Breaking News | ಆಳಂದ ಮತದಾರರ ಪಟ್ಟಿ ಅಕ್ರಮ; ತನಿಖೆಗೆ ಎಸ್‌ಐಟಿ ರಚನೆ ಸಾಧ್ಯತೆ

Date:

Advertisements

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಾಗ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಆರು ಸಾವಿರದಷ್ಟು ಮತದಾರರನ್ನು ಮತ ಪಟ್ಟಿಯಿಂದ ಅಳಿಸುವ ಪ್ರಯತ್ನವನ್ನು ಮಾಡಲಾಗಿದೆ ಎಂಬ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಜ್ಯ ಸರ್ಕಾರ ಶೀಘ್ರವೇ SIT ರಚನೆ ಮಾಡಲಿದೆ. ಬಿ ಕೆ ಸಿಂಗ್‌ ಅವರು ಅದರ ಮುಖ್ಯಸ್ಥರಾಗಲಿದ್ದಾರೆ ಎಂಬ ಮಾಹಿತಿ ಈ ದಿನ.ಕಾಮ್‌ಗೆ ಲಭ್ಯವಾಗಿದೆ.

ಪಕ್ಷದ ತೀರ್ಮಾನದಂತೆ ಮುಂದಿನ ನಡೆ- ಬಿ ಆರ್‌ ಪಾಟೀಲ್

“ಇಂದು ಆಳಂದ ಕ್ಷೇತ್ರದ ಚುನಾವಣಾ ಅಕ್ರಮದ ಬಗ್ಗೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಅವರು ಮಾಡಿರುವ ಅಷ್ಟೂ ಆರೋಪಗಳು ನಿಜ. ಚುನಾವಣಾ ಆಯೋಗದ ನಡವಳಿಕೆ ಅನುಮಾನ ಹುಟ್ಟಿಸಿದೆ. ಸಿಐಡಿಯವರು ಹದಿನೆಂಟು ಬಾರಿ ದಾಖಲೆಗಳನ್ನು ಕೇಳಿದರೂ ಕೊಟ್ಟಿಲ್ಲ. ಅವರು ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ. ಪಕ್ಷದ ತೀರ್ಮಾನದಂತೆ ನನ್ನ ಮುಂದಿನ ನಡೆ ಇರಲಿದೆ. ರಾಹುಲ್‌ ಗಾಂಧಿ ಅವರು ಒಂದು ವಾರದ ಅವಕಾಶ ನೀಡಿದ್ದಾರೆ” ಎಂದು ಬಿ ಆರ್‌ ಪಾಟೀಲ್‌ ಅವರು ದೆಹಲಿಯಿಂದ ಈದಿನ.ಕಾಮ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ ಮತಗಳವು | ಪ್ರತಿಕ್ರಿಯಿಸುವ ಭರದಲ್ಲಿ ಬೆತ್ತಲಾದ ಚುನಾವಣಾ ಆಯುಕ್ತ

ಆಗಸ್ಟ್‌ ಏಳರಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್‌ ಗಾಂಧಿ ಅವರು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯಲ್ಲಿ “ಮತಗಳ್ಳತನ” ನಡೆದಿದೆ ಎಂದು ಗಂಭೀರ ಆರೋಪ ಮಾಡಿ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಮಹಾದೇವಪುರ ಕ್ಷೇತ್ರದಲ್ಲಿ ಒಂದೇ ಮನೆಗಳಲ್ಲಿ ಹಲವು ಮತದಾರರ ವಿಳಾಸವಿದ್ದು, ಅವರೆಲ್ಲ ಬೇರೆ ರಾಜ್ಯದವರಾಗಿದ್ದಾರೆ. ಅಷ್ಟೇ ಅಲ್ಲ ಒಂದೇ ಕ್ಷೇತ್ರ ಬೇರೆ ಬೇರೆ ವಾರ್ಡ್‌ಗಳಲ್ಲೂ ಮತದಾರರಾಗಿದ್ದಾರೆ. ಕೇವಲ ಐದಾರು ತಿಂಗಳಲ್ಲಿ ಒಂದು ಲಕ್ಷ ಹೊಸ ಮತದಾರರು ಸೇರ್ಪಡೆಯಾಗಿರುವುದನ್ನು ಕಾಂಗ್ರೆಸ್‌ ಪತ್ತೆ ಹಚ್ಚಿತ್ತು.

ಇದೀಗ ಆಳಂದ ಕ್ಷೇತ್ರದ ಮತದಾರರ ಪಟ್ಟಿ ಹಗರಣದ ಬಗ್ಗೆ ರಾಹುಲ್‌ ಗಾಂಧಿ ದೇಶದ ಗಮನ ಸೆಳೆದಿದ್ದಾರೆ. ರಾಹುಲ್‌ ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಚುನಾವಣಾ ಆಯೋಗ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕಸರತ್ತು ಮಾಡುತ್ತಿದೆ ಎಂಬುದಕ್ಕೆ ಇಂದಿನ ಆಯೋಗದ ಹೇಳಿಕೆಯೇ ಸಾಕ್ಷಿ. ರಾಹುಲ್ ಆರೋಪಗಳನ್ನು ಅಲ್ಲಗಳೆದಿರುವ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್, ”ಆರೋಪಗಳು ಆಧಾರರಹಿತ. ಸಾರ್ವಜನಿಕರು ಆನ್‌ಲೈನ್‌ನಲ್ಲಿ ಯಾವುದೇ ಮತಗಳನ್ನು ಅಳಿಸಲು ಸಾಧ್ಯವಿಲ್ಲ” ಎಂದು ಹೇಳಿಕೊಂಡಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತಗಳನ್ನು ಅಳಿಸಿ ಹಾಕುವ ಯತ್ನ ನಡೆದಿವೆ. ಮತದಾರರ ಪಟ್ಟಿಯಲ್ಲಿರುವ ಯಾರದ್ದೋ ಹೆಸರನ್ನು ಅಳಿಸಿ ಹಾಕುವಂತೆ ಇನ್ಯಾರದ್ದೋ ಹೆಸರಿನಲ್ಲಿ ಮತ್ಯಾರೋ ಅರ್ಜಿ ಸಲ್ಲಿಸಿದ್ದಾರೆ. ಇದೇ ರೀತಿ ಸಾವಿರಾರು ಮತದಾರರ ಹೆಸರುಗಳನ್ನು ಅಳಿಸಿ ಹಾಕುವ ಹುನ್ನಾರ ನಡೆದಿದೆ ಎಂಬುದು ರಾಹುಲ್‌ ಅವರ ಆರೋಪ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X