ಮತದಾರರ ಹೆಸರು ಡಿಲೀಟ್ ಮಾಡಲು ಬಿಜೆಪಿ ಶಾಸಕ ಅಭಯ್ ಪಾಟೀಲ್ ಪತ್ರ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

Date:

“ಬಿಜೆಪಿ ಶಾಸಕ ಅಭಯ್ ಪಾಟೀಲ್ ಬೆಳಗಾವಿಯಲ್ಲಿ 2,500 ಮತದಾರರ ಹೆಸರು ಡಿಲೀಟ್ ಮಾಡಲು ಪತ್ರ ಬರೆದಿದ್ದಾರೆ. ಈ ಎಲ್ಲರೂ ಅಲ್ಪಸಂಖ್ಯಾತರಾಗಿದ್ದಾರೆ. ಈ ರೀತಿ ಮತದಾರರ ಹೆಸರು ಡಿಲೀಟ್ ಮಾಡಿಸಲು ಮುಂದಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಅಭಯ್ ಪಾಟೀಲ್ ಪತ್ರ ಬರೆದಿದ್ದಕ್ಕೆ ಸಾಕ್ಷಿಗಳನ್ನು ತೋರಿಸಿದ್ದಾರೆ. “ಮತಗಳ್ಳತನವಾಗುತ್ತಿದೆ ಎಂದು ನಾವು ಹೇಳುತ್ತಲೇ ಇದ್ದೇವೆ. ಈ ಪತ್ರಕ್ಕೆ ಚುನಾವಣಾ ಆಯೋಗ ಪತ್ರ ಬರೆದು, ನಾವು ಈ ರೀತಿ ಮತದಾರರ ಹೆಸರು ತೆಗೆಯಲು ಸಾಧ್ಯವಿಲ್ಲ ಎಂದು ಹೇಳಿದೆ. ಒಂದೇ ಮನೆಯಲ್ಲಿ 50 ಮಂದಿಯ ಮತ ತೆಗೆಯಲು ಅರ್ಜಿ ನೀಡಲಾಗಿದ್ದು, ಈ ಅರ್ಜಿಯಲ್ಲಿ ಯಾರಾದರೂ ಬೋಗಸ್ ಅರ್ಜಿ ತುಂಬಿ ಸಲ್ಲಿಕೆ ಮಾಡಿದರೆ ಶಿಕ್ಷಾರ್ಹರು ಎಂದು ತಿಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

“ಫಾರಂ 7 ಸಲ್ಲಿಕೆ ಮಾಡಿ ಮತಪಟ್ಟಿಯಿಂದ ಹೆಸರು ಡಿಲೀಟ್ ಮಾಡಲು ಅರ್ಜಿ ಹಾಕಿರುವವರನ್ನು ಬಂಧಿಸಿ, ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ನಾನು ಆಗ್ರಹಿಸುತ್ತೇನೆ. ಶಾಸಕ ಅಭಯ್ ಪಾಟೀಲ್ ಅವರ ಪತ್ರ ನಮ್ಮ ಬಳಿ ಇದ್ದು, ಬೇರೆಯವರ ಮತ ತೆಗೆಯುವಂತೆ ಪತ್ರ ‌ನೀಡಲು ಯಾರಿವರು? ಕಾನೂನು ಮೀರಿ ಶಾಸಕರೇ ಬಲ್ಕ್ ಡಿಲೀಷನ್ ಗೆ ಪತ್ರ ನೀಡಿದ್ದಾರೆ. ಕಾನೂನಿಗೆ ವಿರುದ್ಧವಾಗಿ ಡಿಲೀಟ್ ಮಾಡಲು ಅರ್ಜಿ ಹಾಕಿದ್ದಾರೆ. ಅಭಯ್ ಪಾಟೀಲ್ ನೀಡಿರುವ ಪತ್ರ ನಮ್ಮ ಬಳಿ ಇದೆ. ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ” ಎಂದಿದ್ದಾರೆ.

ಸುಮಾರು 7 ಸಾವಿರ ಹೆಸರು ಡಿಲೀಟ್ ಮಾಡಲು ಅರ್ಜಿ ಹಾಕಲಾಗಿದ್ದು, ಯಾವುದಕ್ಕೂ ಸಹಿ ಇಲ್ಲವಾಗಿದೆ. ಇದರ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಫಾರಂ 7 ಅನ್ನು ದುರುಪಯೋಗ ಮಾಡಿಕೊಂಡಿರುವವರನ್ನು ಶಿಕ್ಷೆಗೆ ಒಳಪಡಿಸಬೇಕು. ಬಿಜೆಪಿ ನಿಜ ಸ್ವರೂಪ ಹೊರಬರುತ್ತಿದೆ. ಅಮಿತ್ ಶಾ ಹಾಗೂ ನರೇಂದ್ರ ಮೋದಿ ಅವರು 13 ಕೋಟಿ ಮತಗಳನ್ನು ಮತದಾರರ ಪಟ್ಟಿಯಿಂದ ತೆಗೆಯಲು ಮುಂದಾಗಿರುವುದಕ್ಕೆ ಇದು ಸಣ್ಣ ಉದಾಹರಣೆ. ಅವರ ಕಾರ್ಯಕರ್ತರು, ಅಂಧಭಕ್ತರು ಈ ಕೆಲಸ ಮಾಡುತ್ತಿದ್ದು, ಎಲ್ಲರೂ ಎಚ್ಚರಿಕೆ ವಹಿಸಬೇಕು. ಎಸ್ಆಆರ್ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ. ಬಿಜೆಪಿ ವಿರುದ್ಧ ಇರುವ ನೈಜ್ಯ ಮತದಾರರ ಮತದಾನದ ಹಕ್ಕು ಕಸಿಯುವ ಹುನ್ನಾರವನ್ನು ಬಿಜೆಪಿ ಹಾಗೂ ಆರ್ ಎಸ್ಎಸ್ ಮಾಡುತ್ತಿವೆ” ಎಂದು ವಾಗ್ದಾಳಿ ನಡೆಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಮುದಾಯಗಳ ಸಮಸ್ಯೆಗಳಿಗೆ ಸಂಘಟಿತ ಹೋರಾಟ ಅಗತ್ಯ

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಜ್ಯ ಬಲಗೈ ಸಮುದಾಯಗಳ ಒಕ್ಕೂಟದ ಮೂಲಕ...

ಬೀದರ್‌ | ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣಕು ಶವಯಾತ್ರೆ

ರಾಜ್ಯ ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಹಾಗೂ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ...

ಶಾಲಾ ದಾಖಲೆ ಪರಿಶೀಲಿಸಿ; ತಿದ್ದುಪಡಿಗೆ ಶಾಲೆ-BEO ಹಂತದವರೆಗೆ ಇರುವ ಮಾರ್ಗವೇನು?

ಇವತ್ತಿನ ದಿನಮಾನದಲ್ಲಿ ಯಾವುದೇ ವಿಷಯವನ್ನು ಕೇವಲ ಮಾತಿನ ಮೂಲಕ ಸಾಬೀತುಪಡಿಸುವುದು ಕಷ್ಟ....