ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಲಾಗಿದೆ.
ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪದ ರಾಜ್ಯಾಧ್ಯಕ್ಷರಾದ ಮಹೇಶ್ ಜೋಷಿ , ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.
ಜೂ.29ರಂದು ಬಳ್ಳಾರಿಯ ಖಾಸಗಿ ಹೋಟೆಲ್ ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.
ಮಾತೃ ಭಾಷೆಯ ಬಗ್ಗೆ ಗೌರವವಿರಬೇಕು: ಬಾನು ಮುಷ್ತಾಕ್
ಮಾಧ್ಯಮಗಳ ಜೊತೆ ಸಂವಾದದಲ್ಲಿ ಪಾಲ್ಗೊಂಡಿದ್ದ ಬಾನು ಮುಷ್ತಾಕ್ ‘‘ನಮ್ಮ ಭಾಷೆ ಬಗ್ಗೆ ನಮಗೆ ಗೌರವ ಇರಬೇಕು ಹಾಗೂ ಹಿಡಿತ ಇರಬೇಕು. ಆದರೆ, ಕನ್ನಡದವರಾಗಿ ಈಗಿನ ಮಕ್ಕಳಿಗೆ ಕನ್ನಡವೇ ಸರಿಯಾಗಿ ಬಾರದಿರುವುದು ಇಂದಿನ ದುರಂತ’’ ಎಂದು ಬೂಕರ್ ಪ್ರಶಸ್ತಿ ವಿಜೇತ ಕನ್ನಡ ಬರಹಗಾರ್ತಿ ಬಾನು ಮುಷ್ತಾಕ್ ವಿಷಾದ ವ್ಯಕ್ತಪಡಿಸಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?
‘‘ನನ್ನ ಮಾತೃಭಾಷೆ ಉರ್ದು, ನನ್ನ ನಾಡಿನ ಭಾಷೆ ಕನ್ನಡ. ನನಗೂ ಸಹ ಅಷ್ಟಾಗಿ ಇಂಗ್ಲಿಷ್ ಬರುವುದಿಲ್ಲ. ನಾನು ಪ್ರಾಥಮಿಕ ಶಾಲೆಯವರೆಗೆ ಓದಿದ್ದು ಕನ್ನಡ ಮಾಧ್ಯಮದಲ್ಲಿಯೇ. ಕನ್ನಡದಧಿಲ್ಲಿಯೇ ಕಥೆ ಬರೆದಿದ್ದೇನೆ. ಅದಕ್ಕೆ ಬರಹಗಾರ್ತಿ ದೀಪಾ ಭಾಸ್ತಿ ಇಂಗ್ಲಿಷ್‌ಗೆ ಅನುವಾದ ಮಾಡಿದ್ದಾರೆ. ನನಗೆ ಸರಿಯಾಗಿ ಇಂಗ್ಲಿಷ್ ಬರುವುದಿಲ್ಲಎಂಬ ಕೀಳರಿಮೆ ನನ್ನನ್ನು ಇಂದಿಗೂ ಕಾಡುತ್ತಿಲ್ಲ. ನಿಮಗೆ ಬರುವ ಭಾಷೆ ನಿಮ್ಮ ಬಲ. ನಾವು ಮಾಡುವ ಕೆಲಸದಲ್ಲಿನಮ್ಮನ್ನು ನಾವು ಗುರುತಿಸಿಕೊಳ್ಳಬೇಕು’’ ಎಂದಿದ್ದರು.