ಬಳ್ಳಾರಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; 10 ದಿನಗಳ ಪಾದಯಾತ್ರೆಗೆ ಇಂದು ತೆರೆ

Date:

ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ನಡೆಸಿದ ‘ಬಳ್ಳಾರಿ ಚಲೋ’ ಪಾದಯಾತ್ರೆ ಬೃಹತ್‌ ಸಮಾವೇಶದೊಂದಿಗೆ ಇಂದು ಸಮಾರೋಪಗೊಳ್ಳಲಿದೆ. ಬಳ್ಳಾರಿಯ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.

- Advertisement -

ಸೆಪ್ಟೆಂಬರ್‌ 1ರಂದು ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಆರಂಭವಾದ ಪಾದಯಾತ್ರೆ ಸೆಪ್ಟೆಂಬರ್‌ 9ರಂದು ಬಳ್ಳಾರಿ ತಲುಪಿದೆ. ಸಮಾರೋಪ ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದ್ದು, 25 ಸಾವಿರ ಕುರ್ಚಿಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಅಡೆತಡೆಯಿಲ್ಲದೆ ಸಮಾವೇಶಕ್ಕೆ ಅನುಮತಿ ನೀಡಬೇಕಿತ್ತು. ಕೊನೆಗೂ ಅನುಮತಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಎಂಟು ತಿಂಗಳಲ್ಲಿ ಬಳ್ಳಾರಿ ನಗರದಲ್ಲಿ ಬಿಜೆಪಿ ನಡೆಸುತ್ತಿರುವ ಎರಡನೇ ದೊಡ್ಡ ಸಮಾವೇಶ ಇದಾಗಿದೆ. ಜನವರಿ 1ರಂದು ಬ್ಯಾನರ್‌ ವಿಚಾರವಾಗಿ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಹಾಗೂ ಜಿ. ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಆ ಘಟನೆಯ ಬಳಿಕ ಬಿಜೆಪಿ ಬಳ್ಳಾರಿ ಎಪಿಎಂಸಿ ಆವರಣದಲ್ಲಿ ಬೃಹತ್‌ ಸಮಾವೇಶ ನಡೆಸಿತ್ತು. ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಮತ್ತೊಮ್ಮೆ ಬಳ್ಳಾರಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಹಿಂದಿನ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸಮಾವೇಶಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮ ಕೈಗೊಂಡಿದೆ. ನಗರದೊಳಗೆ ಅನಧಿಕೃತ ಬ್ಯಾನರ್‌ ಅಳವಡಿಕೆಗೆ ನಿಷೇಧ ಹೇರಲಾಗಿದ್ದು, ನಗರದ ಹೊರವಲಯ ಹಾಗೂ ಸಮಾವೇಶ ಸ್ಥಳದ ಸುತ್ತಮುತ್ತ ಮಾತ್ರ ಬ್ಯಾನರ್‌ ಅಳವಡಿಕೆಗೆ ಅವಕಾಶ ನೀಡಲಾಗಿದೆ. ಭದ್ರತೆಗೆ 3 ಪೊಲೀಸ್‌ ಅಧೀಕ್ಷಕರು, 4 ಹೆಚ್ಚುವರಿ ಎಸ್‌ಪಿಗಳು, 12 ಡಿವೈಎಸ್ಪಿಗಳು, 40 ಪಿಐ/ಸಿಪಿಐಗಳು, 63 ಪಿಎಸ್‌ಐಗಳು, 120 ಎಎಸ್‌ಐಗಳು ಹಾಗೂ 960 ಪೊಲೀಸ್‌ ಸಿಬ್ಬಂದಿ ಸೇರಿದಂತೆ ಭಾರಿ ಪಡೆ ನಿಯೋಜಿಸಲಾಗಿದೆ. 12 ಕೆಎಸ್‌ಆರ್‌ಪಿ ತುಕಡಿಗಳು, 200 ಗೃಹರಕ್ಷಕ ಸಿಬ್ಬಂದಿ ಹಾಗೂ ಇತರ ಪಡೆಗಳನ್ನೂ ನಿಯೋಜಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ ಪಾದಯಾತ್ರೆಯಲ್ಲಿ ಬ್ಯುಸಿ, ಬಿಜೆಪಿಗೆ ಕೌಂಟರ್ ಕೊಡುವಲ್ಲಿ ಕಾಂಗ್ರೆಸ್‌ ಬ್ಯುಸಿ‌; ರೈತರ ಗೋಳು ಕೇಳುವವರಾರು?

ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ವಾಹನಗಳಿಗೆ ನಗರದ ವಿವಿಧೆಡೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಬಸ್‌ಗಳಲ್ಲಿ ಬರುವ ಕಾರ್ಯಕರ್ತರನ್ನು ಸಂಗಮ್‌ ಸರ್ಕಲ್‌ನಲ್ಲಿ ಇಳಿಸಿ, ಅಲ್ಲಿಂದ ಅನಂತಪುರ ರಸ್ತೆ ಬೈಪಾಸ್‌ ಹಾಗೂ ಮೋಕ ರಸ್ತೆಯ ಮೂಲಕ ಸಮಾವೇಶ ಸ್ಥಳ ತಲುಪಲು ಸೂಚಿಸಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ಹಲವು ಮಾರ್ಗಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ. ಸುಮನ್‌ ಡಿ. ಪನ್ನೇಕರ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...