ಜಿಬಿಎ ವ್ಯಾಪ್ತಿಯ ಕಟ್ಟಡ ಉಲ್ಲಂಘನೆ ಮಿತಿ ಶೇ.15ಕ್ಕೆ ಏರಿಕೆ : ಕಟ್ಟಡ ಉಪವಿಧಿ ತಿದ್ದುಪಡಿಗೆ ಸರ್ಕಾರ ನಿರ್ಧಾರ

Date:

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿ ಕುರಿತ ಕರಡು ಅಧಿಸೂಚನೆ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದೆ.

- Advertisement -

ಈ ಸಂಬಂಧಿಸಿದಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾಹಿತಿ ನೀಡಿ, ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 30 ದಿನಗಳೊಳಗೆ ಸಂಬಂಧಿತ ಐದು ನಗರ ಪಾಲಿಕೆಗಳ ಆಯುಕ್ತರ ಕಚೇರಿಗಳಲ್ಲಿ ಸಾರ್ವಜನಿಕರು ತಮ್ಮ ಆಕ್ಷೇಪಣೆ ಹಾಗೂ ಸಲಹೆಗಳನ್ನು ಸಲ್ಲಿಸಬಹುದಾಗಿದೆ ಎಂದು  ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಕಟ್ಟಡ ನಿರ್ಮಾಣದಾರರಿಗೆ ಇದು ಮಹತ್ವದ ಸಡಿಲಿಕೆಯಾಗಿದೆ.

ನಗರದಲ್ಲಿ ಭೂಮಿ ಬೆಲೆ ಏರಿಕೆ ಹಾಗೂ ಅನಿವಾರ್ಯ ಪರಿಸ್ಥಿತಿಗಳಿಂದಾಗಿ ಅನೇಕ ಕಟ್ಟಡಗಳು ಮಂಜೂರಾತಿ ನಕ್ಷೆಗೆ ವಿರುದ್ಧವಾಗಿ ನಿರ್ಮಾಣವಾಗಿರುವುದು ಕಂಡುಬಂದಿದೆ. ಪ್ರಸ್ತುತ ನಿಯಮಾನುಸಾರ ಶೇ. 5 ರಷ್ಟು ಮಾತ್ರ ಉಲ್ಲಂಘನೆಗಳನ್ನು ಸಕ್ರಮಗೊಳಿಸಲು ಅವಕಾಶವಿದ್ದು, ಹೆಚ್ಚಿನ ಕಟ್ಟಡಗಳು ಈ ಮಿತಿಯನ್ನು ಮೀರಿ ಇರುವುದರಿಂದ ಸಮಸ್ಯೆ ಉಂಟಾಗಿತ್ತು.

ಈ ಹಿನ್ನೆಲೆ, ಕಟ್ಟಡ ಉಪವಿಧಿ 2003ರ ಉಪವಿಧಿ 6ಕ್ಕೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದ್ದು, ಉಲ್ಲಂಘನೆ ಮಿತಿಯನ್ನು ಶೇ. 5ರಿಂದ ಶೇ. 15ರವರೆಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಮಿತಿಯೊಳಗಿನ ಉಲ್ಲಂಘನೆಗಳಿಗೆ ದಂಡ ವಿಧಿಸಿ ಕ್ರಮಬದ್ಧಗೊಳಿಸುವ ಅವಕಾಶ ಕಲ್ಪಿಸಲಾಗುತ್ತದೆ.

ಈ ಕ್ರಮದಿಂದ ಅನೇಕ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (OC) ದೊರೆಯುವ ಸಾಧ್ಯತೆ ಇದ್ದು, ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಸಹಾಯವಾಗಲಿದೆ.

ಇದನ್ನೂ ಓದಿ : ಹಾಸನ ಮಣ್ಣಿನ ಹೆಣ್ಣು ದನಿಗಳು | ಜಿಲ್ಲೆಯ ಪ್ರಥಮ ಪೌರಾಣಿಕ ನಾಟಕ ನಿರ್ದೇಶಕಿ- ಸವಿತಾ…

ಆದರೆ, ಈ ಮಿತಿಯಾಚೆಗಿನ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ.

ಸಾರ್ವಜನಿಕರ ಆರೋಗ್ಯ, ಸುರಕ್ಷತೆ ಹಾಗೂ ಗಾಳಿ-ಬೆಳಕು ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಈ ತಿದ್ದುಪಡಿ ರೂಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕರಡು ಉಪವಿಧಿಗಳ ಕುರಿತು ಸಲಹೆಗಳನ್ನು ಏಪ್ರಿಲ್ 30ರೊಳಗೆ ಸಲ್ಲಿಸಲು ಸಾರ್ವಜನಿಕರನ್ನು ಕೋರಲಾಗಿದೆ. ಅಧಿಸೂಚನೆ ಪ್ರತಿಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

ಇನ್ನು, ಬೆಂಗಳೂರು ಉತ್ತರ, ಕೇಂದ್ರ, ಪೂರ್ವ, ದಕ್ಷಿಣ ಹಾಗೂ ಪಶ್ಚಿಮ ನಗರ ಪಾಲಿಕೆ ಆಯುಕ್ತರ ಕಚೇರಿಗಳಿಗೆ ಸಲಹೆಗಳನ್ನು ಸಲ್ಲಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...