ಬಿಎಲ್‌ಡಿಇ ಸಂಸ್ಥೆಯಿಂದ 65 ಸಂಪುಟಗಳಲ್ಲಿ ದಾಸ ಸಾಹಿತ್ಯ ಪ್ರಕಟ: ಸಚಿವ ಎಂ ಬಿ ಪಾಟೀಲ್‌ ಘೋಷಣೆ

Date:

ಶ್ರೀಸಾಮಾನ್ಯನ ನುಡಿಗಟ್ಟಿನಲ್ಲಿ ಭಕ್ತಿ ಮತ್ತು ಭಗವಂತ‌ನ ಪಾರಮ್ಯವನ್ನು ಗೇಯತೆಯ ಧ್ವನಿಯಲ್ಲಿ ಸಾರಿದ್ದು ದಾಸಸಾಹಿತ್ಯದ ಹಿರಿಮೆ. ಇಂತಹ ದಾಸಸಾಹಿತ್ಯದ 65 ಸಂಪುಟಗಳನ್ನು ತಮ್ಮ‌ ನೇತೃತ್ವದ ಬಿ.ಎಲ್.ಡಿ.ಇ. ಶಿಕ್ಷಣ ಸಂಸ್ಥೆಯ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಮೂಲಕ ಪ್ರಕಟಿಸಲಾಗುತ್ತಿದೆ. ಇವುಗಳ ಪೈಕಿ ಈಗಾಗಲೇ ಅರವತ್ತಕ್ಕೂ ಹೆಚ್ಚು ಸಂಪುಟಗಳು ಬಿಡುಗಡೆಗೆ ಸಿದ್ಧವಾಗಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ತಿಳಿಸಿದ್ದಾರೆ.

- Advertisement -

ಕಾಗಿನೆಲೆ ಮಹಾಸಂಸ್ಥಾನ ಪೀಠವು ಶನಿವಾರ ಇಲ್ಲಿನ ಕೇತೋಹಳ್ಳಿಯಲ್ಲಿ ಏರ್ಪಡಿಸಿದ್ದ, ಕನಕದಾಸ ಸಾಹಿತ್ಯದ ವೈಚಾರಿಕ ಅನುಸಂಧಾನದ ‘ತಲ್ಲಣಿಸದಿರು ಮನವೇ’ ವಿಚಾರ ಸಂಕಿರಣಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಕನಕಸಾಸರು ವೈಚಾರಿಕವಾಗಿ ರಾಮಾನುಜಾಚಾರ್ಯರ ಪ್ರಭಾವಕ್ಕೆ ಒಳಗಾಗಿ, ವ್ಯಾಸರಾಯರ ಶಿಷ್ಯರಾಗಿ ಸಾಧನೆ ಮಾಡಿದವ ರಾಗಿದ್ದಾರೆ. ಭಾಷೆಯ ಬಳಕೆಯಲ್ಲಿ ದಾಸಸಾಹಿತ್ಯವು ಹನ್ನೆರಡನೇ ಶತಮಾನದ ವಚನ ಸಾಹಿತ್ಯವನ್ನು ಮೇಲ್ಪಂಕ್ತಿಯಾಗಿ ಇಟ್ಟುಕೊಂಡಿದೆ. ಇದರಿಂದಾಗಿ ಸಾಮಾಜಿಕ ಪರಿವರ್ತನೆ ಸಾಧ್ಯವಾಯಿತು” ಎಂದು ಬಣ್ಣಿಸಿದರು.

“ಕನಕದಾಸರ ಸಾಹಿತ್ಯ ಕುರಿತು ತಾಲ್ಲೂಕು ಮತ್ತು ಜಿಲ್ಲಾ ಮಟ್ಟಗಳಲ್ಲೂ ಕಾರ್ಯಕ್ರಮಗಳು ನಡೆಯಬೇಕು. ಸಾಮಾಜಿಕ ತಾರತಮ್ಯವನ್ನು ಪ್ರಶ್ನಿಸಿದ ಇಂತಹ ಸಾಹಿತ್ಯವನ್ನು ಯುವಜನರು ಗಂಭೀರವಾಗಿ ಅಧ್ಯಯನ ಮಾಡುವಂತಹ ಬೌದ್ಧಿಕ ವಾತಾವರಣ ಸೃಷ್ಟಿಯಾಗಬೇಕು. ಸೇನಾಧಿಕಾರಿಯಾಗಿದ್ದ ಕನಕದಾಸರು ದಾಸಕೂಟಕ್ಕೆ ಬಂದು, ಶ್ರೀಕೃಷ್ಣ ಮತ್ತು ಆದಿಕೇಶವನ ಕಿಂಕರರಾಗಿದ್ದು ಒಂದು ದೊಡ್ಡ ಚಾರಿತ್ರಿಕ ಪಲ್ಲಟವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಉತ್ತರ ಕರ್ನಾಟಕವು ಮೂಲತಃ ಭಕ್ತಿಕವಿಗಳ, ಸಂತರ, ಯೋಗಿಗಳ ಮತ್ತು ಅವಧೂತರ ನೆಲವಾಗಿದೆ. ಪಂಪ, ರನ್ನ, ಬಸವಣ್ಣ, ಶಿಶುನಾಳ ಷರೀಫ, ಸಿದ್ಧೇಶ್ವರ ಸ್ವಾಮಿಗಳು, ಬೇಂದ್ರೆ, ಕಲಬುರ್ಗಿ, ಪುರಂದರದಾಸರು ಮತ್ತು ಕನಕದಾಸರು ಹೀಗೆ ಎಲ್ಲರೂ ಉತ್ತರ ಕರ್ನಾಟಕ ಪ್ರದೇಶದವರೇ ಆಗಿದ್ದಾರೆ” ಎಂದರು.

ಕಾರ್ಯಕ್ರಮದಲ್ಲಿ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ, ಕಾಗಿನೆಲೆ ಪೀಠದ ನಿರಂಜನಾಪುರಿ ಸ್ವಾಮೀಜಿ, ಕೇತೋಹಳ್ಳಿ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಕವಿ ಚಂದ್ರಶೇಖರ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್ ಎಂ ರೇವಣ್ಣ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...