ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲ ಪಕ್ಷದವರು ಸಹಾಯ ಮಾಡಿದ್ದಾರೆ. ಬಿಜೆಪಿ ಅವರೂ ಬೆಂಬಲಿಸಿದ್ದಾರೆ. ಪತ್ಯಕ್ಷ, ಪರೋಕ್ಷವಾಗಿ ಕೆಲಸ ಮಾಡದೇ ಹೋಗಿದ್ರೆ ಇಷ್ಟು ಮತ ನಮಗೆ ಬರುತ್ತಿರಲಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಕನಕಪುರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದರು. ಪರೋಕ್ಷವಾಗಿ ಕಾಂಗ್ರೆಸ್ ಗೆಲುವಿಗೆ ಜೆಡಿಎಸ್, ಬಿಜೆಪಿನವರೂ ಬೆಂಬಲ ನೀಡಿದ್ದಾರೆ. ಅಶ್ವಥ್ ನಾರಾಯಣ್ ಅವರು ಯೋಗೇಶ್ವರ್ ಗೆಲ್ತಾರೆ ಅಂತ ಗೊತ್ತಿತ್ತು ಅಂದ್ರು, ಇದರ ಅರ್ಥ ಏನು? ಎಂದು ಪ್ರಶ್ನಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?
ನಮ್ಮ ಮೇಲೆ ಈಗ ಕ್ಷೇತ್ರದ ಜನರ ಸಾಲ ಇದೆ. ಕ್ಷೇತ್ರದ ಜನ ನಮ್ಮ ಪರವಾಗಿ ಇದ್ದಾರೆ. ಈ ಗೆಲುವಿನ ಕ್ರೆಡಿಟ್ ಅಪೂರ್ವ ಸಹೋದರಿಗೆ ಸಲ್ಲಬೇಕಾಗಿಲ್ಲ. ನಮ್ಮೆಲ್ಲ ನಾಯಕರು, ಮತದಾರಿಗೆ ಸಲ್ಲಬೇಕು. ಕ್ಷೇತ್ರ ಖಾಲಿ ಆದಾಗಿನಿಂದ ಸಾಕಷ್ಟು ಪ್ರವಾಸ ಮಾಡಿದ್ದೆವು. ಕ್ಷೇತ್ರದ ಜನರಿಗೆ ಏನು ಮಾತು ಕೊಟ್ಟಿದ್ದೆವೊ ಅದನ್ನು ಮೊದಲು ಅನುಷ್ಠಾನ ಮಾಡಬೇಕು. ನಾನು ಯೋಗೇಶ್ವರ್, ಇಬ್ಬರೂ ಕುಳಿತು ಚರ್ಚೆ ಮಾಡಿ ಇದಕ್ಕೆಲ್ಲ ಚಾಲನೆ ಕೊಡ್ತೇವೆ ಎಂದು ಆಶ್ವಾಸನೆ ನೀಡಿದರು.
