ಸಿಜೆಐಗೆ ಶೂ ಎಸೆದ ವಕೀಲನನ್ನು ಶ್ಲಾಘಿಸಿದ ಬಿಜೆಪಿ ಮುಖಂಡ ಭಾಸ್ಕರ ರಾವ್; ಎಲ್ಲಡೆ ಆಕ್ರೋಶ

Date:

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರತ್ತ ಶೂ ಎಸೆದ ಘಟನೆಯು ದೇಶಾದ್ಯಾಂತ ಖಂಡನೆಗೆ ಗುರಿಯಾಗಿರುವಾಗ, ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತ ಹಾಗೂ ಬಿಜೆಪಿ ಮುಖಂಡ ಭಾಸ್ಕರ ರಾವ್ ಅವರ ಪ್ರತಿಕ್ರಿಯೆ ಹೊಸ ವಿವಾದಕ್ಕೆ ದಾರಿ ಮಾಡಿಕೊಟ್ಟಿದೆ. ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ, ಈ ಕೃತ್ಯ ಎಸಗಿದ ವಕೀಲನ ಧೈರ್ಯವನ್ನು ಶ್ಲಾಘಿಸಿರುವುದರಿಂದ ವಿವಿಧ ವಲಯಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿವೆ.

- Advertisement -

“ಕಾನೂನಾತ್ಮಕವಾಗಿ ಮತ್ತು ಭಯಾನಕ ಪ್ರಮಾದವಾಗಿದ್ದರೂ, ಆತನ ಸಾಹಸವನ್ನು ಮೆಚ್ಚಬೇಕು” ಎಂದು ಭಾಸ್ಕರ ರಾವ್ ತಮ್ಮ ಪೋಸ್ಟ್‌ನಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಈ ಹೇಳಿಕೆಯು ಕ್ಷಣಾರ್ಧದಲ್ಲಿ ವೈರಲ್ ಆಗಿದ್ದು, ಕಾನೂನು ವಲಯ ಹಾಗೂ ರಾಜಕೀಯ ವಲಯದಿಂದ ಖಂಡನೆಗಳು ವ್ಯಕ್ತವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಮುಖಂಡ ಮನ್ಸೂರ್ ಖಾನ್ ಅವರು ಭಾಸ್ಕರ ರಾವ್ ಅವರ ನಿಲುವನ್ನು ಪ್ರಶ್ನಿಸಿ, “ಮಾಜಿ ಐಪಿಎಸ್ ಅಧಿಕಾರಿ ಆಗಿರುವ ನೀವು, ಕಾನೂನನ್ನು ಎತ್ತಿಹಿಡಿಯಬೇಕಾದ ವ್ಯಕ್ತಿ. ಆದರೆ ಸಿಜೆಐಗೆ ಅವಮಾನ ಮಾಡಿದ ವಕೀಲನ ಧೈರ್ಯವನ್ನು ಶ್ಲಾಘಿಸುವುದು ನಾಚಿಕೆಗೇಡಿನ ಸಂಗತಿ” ಎಂದು ಹೇಳಿದ್ದಾರೆ.

ಇದು ಕಾನೂನಾತ್ಮಕವಾಗಿ ಮತ್ತು ಭಯಾನಕ ಪ್ರಮಾದವಾಗಿದ್ದರೂ, ಆತನ ಸಾಹಸವನ್ನು ನೀವು ಶ್ಲಾಘಿಸುತ್ತೀರಾ? ಮಾಜಿ ಐಪಿಎಸ್ ಅಧಿಕಾರಿ ಹಿನ್ನೆಲೆಯಿಂದ ಬಂದ ನಿಮಗೆ ಇದು ನಾಚಿಕೆಗೇಡು. ಒಮ್ಮೆ ಕಾನೂನು ಎತ್ತಿಹಿಡಿದಿದ್ದ ನೀವು, ಸಿಜೆಐಯನ್ನು ಅವಮಾನಿಸಿದ ವ್ಯಕ್ತಿಯನ್ನು ಸಮರ್ಥಿಸುತ್ತಿದ್ದೀರಿ.., ಎಂಥ ಪತನ! ಎಂದು ಕಾಂಗ್ರೆಸ್ ಮುಖಂಡ ಮನ್ಸೂರ್ ಖಾನ್ ಅವರು ಎಕ್ಸ್‌ನಲ್ಲಿ ಭಾಸ್ಕರ ರಾವ್ ವಿರುದ್ಧ ಚಾಟಿ ಬೀಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ಗೆ ನೂರು, ನ್ಯಾಯಮೂರ್ತಿಗಳ ಮೇಲೆ ಶೂ ತೂರು

ವಿವಾದ ಹೆಚ್ಚಾದಂತೆ, ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಬಳಕೆದಾರರು ಭಾಸ್ಕರ ರಾವ್ ಅವರ ನಿಲುವನ್ನು ಟೀಕಿಸಿ, “ಧೈರ್ಯವನ್ನು ಶ್ಲಾಘಿಸುವುದಕ್ಕಿಂತ ಕೃತ್ಯವನ್ನು ಖಂಡಿಸುವುದು ನಿಮ್ಮ ಕರ್ತವ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಂಗದ ಗೌರವ ಮತ್ತು ಕಾನೂನು ಪ್ರಕ್ರಿಯೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸಲು ಇಂತಹ ಘಟನೆಗಳನ್ನು ತೀವ್ರವಾಗಿ ಖಂಡಿಸಬೇಕೆಂದು ಹಿರಿಯ ವಕೀಲರು ಹಾಗೂ ನಾಗರಿಕರು ಆಗ್ರಹಿಸುತ್ತಿದ್ದಾರೆ.

ಅಕ್ಟೋಬರ್ 6 ರಂದು ಸುಪ್ರೀಂ ಕೋರ್ಟ್‌ನಲ್ಲಿ ವಕೀಲ ರಾಕೇಶ್ ಕಿಶೋರ್ ಅವರು ನ್ಯಾಯಮೂರ್ತಿ ಗವಾಯಿ ಅವರತ್ತ ಶೂ ಎಸೆಯಲು ಪ್ರಯತ್ನಿಸಿ “ಸನಾತನ ಧರ್ಮದ ಅಪಮಾನವನ್ನು ಸಹಿಸುವುದಿಲ್ಲ” ಎಂದು ಘೋಷಣೆ ಕೂಗಿದ್ದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...