ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಕಲಹದ ಕುರಿತು ಸುಪ್ರೀಂ ಬೇಸರ

Date:

ಕರ್ನಾಟಕದ ಪ್ರಭಾವಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಡಿ. ರೂಪಾ ಮೌದ್ಗಿಲ್ ನಡುವಿನ ದೀರ್ಘಕಾಲದ ಕಾನೂನು ಸಮರಕ್ಕೆ ಸುಪ್ರೀಂ ಕೋರ್ಟ್ ಸದ್ಯಕ್ಕೆ ಮಧ್ಯಂತರ ತಡೆ ನೀಡಿದೆ. ಇಬ್ಬರ ನಡುವಿನ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಸ್ಥಗಿತಗೊಳಿಸಿರುವ ನ್ಯಾಯಾಲಯ, ಕೋರ್ಟ್ ಮೆಟ್ಟಿಲು ಹತ್ತುವ ಬದಲು ಇಬ್ಬರೂ ಮಧ್ಯಸ್ಥಿಕೆ ಮೂಲಕವೇ ಈ ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ.

- Advertisement -

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಸತೀಶ್ ಚಂದ್ರ ಶರ್ಮಾ ಮತ್ತು ಸಂಜೀವ್ ಸಚ್‌ದೇವ್ ಅವರಿದ್ದ ಪೀಠವು ರೋಹಿಣಿ ಸಿಂಧೂರಿ ಸಲ್ಲಿಸಿದ್ದ ವಿಶೇಷ ಅನುಮತಿ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ಪ್ರಕಟಿಸಿದೆ. ಡಿ. ರೂಪಾ ಮೌದ್ಗಿಲ್ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ನೀಡಿದ್ದ ಆದೇಶವನ್ನು ಈ ಹಿಂದೆ ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿತ್ತು. ಈ ತೀರ್ಪನ್ನು ರದ್ದುಗೊಳಿಸುವಂತೆ ಕೋರಿ ಸಿಂಧೂರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ವಿಚಾರಣೆಯ ವೇಳೆ ಈ ಇಬ್ಬರು ಉನ್ನತ ಅಧಿಕಾರಿಗಳ ನಡುವಿನ ನಿರಂತರ ಕಲಹದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಈ ನ್ಯಾಯಾಂಗ ಹೋರಾಟ ಹೀಗೆಯೇ ಮುಂದುವರಿದರೆ ಇಬ್ಬರ ಭವಿಷ್ಯಕ್ಕೂ ದೊಡ್ಡ ಧಕ್ಕೆಯಾಗಲಿದೆ ಎಂದು ಎಚ್ಚರಿಸಿದೆ.

 ಇಬ್ಬರೂ ಅತ್ಯುತ್ತಮ ಮತ್ತು ದಕ್ಷ ಅಧಿಕಾರಿಗಳು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇಬ್ಬರೂ ಪರಸ್ಪರರ ವೃತ್ತಿಜೀವನವನ್ನು ತಾವಾಗಿಯೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಕೋರ್ಟ್‌ನಿಂದ ಹೊರಗಡೆ, ಮಧ್ಯಸ್ಥಿಕೆಯ ಮೂಲಕವೇ ಬಗೆಹರಿಸಿಕೊಳ್ಳುವುದು ಸೂಕ್ತ ಎಂಬುದು ನ್ಯಾಯಾಲಯದ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಡಿಕೆಶಿ – ಸಿಆರ್‌ಪಿ ಭೇಟಿ: ನೀರಾವರಿ ಯೋಜನೆಗೆ ಅನುದಾನ, ನದಿ ಜೋಡಣೆಯಲ್ಲಿ ರಾಜ್ಯಕ್ಕೆ ನ್ಯಾಯಯುತ ಪಾಲಿಗೆ ಒತ್ತಾಯ

ಈ ಗಂಭೀರ ಪ್ರಕರಣದ ಸೌಹಾರ್ದಯುತ ಇತ್ಯರ್ಥಕ್ಕಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರನ್ನು ಮಧ್ಯವರ್ತಿಯನ್ನಾಗಿ ನೇಮಕ ಮಾಡಲಾಗಿದೆ. ಇಬ್ಬರೂ ಅಧಿಕಾರಿಗಳು ಕಡ್ಡಾಯವಾಗಿ ಅವರ ಮುಂದೆ ಹಾಜರಾಗಬೇಕಾಗಿದ್ದು, ಅಲ್ಲಿಯವರೆಗೆ ಇಬ್ಬರ ವಿರುದ್ಧದ ಪ್ರಕರಣಗಳ ಮುಂದಿನ ವಿಚಾರಣೆಗೆ ತಡೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ಹೆಚ್‌ಡಿಕೆ ನಿವಾಸದಲ್ಲಿ ಮೊಬೈಲ್ ಹಸ್ತಾಂತರ, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಕಮಿಷನರ್ ಸೀಮಂತ್ ಸಿಂಗ್

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ...

ಮತಕಳವು ಸಾಮಾನ್ಯ ಕಳ್ಳತನವಲ್ಲ, ಇದು ದೇಶದ್ರೋಹ: ಗ್ಯಾನೇಶ್, ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ

​"ಮತಕಳವು ಯಾವುದೇ ಅಂಗಡಿಯೊಂದರಲ್ಲಿ ನಡೆಯುವಂತಹ ಸಾಮಾನ್ಯ ಕಳ್ಳತನವಲ್ಲ. ಬದಲಾಗಿ, ಇದು ದೇಶದ...

ಬೀದರ್‌ | ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ : ಪಿ.ಪಿ.ಅಪ್ಪಣ್ಣ

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳನ್ನು ತಡೆದು, ಕಾರ್ಮಿಕರಿಗೆ ನ್ಯಾಯಯುತವಾಗಿ...

​”ಮೋದಿಯನ್ನು ಕೆಳಗಿಳಿಸಿ, ಪ್ರಜಾಪ್ರಭುತ್ವ ಉಳಿಸಿ”: ರಾಮಲೀಲಾ ಮೈದಾನದಲ್ಲಿ ಖರ್ಗೆ ಗುಡುಗು

ನವದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ 'ಇಂಡಿಯಾ' ಮೈತ್ರಿಕೂಟದ ಬೃಹತ್ ಪ್ರತಿಭಟನಾ...