ದೇಶದಲ್ಲಿರುವುದು ಬ್ರಾಹ್ಮಣ, ಬನಿಯಾ ರಿಪಬ್ಲಿಕ್: ವಿಎಲ್‌ಎನ್

Date:

“ಭಾರತದಲ್ಲಿ ಪ್ರಜಾಪ್ರಭುತ್ವ ಕ್ಷೀಣಿಸುತ್ತಾ ಬನಾನ ರಿಪಬ್ಲಿಕ್ ಆಗುತ್ತಿದೆ ಎಂದು ಅನೇಕರು ಹೇಳುತ್ತಾರೆ. ಆದರೆ ಇಲ್ಲಿ ವಾಸ್ತವದಲ್ಲಿ ಇರುವುದು ಬ್ರಾಹ್ಮಣ ಮತ್ತು ಬನಿಯಾ ರಿಪಬ್ಲಿಕ್” ಎಂದು ಬರಹಗಾರ, ಚಿಂತಕ ವಿ.ಎಲ್.ನರಸಿಂಹಮೂರ್ತಿ ಎಚ್ಚರಿಸಿದರು.

- Advertisement -

ರಾಜ್ಯ ಸರ್ಕಾರ ಆಯೋಜಿಸಿರುವ ಎರಡು ದಿನಗಳ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ, ಭಾರತದ ಸಂವಿಧಾನ ರಚನೆಯ ಅಮೃತಮಹೋತ್ಸವ ಸಮಾರಂಭದಲ್ಲಿ ʼಒಕ್ಕೂಟ ವ್ಯವಸ್ಥೆಯಲ್ಲಿನ ಅಂತರಗಳ ಸಮತೋಲನಾ ಆಯಾಮಗಳುʼ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

“ಇಲ್ಲಿ ಬ್ರಾಹ್ಮಿನ್‌ ಮತ್ತು ಬನಿಯನ್ ರಿಪಬ್ಲಿಕ್ ಕಟ್ಟುತ್ತಿದ್ದಾರೆ. ಅವರು ಹೇಳುತ್ತಿರುವ ಸನಾತನ ಧರ್ಮವನ್ನು, ಬ್ರಾಹ್ಮಣಶಾಹಿತ್ವವನ್ನು ಬೇರೆಯವರ ಮೇಲೆ ವಿವಿಧ ರೂಪದಲ್ಲಿ ಹೇರಿಕೆ ಮಾಡುತ್ತಿದ್ದಾರೆ” ಎಂದು ತಿಳಿಸಿದರು.

ಉತ್ತರ ಭಾರತವನ್ನು ನಾವು ಗಮನಿಸಬೇಕು. ಅಭಿವೃದ್ಧಿಯ ವಿಚಾರ ಬಂದಾಗ ಅವರು ರಾಷ್ಟ್ರೀಯತೆಯ ಪ್ರಶ್ನೆಯನ್ನು ಮುಂದಿಡುತ್ತಾರೆ. ಜಾತಿ ಸಮಾನತೆಯ ಕುರಿತು ಪ್ರಶ್ನಿಸಿದ ತಕ್ಷಣ ಯಾವುದೋ ಒಂದು ಸಾಂಸ್ಕೃತಿಕ ಪ್ರಶ್ನೆಯನ್ನು ತಂದು ಇಡುತ್ತಾರೆ. ಒಟ್ಟಾರೆಯಾಗಿ ವೈರುಧ್ಯಗಳನ್ನು ಅವರು ಸೃಷ್ಟಿ ಮಾಡುತ್ತಾರೆ. ಬ್ರಾಹ್ಮಣಶಾಹಿಗೆ ಯಾವತ್ತೂ ಬಹುಸಂಖ್ಯಾತರ ಅಭಿವೃದ್ಧಿ ಬೇಕಿಲ್ಲ. ಎಲ್ಲರೂ ತಮ್ಮ ಅಡಿಯಲ್ಲೇ ಇರಬೇಕು, ಹಿಂದುಳಿದಿರಬೇಕು ಎಂದು ಅವರು ಬಯಸುತ್ತಾರೆ. ಸಂವಿಧಾನವನ್ನೇ ಬಳಸಿಕೊಂಡು ಕಾಯ್ದೆ ಕಾನೂನುಗಳನ್ನು ತಮಗೆ ಬೇಕಾದಂತೆ ತರುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

vln123
ಗೋಷ್ಠಿಯಲ್ಲಿ ವಿ.ಎಲ್.ನರಸಿಂಹಮೂರ್ತಿ ಮಾತನಾಡಿದರು.

ಬ್ರಾಹ್ಮಣ, ಬನಿಯಾ ರಿಪಬ್ಲಿಕ್ ಆಗಿ ಕೇಂದ್ರ ಸರ್ಕಾರ ವರ್ತಿಸುತ್ತಿದೆ. ನೋಟು ರದ್ಧತಿ, ಸಿಎಎ, ಎನ್‌ಆರ್‌ಸಿ, ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಇಡಬ್ಲ್ಯುಎಸ್ ಜಾರಿ, ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸುವುದು, ಆದಿವಾಸಿಗಳ ಸ್ಥಳಗಳಲ್ಲಿ ತರುವ ಯೋಜನೆಗಳು- ಇವೆಲ್ಲವೂ ಬಹುಸಂಖ್ಯಾತ ಜನರನ್ನು ಶೋಷಣೆ ಮಾಡಿ ಶೇ. 15ಕ್ಕಿಂತ ಕಡಿಮೆ ಇರುವ ಬ್ರಾಹ್ಮಣ ಮತ್ತು ಬನಿಯಾಗಳ ಹಿತ ಕಾಯುವ ಉದ್ದೇಶಗಳನ್ನು ಹೊಂದಿವೆ ಎಂದು ಅಭಿಪ್ರಾಯಪಟ್ಟರು.

ತಳಸಮುದಾಯಗಳಿಂದ ಬಂದ ಚಿಂತಕರು ಮಾದರಿ ಸಮಾಜವನ್ನು ಮುಂದಿಟ್ಟರು. ಬ್ರಾಹ್ಮಣಶಾಹಿ ವಿರುದ್ಧ ಸಮಾಜವನ್ನು ಕಟ್ಟಲು ಪ್ರಯತ್ನಪಟ್ಟರು. ಆದರೆ ತಳಸಮುದಾಯಗಳನ್ನು ತುಳಿದು ತಮ್ಮ ಪ್ರಾಬಲ್ಯವನ್ನು ಬ್ರಾಹ್ಮಣಶಾಹಿಗಳು ಹೆಚ್ಚಿಸಿಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಉತ್ತರ ಭಾರತದವರು ತರುತ್ತಿರುವ ಸನಾತನ ಸಂಸ್ಕೃತಿಗೆ ಪ್ರತಿರೋಧವಾಗಿ ಈ ನೆಲದಲ್ಲಿರುವ ಪ್ರಶ್ನೆಗಳನ್ನು ಮುಂದೆ ಇಡಬೇಕು. ಕರ್ನಾಟಕದಲ್ಲಿ 12ನೇ ಶತಮಾನದಲ್ಲಿ ಆದ ವಚನ ಚಳವಳಿ, ವಸಾಹತುಶಾಹಿ ಕಾಲಘಟ್ಟದಲ್ಲಿ ಫುಲೆ, ಪೆರಿಯಾರ್‌, ಅಯೋತಿದಾಸ್, ಅಯ್ಯನ್‌ ಕಾಳಿ ಮತ್ತು ನಾರಾಯಣ ಗುರುಗಳು ಮಾಡಿರುವ ಕ್ರಾಂತಿಯನ್ನು ಮತ್ತು ಆ ಮೂಲಕ ಅವರು ಎತ್ತಿದ ಸಮಾನತೆಯ ಪ್ರಶ್ನೆಗಳನ್ನು ಮುಂದೆ ಇಡಬೇಕು. ಆಗ ಮಾತ್ರ ಭಾರತ ಒಕ್ಕೂಟ ರಾಷ್ಟ್ರವಾಗಿ ಉಳಿಯುತ್ತದೆ ಎಂದು ತಿಳಿಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವೆ ಬಿಕ್ಕಟ್ಟು ಬಂದಾಗಲೆಲ್ಲ, “ಒಂದು ಬಲಿಷ್ಠವಾದ ಕೇಂದ್ರ ಸರ್ಕಾರ ಇರಬೇಕು” ಎಂಬ ಆಶಯ ಸಂವಿಧಾನದಲ್ಲಿದೆ. ಆ ಅವಕಾಶವನ್ನು ಬಳಸಿಕೊಂಡು ರಾಜ್ಯ ಸರ್ಕಾರದ ಮೇಲೆ ದಬ್ಬಾಳಿಕೆ ಮಾಡುತ್ತಾರೆ ಎಂಬ ಅಭಿಪ್ರಾಯ ಬರುತ್ತದೆ. ಸಂವಿಧಾನ ಸಭೆಯಲ್ಲಿ ನಡೆದ ಚರ್ಚೆಗಳಲ್ಲಿ ಬಾಬಾ ಸಾಹೇಬ್  ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೇಳಿದ್ದನ್ನು ನಾವು ಗಮನಿಸಬೇಕು. “ಸಾಂವಿಧಾನ ಒಳ್ಳೆಯದೋ ಕೆಟ್ಟದ್ದೋ ಎಂದು ನಿರ್ಧಾರವಾಗುವುದು ಜಾರಿಗೊಳಿಸುವವರ ನೈತಿಕತೆಯ ಆಧಾರದ ಮೇಲೆ. ಇದು ಸಂವಿಧಾನ ನೈತಿಕತೆ” ಎಂದಿದ್ದರು ಅಂಬೇಡ್ಕರ್‌ ಎಂದು ಸ್ಮರಿಸಿದರು.

ರಾಜ್ಯ ಸರ್ಕಾರಗಳನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ. ಸಂವಿಧಾನದಲ್ಲಿ ಇರುವ ಪ್ರಾವಿಷನ್ ಇದಕ್ಕೆ ಕಾರಣವಲ್ಲ. ಒಕ್ಕೂಟ ವ್ಯವಸ್ಥೆ ಮುಖ್ಯ ಎಂಬುದನ್ನು ಬಾಬಾ ಸಾಹೇಬರು ಪ್ರತಿಪಾದಿಸಿದ್ದರು. ಇಲ್ಲಿನ ಸಮಾಜ ವೈರುಧ್ಯಗಳಿಂದ, ಭಿನ್ನಾಭಿಪ್ರಾಯಗಳಿಂದ ಕೂಡಿದೆ. ಅದೆಲ್ಲವನ್ನೂ ಮೀರಿ ಈ ದೇಶ ಉಳಿಯಬೇಕಾದರೆ ಒಂದು ಪ್ರಬಲವಾದ ಕೇಂದ್ರ ಸರ್ಕಾರ ಇರಬೇಕು ಎಂದು ಬಾಬಾ ಸಾಹೇಬರು ಭಾವಿಸಿದರು. ಆದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವವರು ರಾಜ್ಯ ಸರ್ಕಾರಗಳಿಗೆ ತಮ್ಮ ಪಾಲನ್ನು ನೀಡಲೇಬೇಕು ಎಂದು ವಿಶ್ಲೇಷಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ಇದುವರೆಗೂ ಕೇಂದ್ರದಲ್ಲಿ ಹೆಚ್ಚು ಅಧಿಕಾರ ನಡೆಸಿರುವವರು ಹಿಂದಿ ಭಾಗದವರು. ವಸಾಹತು ಕಾಲದಿಂದಲೂ ಮತ್ತು ಈಗಲೂ ಯಾರು ಜನಸಂಖ್ಯೆಯಲ್ಲಿ ಕಡಿಮೆ ಇದ್ದಾರೋ, ಇನ್ನೊಬ್ಬರ ಪಾಲನ್ನು ಕಿತ್ತುಕೊಳ್ಳಲು ನೋಡುತ್ತಾರೋ ಅಂಥವರಿಗೆ ಹೆಚ್ಚು ಪಾಲು ಸಿಕ್ಕಿದೆ. ಹಲವು ಅಧ್ಯಯನಗಳ ಅಂಕಿ- ಅಂಶಗಳನ್ನು ನೋಡುತ್ತಿದ್ದರೆ ಕೇಂದ್ರ ಸರ್ಕಾರ ಯಾವಾಗಲೂ ಭಾರತದ ಮೇಲ್ಜಾತಿ ಮತ್ತು ಮೇಲ್ವರ್ಗದ ಹಿತಾಸಕ್ತಿಯನ್ನು ಕಾಪಾಡುತ್ತಿದೆ ಎಂಬುದು ತಿಳಿಯುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಭಿನ್ನತೆ ಅಳಿಸಿ, ಸಮನ್ವಯತೆಯನ್ನು ಸಾಧಿಸಬೇಕಾದರೆ ದಬ್ಬಾಳಿಕೆಯನ್ನು ಕಡಿಮೆ ಮಾಡಬೇಕು ಎಂದರು.

ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ಸಾಂಸ್ಕೃತಿಕವಾದ ಭಿನ್ನತೆಗಳಿವೆ ಎಂಬುದು ಹಿಂದಿ ಭಾಷಿಕ ಭಾಗದ ಚುನಾವಣಾ ಫಲಿತಾಂಶಗಳನ್ನು ನೋಡುತ್ತಿದ್ದರೆ ಸ್ಪಷ್ಟವಾಗುತ್ತದೆ. ಉತ್ತರ ಭಾರತ ತುಂಬಾ ಸಾಂಪ್ರದಾಯಿಕವಾಗಿ ಯೋಚಿಸುತ್ತದೆ, ಶಿಕ್ಷಣದಲ್ಲಿ, ತಂತ್ರಜ್ಞಾನ ಬಳಸುವುದರಲ್ಲಿ, ಉದ್ಯೋಗ ಸೃಷ್ಟಿಸುವಲ್ಲಿ, ಜ್ಞಾನೋತ್ಪಾದನೆಯಲ್ಲಿ ಹಿಂದೆ ಬಿದ್ದಿದೆ. ಅದಕ್ಕೆ ತದ್ವಿರುದ್ಧವಾಗಿ ದಕ್ಷಿಣ ಭಾರತ ಪ್ರಗತಿಪರವಾಗಿ ಯೋಚನೆ ಮಾಡುತ್ತಿದೆ, ಶಿಕ್ಷಣದಲ್ಲಿ ಸಾಧನೆಗೈದಿದೆ, ಉದ್ಯೋಗ ಸೃಷ್ಟಿ ಮಾಡುತ್ತಿದೆ. ಸಂಪತ್ತಿನ ಉತ್ಪಾದನೆಯಲ್ಲೂ ಕೊಡುಗೆ ನೀಡುತ್ತಿದೆ. ಆದರೆ ನಮಗೆ ಕೊಡಬೇಕಾದ ಪಾಲು ಸಿಗುತ್ತಿಲ್ಲ ಎಂದು ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...