ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ; ಏನಿದು ಬಿಕ್ಲು ಶಿವು ಕೊಲೆ ಪ್ರಕರಣ?

Date:

ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದ್ದು, ಅದಾದ ಬೆನ್ನಲ್ಲೇ ಬೈರತಿ ಬಸವರಾಜ್ ಬಂಧನವಾಗಿದೆ.

- Advertisement -

ಫೆಬ್ರವರಿ 10ರಂದು ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬಳಿಕ ಬಂಧನ ಭೀತಿಯಲ್ಲಿದ್ದ ಬೈರತಿ ಬೆಂಗಳೂರಿನಿಂದ ರಾತ್ರೋರಾತ್ರಿ ಪರಾರಿಯಾಗಿದ್ದರು. ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸಿಐಡಿ ಅಧಿಕಾರಿಗಳು ಮಹಾರಾಷ್ಟ್ರಕ್ಕೆ ತೆರಳಿ ಶೋಧ ನಡೆಸಿದ್ದರು. ಹಾಗೆಯೇ ದೇಶದ ಎಲ್ಲಾ ವಿಮಾನ ನಿಲ್ದಾಣಗಳಿಗೆ ಬೈರತಿ ಬಸವರಾಜ್ ಲುಕ್‌ಔಟ್‌ ನೋಟಿಸ್‌ ಹೊರಡಿಸಿದ್ದರು. ಈ ನಡುವೆ ಬೈರತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದೆ.

Advertisements

ಈ ಬೆಳವಣಿಗೆ ನಡೆಯುತ್ತಿದ್ದಂತೆ ಸಿಐಡಿ ಪೊಲೀಸರಿಗೆ ಶರಣಾಗಲು ನಿರ್ಧರಿಸಿದ ಬೈರತಿ ಗುಜರಾತ್‌ನ ಅಹಮದಾಬಾದ್‌ನಿಂದ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆಯೇ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಸದ್ಯ ತಡರಾತ್ರಿಯೇ ಬೈರತಿ ಬಸವರಾಜ್ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಶುಕ್ರವಾರ (ಫೆ.13) ಕೋರ್ಟ್‌ಗೆ ಹಾಜರು ಪಡಿಸಲಾಗುತ್ತದೆ.

ಇದನ್ನು ಓದಿದ್ದೀರಾ? ಕೊಲೆ ಪ್ರಕರಣ: ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಏನಿದು ಬಿಕ್ಲು ಶಿವು ಹತ್ಯೆ ಪ್ರಕರಣ?

2025ರ ಜುಲೈ 15ರಂದು ಬೆಂಗಳೂರಿನ ಭಾರತಿನಗರದ ಮನೆಯ ಬಳಿ ಬಿಕ್ಲು ಶಿವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆಸ್ತಿ ವಿವಾದ ಮತ್ತು ಹಳೆಯ ದ್ವೇಷವೇ ಈ ಕೊಲೆಗೆ ಕಾರಣ ಎಂದು ಹೇಳಲಾಗಿದೆ.

ತನಿಖೆಯ ವೇಳೆ ಸಿಐಡಿ ಪೊಲೀಸರಿಗೆ ಬಿಕ್ಲು ಶಿವನ ಮೊಬೈಲ್‌ನಲ್ಲಿ ಶಾಸಕರು ಬೆದರಿಕೆ ಹಾಕಿದ್ದಾರೆ ಎನ್ನಲಾದ ಆಡಿಯೋ ಸಂಭಾಷಣೆ ಲಭ್ಯವಾಗಿದೆ. ಅಲ್ಲದೆ, ಪ್ರಕರಣದ ಪ್ರಮುಖ ಆರೋಪಿ ಜಗದೀಶ್ ಅಲಿಯಾಸ್ ಜಗ್ಗನೊಂದಿಗೆ ಶಾಸಕರು ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಸವರಾಜ್ 5ನೇ ಆರೋಪಿ (A5) ಆಗಿದ್ದು, ಕೊಲೆಯ ಸಂಚು ರೂಪಿಸಿದ ಪ್ರಮುಖ ವ್ಯಕ್ತಿ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬರುತ್ತಿದ್ದಂತೆ ಶಾಸಕರು ಬಂಧನ ಭೀತಿಯಿಂದ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...