ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ಪ್ರಕರಣ: ಎಂಜಿನಿಯರ್ ಅಮಾನತು ಆದೇಶ ರದ್ದುಗೊಳಿಸಿದ ಹೈಕೋರ್ಟ್

Date:

ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ ಪ್ರಕರಣ ಸಂಬಂಧ, ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಅಮಾನತುಗೊಂಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಬಿ. ನಾಗರಾಜ್ ಅವರ ಅಮಾನತು ಆದೇಶವನ್ನು ನ್ಯಾಯಾಲಯ ರದ್ದುಪಡಿಸಿದೆ.

- Advertisement -

ಅಧಿಕಾರಿಯ ಅಮಾನತನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ನ್ಯಾಯಮೂರ್ತಿ ಕೆ. ಮನ್ಮಧ ರಾವ್ ಅವರಿದ್ದ ಹೈಕೋರ್ಟ್‌ನ ರಜೆ ಪೀಠವು, ತನಿಖಾ ಸಮಿತಿಗಳ ವರದಿ ಬರುವ ಮುನ್ನವೇ ಇಂತಹ ತರಾತುರಿಯ ಕ್ರಮ ಕೈಗೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದ್ದು, ಅವು ತನಿಖೆ ನಡೆಸುತ್ತಿವೆ. ಈ ಸಮಿತಿಗಳು ನೀಡುವ ವರದಿಯಲ್ಲಿ ಅರ್ಜಿದಾರರ ಕರ್ತವ್ಯಲೋಪ ಅಥವಾ ತಪ್ಪು ಸಾಬೀತಾದರೆ, ಸರ್ಕಾರವು ಸಿಸಿಎ (CCA) ನಿಯಮಗಳ ಅಡಿಯಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಸ್ವತಂತ್ರವಾಗಿದೆ. ಆದರೆ ವರದಿ ಬರುವ ಮುನ್ನವೇ ಅಮಾನತು ಮಾಡುವುದು ಸಮಂಜಸವಲ್ಲ” ಎಂದು ಪೀಠ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಬೆಂಗಳೂರು ಕೌಂಪೌಂಡ್‌ ಕುಸಿತ ಪ್ರಕರಣ- ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು ದಾಖಲು

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, “ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದ ತನಿಖೆಗಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಲೋಕೋಪಯೋಗಿ ಇಲಾಖೆ (PWD) ಈಗಾಗಲೇ ಒಂದು ಸಮಿತಿಯನ್ನು ರಚಿಸಿದೆ. ಇದರ ಜೊತೆಗೆ ತಾಂತ್ರಿಕ ಪರಿಶೀಲನೆಗಾಗಿ ಪಿಡಬ್ಲ್ಯುಡಿ ಅಧಿಕಾರಿಗಳ ಮತ್ತೊಂದು ಸಮಿತಿಯನ್ನೂ ನೇಮಿಸಲಾಗಿದ್ದು, ಅದು ಒಂದು ವಾರದಲ್ಲಿ ವರದಿ ನೀಡಬೇಕಿದೆ. ಹೀಗಿರುವಾಗ, ಯಾವುದೇ ಪ್ರಾಥಮಿಕ ಸಾಕ್ಷ್ಯಾಧಾರಗಳಿಲ್ಲದೆ ಹಾಗೂ ಸಮಿತಿಗಳ ಶಿಫಾರಸು ಬರುವ ಮುನ್ನವೇ ಮೇ 1 ರಂದು ಹೊರಡಿಸಲಾಗಿದ್ದ ಅಮಾನತು ಆದೇಶ ಕಾನೂನುಬಾಹಿರ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, “ಅರ್ಜಿದಾರರು ಘಟನಾ ಸ್ಥಳದ ಉಸ್ತುವಾರಿ ವಹಿಸಿದ್ದ ಪ್ರಮುಖ ಅಧಿಕಾರಿಯಾಗಿದ್ದರಿಂದ, ದುರಂತದ ಪ್ರಾಥಮಿಕ ಹೊಣೆಗಾರಿಕೆ ಅವರ ಮೇಲೆಯೇ ಬರುತ್ತದೆ. ಇದೇ ಆಧಾರದ ಮೇಲೆ ನಿಯಮಾವಳಿಗಳ ಪ್ರಕಾರ ಅವರನ್ನು ಅಮಾನತುಗೊಳಿಸಲಾಗಿದೆ” ಎಂದು ವಾದಿಸಿದ್ದರು.

ಆದರೆ ಸರ್ಕಾರದ ವಾದವನ್ನು ಒಪ್ಪದ ಹೈಕೋರ್ಟ್, ತನಿಖಾ ವರದಿ ಬರುವ ಮುನ್ನವೇ ಅಮಾನತು ಆದೇಶವನ್ನು ಮುಂದುವರಿಸುವ ಅಗತ್ಯವಿಲ್ಲ ಎಂದು ಹೇಳಿ, ಎಂಜಿನಿಯರ್ ನಾಗರಾಜ್ ಅವರ ಅಮಾನತನ್ನು ತೆರವುಗೊಳಿಸಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...