ಬಜೆಟ್:‌ ಸರ್ಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ ನಿಧಿಯ ಬಳಕೆಗೆ ತೀವ್ರವಿರೋಧ

Date:

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 600 ಕೋಟಿ ರೂಪಾಯಿ ವೆಚ್ಚದಲ್ಲಿ GTTC ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿರುವುದನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ತೀವ್ರವಾಗಿ ವಿರೋಧಿಸಿದೆ.

- Advertisement -

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆ, “ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು ರಾಜ್ಯ ಸರ್ಕಾರದ ಕೆಲಸ, ಜೊತೆಗೆ ಈ ತರಬೇತಿ ಕೇಂದ್ರಗಳಲ್ಲಿ ಕೇವಲ ಕಟ್ಟಡ ಕಾರ್ಮಿಕರ ಮಕ್ಕಳು ಮಾತ್ರವಲ್ಲದೆ ಎಲ್ಲರಿಗೂ ಪ್ರವೇಶಾವಕಾಶ ಇದೆ. ಹೀಗಿರುವಾಗ ಕಲ್ಯಾಣ ಮಂಡಳಿಯಿಂದ 600 ಕೋಟಿ ರೂಪಾಯಿ ವೆಚ್ಚ ಮಾಡುವ ನಿರ್ಧಾರವು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಗೆಯುವ ದ್ರೋಹವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾಗೆಯೇ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ ಹಾಗೂ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿರುವ ಕೌಶಲ್ಯ ಅಭಿವೃದ್ಧಿ ಅಕಾಡೆಮಿಗಳನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯನ್ನು ಬಳಸಿ ನಿರ್ಮಾಣ ಮಾಡುವ ಬಜೆಟ್ ಪ್ರಸ್ತಾಪವು 1996ರ ಕಟ್ಟಡ ಕಾರ್ಮಿಕರ ಕಾಯ್ದೆಯ ಉದ್ದೇಶವನ್ನು ಬುಡಮೇಲು ಮಾಡುವುದಾಗಿದೆ.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯು ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವುದು ಸೇರಿದಂತೆ, ಕಾರ್ಮಿಕರ ಆರೋಗ್ಯ, ಸುರಕ್ಷತೆ ಮತ್ತು ಶಿಕ್ಷಣದ ಅಗತ್ಯತೆಗಳಿಗಾಗಿ ಬಳಸಬೇಕು ಮತ್ತು ಇದನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಯೋಜನೆಗಳಿಗೆ ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸಬಾರದೆಂದು ಕಾಯ್ದೆ ಹೇಳುತ್ತದೆ ಮತ್ತು ಸುಪ್ರೀಂ ಕೋರ್ಟ್ ಕೂಡ ಇದನ್ನು ಎತ್ತಿ ಹಿಡಿದಿದೆ. ಹೀಗಿರುವಾಗ ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಮಾಡಬೇಕಾದ ಯೋಜನೆಗಳನ್ನು ಬಡ ಕಾರ್ಮಿಕರ ನಿಧಿಯನ್ನು ಬಳಸಿ ಮಾಡುತ್ತಿರುವುದು ಸರಿಯಲ್ಲ.

ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ರಾಜ್ಯ ಸರ್ಕಾರದ ಈ ಮೂರು ಬಜೆಟ್ ಪ್ರಸ್ತಾಪಗಳನ್ನು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಇದನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸುತ್ತದೆ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಗಳನ್ನು ನಡೆಸಲು ಎಚ್ಚರಿಸುತ್ತದೆ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಟಿಂಗ್ ಆಪರೇಷನ್ ಸುಳಿಯಲ್ಲಿ ಸಿಲುಕಿದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಹಿನ್ನೆಲೆ ಏನು?

ಕೃಪಾ ಆಳ್ವ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ...

ಉದ್ಯೋಗ ಸೃಷ್ಟಿ, ನೈಸರ್ಗಿಕ, ಪಾರಂಪರಿಕ ತಾಣಗಳ ಪರಿಚಯಿಸಲು ಕ್ರಾಂತಿಕಾರಿ ಹೆಜ್ಜೆ: ಸಿಎಂ ಡಿ.ಕೆ. ಶಿವಕುಮಾರ್

"ಕರ್ನಾಟಕವು ನೈಸರ್ಗಿಕ ಹಾಗೂ ಪಾರಂಪರಿಕ ಸಂಪತ್ತಿನಿಂದ ಶ್ರೀಮಂತವಾಗಿದೆ. ಹಂಪಿ, ಬೇಲೂರು, ಮಲೆನಾಡು,...

ಹವಾಮಾನ ವರದಿ: ಮುಂದಿನ 5 ದಿನ 12 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಹಿಂಗಾರು ಮತ್ತು ತಮಿಳುನಾಡು ಕರಾವಳಿಯಲ್ಲಾಗಿರುವ ಹವಾಮಾನ ಬದಲಾವಣೆಯ ಪ್ರಭಾವದಿಂದಾಗಿ ಮುಂದಿನ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...