ಸಿಜೆಐ ಮೇಲೆ ಶೂ ಎಸೆದ ವಕೀಲನಿಗೆ ಮೆಚ್ಚುಗೆ: ವ್ಯಾಪಕ ಟೀಕೆ ಬೆನ್ನಲ್ಲೇ ಬಿಜೆಪಿ ಭಾಸ್ಕರ್ ರಾವ್ ಕ್ಷಮೆಯಾಚನೆ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲನಿಗೆ ಬೆಂಬಲ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕಾಗಿ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿಜೆಪಿ ನಾಯಕ ಭಾಸ್ಕರ್ ರಾವ್ ಅವರು ಕ್ಷಮೆಯಾಚಿಸಿದ್ದಾರೆ ಮತ್ತು ತಮ್ಮ ಪೋಸ್ಟ್‌ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

- Advertisement -

ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರಾಗಿರುವ ಭಾಸ್ಕರ್ ರಾವ್ ರಾವ್, ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರ ಕೃತ್ಯವನ್ನು ಪ್ರಶಂಸಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ಗೆ ನೂರು, ನ್ಯಾಯಮೂರ್ತಿಗಳ ಮೇಲೆ ಶೂ ತೂರು

“ಇದು ಕಾನೂನಿನ ಪ್ರಕಾರ ತಪ್ಪಾದರೂ, ಈ ವಯಸ್ಸಿನಲ್ಲಿ ಯಾವುದೇ ಪರಿಣಾಮಗಳನ್ನು ಲೆಕ್ಕಿಸದೆ ನಿಲುವು ತೆಗೆದುಕೊಂಡು ಅದರಲ್ಲಿ ದೃಢವಾಗಿ ನಿಲ್ಲುವ ನಿಮ್ಮ ಧೈರ್ಯವನ್ನು ನಾನು ಮೆಚ್ಚುತ್ತೇನೆ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಭಾಸ್ಕರ್ ರಾವ್ ವಕೀಲನಿಗೆ ಪ್ರಶಂಸಿಸಿದ್ದರು.

ಈ ಕುರಿತು ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮತ್ತೆ ಪ್ರತಿಕ್ರಿಯಿಸಿದ ಭಾಸ್ಕರ್ ರಾವ್, “ಇಷ್ಟೊಂದು ಶಿಕ್ಷಿತ, ವಯಸ್ಕ, ಕಾನೂನುಬದ್ಧವಾಗಿ ತನ್ನ ಕೃತ್ಯ ತಪ್ಪು ಎಂದು ಮತ್ತು ಅದರ ಪರಿಣಾಮಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದರೂ ವ್ಯಕ್ತಿಯೊಬ್ಬರು ಈ ರೀತಿ ಮಾಡಿರುವುದಕ್ಕೆ ನನ್ನ ದಿಗ್ಭ್ರಮೆ ಮತ್ತು ಅಚ್ಚರಿಯ ಪ್ರತಿಕ್ರಿಯೆಯಾಗಿತ್ತು. ನಾನು ಸುಪ್ರೀಂ ಕೋರ್ಟ್, ಮುಖ್ಯ ನ್ಯಾಯಮೂರ್ತಿ ಅಥವಾ ಯಾವುದೇ ಸಮುದಾಯವನ್ನು ಅವಮಾನಿಸಿಲ್ಲ. ನನ್ನ ಪೋಸ್ಟ್‌ನಿಂದ ಕೋಪಗೊಂಡಿದ್ದರೆ ಅಥವಾ ನೋವಾಗಿದ್ದರೆ ಕ್ಷಮಿಸಿ” ಎಂದು ಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...