ಬಿಜೆಪಿಯವರು ದ್ವೇಷ ಭಾಷಣದ ಪಿತಾಮಹರು: ಡಿ ಕೆ ಶಿವಕುಮಾರ್‌ ವಾಗ್ದಾಳಿ

Date:

ಜಾತಿ-ಜಾತಿಗಳು, ಧರ್ಮ-ಧರ್ಮಗಳ ಮಧ್ಯೆ ದ್ವೇಷ ಬಿತ್ತುವ, ವೈಯಕ್ತಿಕ ನಿಂದನೆಯ ಪಿತಾಮಹರು ಈ ಬಿಜೆಪಿವವರು. ಸಂವಿಧಾನದ ಆಶಯಗಳ ಪ್ರಕಾರ ಅವರು ನಡೆದುಕೊಳ್ಳಲಿ. ಸಂವಿಧಾನಕ್ಕೆ ಗೌರವ ಕೊಡುವ ಇಚ್ಛೆ ಅವರಿಗಿದ್ದರೆ, ಅದನ್ನು ಪಾಲಿಸಲಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

- Advertisement -

ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತು ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿ, “ದ್ವೇಷ ಮಾಡಣ ಮಾಡದೇ ಹೋದರೆ ಸಮಸ್ಯೆಯೇ ಇರುವುದಿಲ್ಲವಲ್ಲ. ಸಂವಿಧಾನದ ರಕ್ಷಣೆಗೆ ನಾವು ಈ ಕ್ರಮ ಕೈಗೊಂಡಿದ್ದೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ನೆಹರು ಮತ್ತು ಇಂದಿರಾ ಗಾಂಧಿ ಅವರು ಮತ ಕಳ್ಳತನ ಮಾಡಿದ್ದರು ಎಂಬ ಅಮಿತ್ ಶಾ ಹೇಳಿಕೆ ಬಗ್ಗೆ ಕೇಳಿದಾಗ, “ಅಮಿತ್ ಶಾ ಅವರು ಈ ಬಗ್ಗೆ ಕನಿಷ್ಠ ಜ್ಞಾನ ಹೊಂದಿರಬೇಕು. ಅವರ ಕಾಲದಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತಿತ್ತು. ಹೀಗಿರುವಾಗ ಮತ ಕಳ್ಳತನ ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

ಕೆಎಸ್‌ಸಿಎ ಮನವಿ ಬಗ್ಗೆ ನಾವು ಮುಕ್ತ ಮನಸ್ಸಿನಲ್ಲಿದ್ದೇವೆ

ಕೆಎಸ್‌ಸಿಎ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು ನಿಮ್ಮನ್ನು ಭೇಟಿಯಾಗಿ ಸಲ್ಲಿಸಿರುವ ಮನವಿಯನ್ನು ಸಚಿವ ಪುಟ ಸಭೆಯಲ್ಲಿ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, “ಕೆಎಸ್‌ಸಿಎ ನೂತನ ಅಧ್ಯಕ್ಷರಾದ ವೆಂಕಟೇಶ್ ಪ್ರಸಾದ್ ಅವರು ನನ್ನನ್ನು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಅವರು ಮನವಿ ನೀಡಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರ್ಘಟನೆ ಆಗಬಾರದಿತ್ತು. ಆದರೂ ಆಗಿದೆ. ಅನೇಕ ತಪ್ಪುಗಳು ನಡೆದಿವೆ. ಇವುಗಳನ್ನು ಸರಿಪಡಿಸಿಕೊಂಡು, ಪ್ರತ್ಯೇಕ ಮಾರ್ಗಸೂಚಿ ಅನುಸಾರ ಜನ ಸಂದಣಿ ನಿಯಂತ್ರಣ ಮಾಡಬೇಕಾಗುತ್ತದೆ” ಎಂದರು.

“ಕ್ರಿಕೆಟ್ ವಿಚಾರದಲ್ಲಿ ನಾನು ವೈಯಕ್ತಿಕವಾಗಿ ಮುಕ್ತ ಮನಸ್ಸಿನಿಂದ ಇದ್ದೇನೆ. ನಮ್ಮ ರಾಜ್ಯದ ಗೌರವ ಹಾಳು ಮಾಡಿಕೊಳ್ಳುವುದು ಬೇಡ. ಈ ವಿಚಾರವನ್ನು ಸಚಿವ ಸಂಪುಟ ಸಭೆಯ ಮುಂದಿಟ್ಟು ನಂತರ ನಿರ್ಧಾರ ಕೈಗೊಳ್ಳಲಾಗುವುದು”‌ ಎಂದು ತಿಳಿಸಿದರು.

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದಿರುವ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...

ಅರಮನೆ ಸರ್ಕಾರದ್ದು; ರಾಜವಂಶಸ್ಥರಿಗೆ ವಾಸಿಸಲು ಜಾಗ ಕೊಟ್ಟಿದ್ದೇವೆ: ಸಚಿವ ಯತೀಂದ್ರ

ದಸರಾ ಆಚರಣೆಯಲ್ಲಿ ಸಮನ್ವಯದ ಕೊರತೆಯಿತ್ತು ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ...