ಬಿಜೆಪಿಯವರು ಕುಮಾರಸ್ವಾಮಿ ಆಡಿಷನ್ ಮಾಡುತ್ತಿದ್ದಾರೆ: ಎಂ ಲಕ್ಷ್ಮಣ್ ಲೇವಡಿ

Date:

  • ಎಚ್‌ಡಿಕೆ ಕಾರ್ಯವೈಖರಿ ನೋಡಿ ಅವರಿಗೆ ಬಿಜೆಪಿಯಲ್ಲಿ ಸ್ಥಾನಮಾನ
  • ಕುಮಾರಸ್ವಾಮಿ ಅವರ ನಾಟಕವನ್ನು ಜನ ನೋಡುತ್ತಿದ್ದಾರೆ: ಕಿಡಿ

ಬಿಜೆಪಿಯವರು ಕಳೆದ ಮೂರು ತಿಂಗಳಿಂದ ಕುಮಾರಸ್ವಾಮಿ ಅವರ ಆಡಿಷನ್ ಮಾಡುತ್ತಿದೆ. ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೇಗೆ ವಾಗ್ದಾಳಿ ಮಾಡುತ್ತಾರೆ ಎಂಬುದರ ಆಧಾರದ ಮೇಲೆ ಮುಂದೆ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ನೀಡಬೇಕು ಎಂಬುದನ್ನು ನಿರ್ಧರಿಸಲಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಲೇವಡಿ ಮಾಡಿದರು.

- Advertisement -

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದ್ದರೆ, ಯಾರದೋ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ಜತೆ ನಂಟು ಹಾಕುತ್ತಿರುತ್ತಿರಲಿಲ್ಲ. ಇವರ ನಾಟಕವನ್ನು ಜನ ನೋಡುತ್ತಿದ್ದಾರೆ. ಅವರು ಮುಠ್ಠಾಳರಲ್ಲ. ಈಗಾಗಲೇ ಅವರು ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದ್ದು, ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸಲಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ನಿನ್ನೆ ಐಟಿ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಹಾಗೂ ಕುಮಾರಸ್ವಾಮಿ ಅವರಿಗೆ ಇದನ್ನು ಸಾಧ್ಯವಾದರೆ ಅರ್ಥ ಮಾಡಿಕೊಳ್ಳಲಿ. ಈ ಹೇಳಿಕೆಯಲ್ಲಿ ಎಲ್ಲಾದರೂ ಒಂದು ಕಡೆ ಇದಕ್ಕೂ ಕಾಂಗ್ರೆಸ್ ಮುಖಂಡರಿಗೆ ಲಿಂಕ್ ತೋರಿಸಿದ್ದಾರಾ? ಐಟಿ ಇಲಾಖೆ ಹೇಳಿಕೆಯಲ್ಲಿ ತೆರಿಗೆ ವಂಚನೆ ಉದ್ದೇಶದಿಂದ ಕೆಲವು ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಹಣವನ್ನು ವೈಟ್ ಮಾತ್ರವಲ್ಲದೇ, ಡಿಜಿಟಲ್ ಮಾರ್ಗದಲ್ಲಿ ವ್ಯವಹಾರ ಮಾಡದೇ, ನಗದಿನ ರೂಪದಲ್ಲಿ ವ್ಯವಹಾರ ಮಾಡಿದ್ದಾರೆ. ಐಟಿ ಇಲಾಖೆ ಸ್ಪಷ್ಟ ಹೇಳಿಕೆ ನೀಡಿದ ನಂತರವೂ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಅವರಿಗೆ ಮರ್ಯಾದೆ ಇದೆಯಾ?” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎರಡು ದೇಶಗಳ ಸ್ಥಾಪನೆ- ಇಸ್ರೇಲ್ ಪ್ಯಾಲೆಸ್ತೀನಿ ಕದನಕ್ಕೆ ಕಾಯಂ ಪರಿಹಾರ

“ಬಿಜೆಪಿಯ ಒಕ್ಕಲಿಗ ಸಮುದಾಯದ ಮುಖಂಡರುಗಳ ಜತೆ ಸೇರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಕುಟುಂಬವನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾಳೆ ಏನಾದರೂ ಶಿವಕುಮಾರ್ ಅವರಿಗೆ ತೊಂದರೆ ಆದರೆ ಕುಮಾರಸ್ವಾಮಿ, ಸಿ.ಟಿ ರವಿ, ಅಶ್ವತ್ಥನಾರಾಯಣ, ಆರ್ ಅಶೋಕ್ ಅವರೇ ನೇರ ಹೊಣೆ. ಶಿವಕುಮಾರ್ ಅವರು ಡಿಸಿಎಂ ಆಗಿರುವುದನ್ನು ಸಹಿಸಲು ಆಗುತ್ತಿಲ್ಲ. ಬ್ಯ್ರಾಂಡ್ ಬೆಂಗಳೂರು ಮಾಡಲು ಹೊರಟರೆ ಅದರ ಬಗ್ಗೆ ಕೇವಲವಾಗಿ ಮಾತನಾಡುತ್ತಾರೆ. ನಿಮ್ಮ ಯೋಗ್ಯತೆಗೆ ಬೆಂಗಳೂರಿಗೆ ಸರಿಯಾದ ಅನುದಾನ ನೀಡಲಿಲ್ಲ. ಬೆಂಗಳೂರಿನಲ್ಲಿ 25 ಸಾವಿರ ರಸ್ತೆಗುಂಡಿಗಳಿವೆ ಎಂದು ಕೋರ್ಟ್‌ಗೆ ಅಫಿಡವಿಟ್ ಕೊಟ್ಟಿದ್ದಿರಿ. ಈಗ ನೀವು ಟೀಕೆ ಮಾಡುತ್ತೀರಾ?” ಎಂದು ಕಿಡಿಕಾರಿದರು.

“ನನ್ನ ಪ್ರಕಾರ ಮೋದಿ ಅವರಿಗೆ ಕರ್ನಾಟಕ ಹಾಗೂ ಕನ್ನಡಿಗರನ್ನು ಕಂಡರೆ ಸಿಟ್ಟಿದೆ. ಅದೇ ಕಾರಣಕ್ಕೆ ಸುಮಾರು 15-20 ಚಿನ್ನಾಭರಣ ಮಳಿಗೆ ರೈಡ್ ಮಾಡಿಸಿದ್ದಾರೆ. ಇವರಿಗೂ ಕಾಂಗ್ರೆಸ್ ಗೂ ಏನು ಸಂಬಂಧ? ಇವರ ಜತೆಗೆ 25 ಜೋತಿಷಿಗಳ ಮೇಲೂ ದಾಳಿ ಮಾಡಿಸಿದ್ದೀರಿ. ಅವರ ಮನೆಯಲ್ಲಿ ಏನು ಸಿಗದೇ ಇದ್ದಾಗ ಐಟಿ ಅಧಿಕಾರಿಗಳು ಜೋತಿಷ್ಯ ಕೇಳಿಕೊಂಡು ಹೋಗಿದ್ದಾರೆ” ಎಂದು ವ್ಯಂಗ್ಯವಾಡಿದರು.

“ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರಿಗೆ ದಿನಬೆಳಗಾದರೆ ಇವರ ಸುಳ್ಳು ಆರೋಪಗಳಿಗೆ ಪ್ರತಿಕ್ರಿಯೆ ನೀಡುವುದೇ ದೊಡ್ಡ ಸವಾಲಾಗಿದೆ. ಹೀಗಾಗಿ ಜನರು 2024ರ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್‌ಗೆ ಮತ್ತೊಮ್ಮೆ ಪಾಠ ಕಲಿಸಿದಾಗ ಮಾತ್ರ ಅವರು ಸುಮ್ಮನಾಗುತ್ತಾರೆ” ಎಂದರು.

“ಕುಮಾರಸ್ವಾಮಿ ಅವರು ತಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಅವರು ಕೇಳಿರುವ ಪ್ರಶ್ನೆಗಳಿಗೆ ಉತ್ತರ ನೀಡಲಿ. ನೀವು ಎನ್‌ಡಿಎ ಅನ್ನುತ್ತೀರಿ. ಅವರು ಇಂಡಿಯಾಗೆ ಬೆಂಬಲ ಎನ್ನುತ್ತಾರೆ. ನಿಮಗೆ ಮುಸಲ್ಮಾನರು, ಪರಿಶಿಷ್ಟ ಜಾತಿ, ಪಂಗಡ, ಇಂತರೆ ಸಮುದಾಯದವರು ಬೇಡವಾಗಿದ್ದಾರೆ. ಜೆಡಿಎಸ್‌ ಪಕ್ಷವನ್ನು ನೀವೊಬ್ಬರೇ ಕಟ್ಟಿದ್ದೀರಾ? ಬೇರೆಯವರು ಕಟ್ಟಿಲ್ಲವೇ? ಚಾಮುಂಡಿ ಬೆಟ್ಟದ ಮೇಲೆ ಬಂದು ಸುಳ್ಳು ಹೇಳುತ್ತೀರಿ. ಇದನ್ನು ನೀವು ನಿಲ್ಲಿಸಬೇಕು. ಇಲ್ಲದಿದ್ದರೆ ಒಕ್ಕಲಿಗ ಸಮುದಾಯದವರೇ ನಿಮ್ಮ ವಿರುದ್ಧ ತಿರುಗಿ ಬೀಳುತ್ತಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...