ಆ.17ರಂದು ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ, ಎಸ್‍ಐಟಿ ತನಿಖೆ ಶೀಘ್ರ ಮುಗಿಯಲಿ: ಬಿ ವೈ ವಿಜಯೇಂದ್ರ

Date:

Advertisements

ಆ.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಡಲಿದ್ದೇವೆ. ಮಂಜುನಾಥೇಶ್ವರನ ದರ್ಶನ ಪಡೆದು ಬರಲಿದ್ದೇವೆ ಎಂದು ತಿಳಿಸಿದರು. ನಾವು ಬಿಜೆಪಿ ಕಾರ್ಯಕರ್ತರು ಎಂಬುದಕ್ಕಿಂತ ಹೆಚ್ಚಾಗಿ ಧರ್ಮಸ್ಥಳ ಮಂಜುನಾಥೇಶ್ವರನ ಭಕ್ತರಾಗಿ ಅಲ್ಲಿಗೆ ತೆರಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ ಪಕ್ಷದ ಕಾರ್ಯಕರ್ತ ಲಕ್ಕಸ್ವಾಮಿ ಅವರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಬಿಜೆಪಿ ನಿಲುವು ಸ್ಪಷ್ಟವಿದೆ. ಎಸ್‍ಐಟಿ ತನಿಖೆ ಶೀಘ್ರದಲ್ಲಿ ಮುಗಿಯಬೇಕು. ಇದನ್ನು ಹೀಗೇ ಎಳೆದುಕೊಂಡು ಹೋಗಲು ಸಾಧ್ಯವಿಲ್ಲ. ಸತ್ಯಾಸತ್ಯತೆ ಬಹಿರಂಗ ಆಗಬೇಕು. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕಿದೆ. ಈ ತನಿಖೆಯ ಹಿಂದೆ ಕೆಲವು ಸಮಾಜಘಾತುಕ ಶಕ್ತಿಗಳು, ಎಸ್.ಡಿ.ಪಿ.ಐ, ಬೇರೆ ಬೇರೆ ಕುತಂತ್ರಗಳು ನಡೆಯುತ್ತಿವೆ ಎಂಬ ಚರ್ಚೆಗಳು ಜನಸಾಮಾನ್ಯರಲ್ಲಿ ನಡೆಯುತ್ತಿವೆ” ಎಂದರು.

Advertisements

“ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ” ಎಂದು ತಿಳಿಸಿದರು.

“ಎಲ್ಲ ಜಿಲ್ಲೆ, ಎಲ್ಲ ವಿಧಾನಸಭಾ ಕ್ಷೇತ್ರ, ಪ್ರತಿ ಗ್ರಾಮದಲ್ಲೂ ಕಾರ್ಯಕರ್ತರ ಮನೆಗೆ ಭೇಟಿ ಕೊಟ್ಟು, ಎಲ್ಲರ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ. ಹರ್ ಘರ್ ತಿರಂಗ ಅಭಿಯಾನ ನಡೆಯುತ್ತಿದೆ” ಎಂದು ವಿವರಿಸಿದರು.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಅಶ್ವತ್ಥನಾರಾಯಣ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಮಲ್ಲೇಶ್ವರ ಮಂಡಲ ಅಧ್ಯಕ್ಷ ಕೆ.ಎಸ್. ಕೇಶವ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X