗ್ಗೆ ಸೂಚಿಸಿದ್ದರು. ರಾಜಕೀಯ ನಾಯಕರು ಸಂತ್ರಸ್ತ ಮಹಿಳೆಯನ್ನು‌ ಭೇಟಿಯಾಗುವ ಸುದ್ದಿಯ ಹಿನ್ನೆಲೆಯಲ್ಲಿಯೇ ಮುಖ್ಯನ್ಯಾಯಾಧೀಶರು ಈ ಸೂಚನೆ ನೀಡಿರುವುದು‌ ಗಮನಾರ್ಹ” ಎಂದು ಹೇಳಿದ್ದಾರೆ.

“ಮಹಿಳೆಯು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂದರ್ಶಕರ ಭೇಟಿಯು ಆಕೆಯ ಆರೋಗ್ಯ ಹಾಗೂ ಚಿಕಿತ್ಸೆಯ ಮೇಲೆ ಪರಿಣಾಮ ಬೀರಲಿದೆ. ಹಾಗಾಗಿ, ಮಹಿಳೆಯ ಹಿತದೃಷ್ಟಿಯಿಂದ ಸಂದರ್ಶಕರ ಭೇಟಿಯನ್ನು ನಿರ್ಬಂಧಿಸುವುದು ಅಗತ್ಯ ಎಂದು ತಾನು ಭಾವಿಸುವುದಾಗಿ ಹೈಕೋರ್ಟ್ ಹೇಳಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಯಾವುದೇ ವ್ಯಕ್ತಿ, ಸಮೂಹ, ಗುಂಪು, ಸಂಘಟನೆ, ರಾಜಕೀಯ ಪಕ್ಷಗಳು ಹಾಗೂ ಇನ್ನಿತರರು ಮಹಿಳೆಯ ಚಿಕಿತ್ಸೆಯ ಹೊಣೆ ಹೊತ್ತಿರುವ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಯವರ ಪೂರ್ವ ಲಿಖಿತ ಅನುಮತಿ ಇಲ್ಲದೇ ಸಂತ್ರಸ್ತ ಮಹಿಳೆಯನ್ನು ಭೇಟಿಯಾಗಬಾರದು ಎಂದು ಹೈಕೋರ್ಟ್ ಆದೇಶಿಸಿತ್ತು. ಹೀಗಿದ್ದರೂ ಒಂದು‌ ಅಮಾನುಷ ಘಟನೆಯನ್ನು ರಾಜಕೀಯ ಲಾಭಕ್ಕೆ ಬಳಸುವ ದುರ್ಬುದ್ಧಿ ತೋರಿರುವ ಬಿಜೆಪಿ ನಾಯಕರು ಸತ್ಯಶೋಧನೆಯ ಹೆಸರಿನಲ್ಲಿ ನ್ಯಾಯಾಲಯದ ಆದೇಶ, ನಿರ್ದೇಶನಗಳನ್ನು ಗಾಳಿಗೆ ತೂರಿ ಸಂತ್ರಸ್ತೆಯನ್ನು ಭೇಟಿಯಾಗಿದ್ದಾರೆ. ಸಂತ್ರಸ್ತೆಯ ಸೂಕ್ಷ್ಮ ಮಾನಸಿಕ ಸ್ಥಿತಿಯ ಬಗ್ಗೆ ಎಳ್ಳಷ್ಟೂ ಗೌರವವಿಲ್ಲದ ಸಂವೇದನಾಶೂನ್ಯ ಬಿಜೆಪಿ ನಾಯಕರು ಹಾಗೂ ಅವರ ಬೆನ್ನಿಗೆ ನಿಂತು ಚಿತಾವಣೆ ನಡೆಸುತ್ತಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ನಡೆ-ನುಡಿಯನ್ನು ನಾಗರಿಕ‌ ಸಮಾಜ ಖಂಡಿಸಬೇಕಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ...

ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ...

ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು...

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದೂಡಿದ ಹೈಕೋರ್ಟ್

ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬಿಜೆಪಿ ಹಿರಿಯ...