ಮಹಿಳಾ ಮೀಸಲಾತಿ, ಕ್ಷೇತ್ರ ಮರುಹಂಚಿಕೆ; ಬಿಜೆಪಿ ರಾಜಕೀಯ ಅಜೆಂಡಾಗೆ ಬಳಸಿಕೊಳ್ಳಬಾರದು: ಜನವಾದಿ ಮಹಿಳಾ ಸಂಘಟನೆ

Date:

ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವುದು, ಕ್ಷೇತ್ರ ಮರು ಹಂಚಿಕೆಯನ್ನು ಬಿಜೆಪಿಯು ತನ್ನ ಸೀಮಿತ ರಾಜಕೀಯ ಅಜೆಂಡಾಗೆ ಬಳಸಿಕೊಳ್ಳಬಾರದು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್) ಆಗ್ರಹಿಸಿದೆ. ಈ ಸಂಬಂಧ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಚಂದ್ರಕುಮಾರಿ, ಪ್ರಧಾನ ಕಾರ್ಯದರ್ಶಿ ದೇವಿ ಪ್ರಕಟಣೆಯನ್ನು ಹೊರಡಿಸಿದ್ದಾರೆ.

- Advertisement -

“2023ರಲ್ಲಿ ‘ನಾರಿ ಶಕ್ತಿ ವಂದನ್ ಅಧಿನಿಯಮ’ದಲ್ಲಿ ಸೂಚಿಸಿದಂತೆ ಮಹಿಳಾ ಮೀಸಲಾತಿಯನ್ನು ಜನಗಣತಿ ಮತ್ತು ಕ್ಷೇತ್ರ ಮರುಹಂಚಿಕೆ (ಗಡಿ ನಿರ್ಣಯ)ಗೆ ಕೊಂಡಿಹಾಕುವ ಪ್ರಸ್ತಾಪಕ್ಕೆ ಜನವಾದಿ ಮಹಿಳಾ ಸಂಘಟನೆ ವಿರೋಧ ವ್ಯಕ್ತಪಡಿಸಿದ್ದರೂ, ಸಂವಿಧಾನದ 108ನೇ ತಿದ್ದುಪಡಿ ಮೂಲಕ ಒಂದು ಮೂರನೇ ಭಾಗ ಮೀಸಲಾತಿ ನೀಡುವ ಮಸೂದೆ ಅಂಗೀಕಾರಕ್ಕೆ ನಾವು ಬೆಂಬಲ ನೀಡಿದ್ದೇವೆ. ಆಗಲೇ ಈ ರೀತಿಯ ಕೊಂಡಿಗಳು ಗಂಭೀರ ವಿಳಂಬಕ್ಕೆ ಕಾರಣವಾಗುತ್ತವೆ ಹಾಗೂ 2024 ಮತ್ತು 2029ರ ಚುನಾವಣೆಯಲ್ಲಿಯೂ ಮಹಿಳೆಯರಿಗೆ ಮೀಸಲಾತಿ ಹಕ್ಕು ಸಿಗದಂತೆ ಮಾಡುವ ಸಾಧ್ಯತೆ ಇದೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ” ಎಂದು ನೆನೆಪಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ಮೀಸಲಾತಿ ಮರೆಯಲ್ಲಿ ಮೋದಿ ಸರ್ಕಾರದ ಮಸಲತ್ತು!

“ಈ ಆತಂಕಗಳು ಈಗ ನಿಜವಾಗಿವೆ. ಎರಡು ವರ್ಷಗಳಾದರೂ ಜನಗಣತಿ ನಡೆದಿಲ್ಲ, ಆಯೋಗವೂ ರಚನೆಯಾಗಿಲ್ಲ. ಇದರಿಂದ ಈ ಕೊಂಡಿ ಆಡಳಿತ ಪಕ್ಷದ ಉದ್ದೇಶಿತ ವಿಳಂಬ ತಂತ್ರವೆಂದು ಸ್ಪಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರವು ಈಗ ಹೊಸ ಪ್ರಸ್ತಾಪವನ್ನು ಮುಂದಿಟ್ಟಿದೆ. 2011ರ ಜನಗಣತಿ ಆಧಾರವಾಗಿ ಕ್ಷೇತ್ರ ಮರುಹಂಚಿಕೆ ಮಾಡಿ, ಸಂಸತ್ ಮತ್ತು ವಿಧಾನಸಭೆಗಳ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವುದರೊಂದಿಗೆ ಮಹಿಳಾ ಮೀಸಲಾತಿಯನ್ನು ಜೋಡಿಸಲು ಯತ್ನಿಸುತ್ತಿದೆ” ಎಂದು ಹೇಳಿದೆ.

“ಈ ಪ್ರಸ್ತಾಪವನ್ನು ವಿರೋಧ ಪಕ್ಷಗಳೊಂದಿಗೆ ಯಾವುದೇ ಚರ್ಚೆ ಇಲ್ಲದೆ, ಎಲ್ಲಾ ಪಕ್ಷಗಳ ಸಭೆ ನಡೆಸಬೇಕೆಂಬ ಬೇಡಿಕೆಗಳನ್ನು ಲೆಕ್ಕಿಸದೇ ಮುಂದಿಟ್ಟಿರುವುದು ಖಂಡನೀಯ. ಇಂತಹ ಕ್ರಮ ಗಂಭೀರ ಚಿಂತೆಗಳಿಗೆ ಕಾರಣವಾಗಿದೆ. ಹಳೆಯ ಜನಗಣತಿ ಆಧಾರದಲ್ಲಿ ಕ್ಷೇತ್ರ ಮರುಹಂಚಿಕೆ ಮಾಡಿ ಸ್ಥಾನಗಳನ್ನು ಹೆಚ್ಚಿಸುವುದು ದೇಶದ ವಿವಿಧ ರಾಜ್ಯಗಳ ಮೇಲೆ ವ್ಯಾಪಕ ಪರಿಣಾಮ ಬೀರುತ್ತದೆ. ಈ ವಿಷಯದಲ್ಲಿ ಎಲ್ಲಾ ರಾಜ್ಯಗಳೊಂದಿಗೆ ಸಮಗ್ರ ಚರ್ಚೆ ಮತ್ತು ಸಲಹೆ ಅಗತ್ಯವಾಗಿದೆ” ಎಂದಿದೆ.

“ರಾಜ್ಯ ವಿಧಾನಸಭಾ ಚುನಾವಣೆಗಳು ನಡೆಯುತ್ತಿರುವ ಸಮಯದಲ್ಲಿ ಇಂತಹ ಪ್ರಸ್ತಾಪವನ್ನು ತುರ್ತುವಾಗಿ ಮುಂದೂಡುವುದು ಅತ್ಯಂತ ಆಕ್ಷೇಪಾರ್ಹ. ಇದು ಮಹಿಳಾ ಸಬಲೀಕರಣದ ನಿಜವಾದ ಬದ್ಧತೆಯಲ್ಲ, ಚುನಾವಣಾ ಲಾಭಕ್ಕಾಗಿ ನಡೆಸುವ ಸೀಮಿತ ರಾಜಕೀಯ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ ಆದ್ದರಿಂದ, ಪ್ರಮುಖ ಮಹಿಳಾ ಸಂಘಟನೆಯಾಗಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಈ ಪ್ರಸ್ತಾಪಗಳನ್ನು ತಕ್ಷಣವೇ ಬದಿಗಿಟ್ಟು, ಸ್ಥಾನಗಳ ಹೆಚ್ಚಳದ ಪರಿಣಾಮಗಳ ಬಗ್ಗೆ ಎಲ್ಲಾ ಸಂಬಂಧಿತ ಪಕ್ಷಗಳು ಮತ್ತು ರಾಜ್ಯಗಳೊಂದಿಗೆ ವ್ಯಾಪಕ ಚರ್ಚೆ ನಡೆಸಬೇಕು” ಎಂದು ಆಗ್ರಹಿಸಿದೆ.

“ನಾವು ಮತ್ತೆ ಒತ್ತಿಹೇಳುವುದೇನೆಂದರೆ, ಮಹಿಳಾ ಮೀಸಲಾತಿಯನ್ನು 2029ರ ಸಾಮಾನ್ಯ ಚುನಾವಣೆಯಿಂದಲೇ ಜಾರಿಗೆ ತರಬೇಕು. ಇದಕ್ಕಾಗಿ ಜನಗಣತಿ ಮತ್ತು ಕ್ಷೇತ್ರ ಮರುಹಂಚಿಕೆಯಿಂದ ಅದನ್ನು ಬೇರ್ಪಡಿಸುವ ತಿದ್ದುಪಡಿ ಅಗತ್ಯವಿದೆ. ಆದರೆ ಮೋದಿ ಸರ್ಕಾರವು ಇಂತಹ ಪ್ರಸ್ತಾಪಗಳನ್ನು ಕೇವಲ ರಾಜಕೀಯ ತಂತ್ರವಾಗಿ ಬಳಸುತ್ತಿದ್ದು, ಮಹಿಳಾ ಮೀಸಲಾತಿ ಜಾರಿಗೆ ಸ್ಪಷ್ಟ ಇಚ್ಛಾಶಕ್ತಿ ತೋರಿಸುತ್ತಿಲ್ಲ. ಮಹಿಳಾ ಮೀಸಲಾತಿ ಮಸೂದೆಯನ್ನು ಯಾವುದೇ ಬೇರೆ ಕೊಂಡಿಗಳಿಲ್ಲದೆ ಸ್ಪಷ್ಟವಾಗಿ ಮತ್ತು ನಿಬಂಧನೆಯಿಲ್ಲದೆ ಜಾರಿಗೆ ತರಬೇಕು” ಎಂದು ಜನವಾದಿ ಮಹಿಳಾ ಸಂಘಟನೆ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...