ಬುರ್ಕಾನ್ ಗ್ರೂಪ್ ನಿಂದ ಎಐ ಸರ್ವರ್ ಉತ್ಪಾದನೆ, ₹1,500 ಕೋಟಿ ಹೂಡಿಕೆ: ಸಚಿವ ಎಂ ಬಿ ಪಾಟೀಲ್

Date:

ಅಮೆರಿಕದ ಮಿಯಾಮಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬುರ್ಕಾನ್ ವರ್ಲ್ಡ್ ಇನ್ವೆಸ್ಟ್ಮೆಂಟ್ ಗ್ರೂಪ್ ರಾಜ್ಯದಲ್ಲಿ ಕೃತಕ ಬುದ್ಧಿ ಮತ್ತೆ ತಂತ್ರಜ್ಞಾನ ದಿಂದ ಕಾರ್ಯನಿರ್ವಹಿಸುವ ಅತ್ಯಾಧುನಿಕ ಎಐ ಸರ್ವರ್ ಗಳ ಉತ್ಪಾದನೆಗೆ 1,500 ಕೋಟಿ ರೂಪಾಯಿ ಬಂಡವಾಳ ಹೂಡಲು ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

- Advertisement -

ಗುರುವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಬುರ್ಕಾನ್ ಸಮೂಹದ ಸಿಇಒ ಶಫಿ ಎಂ ಖಾನ್ ಮತ್ತು ಅವರ ತಂಡದೊಂದಿಗೆ ಹೂಡಿಕೆ ಮತ್ತಿತರ ಸಂಗತಿಗಳ ಬಗ್ಗೆ ವಿಸ್ತೃತ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಬಳಿಕ ಮಾತನಾಡಿದ ಅವರು, “ಇದು ದೇವನಹಳ್ಳಿ ಸಮೀಪ 10-15 ಎಕರೆ ಭೂಮಿ ಕೇಳಿದ್ದು, ಇದನ್ನು ಒದಗಿಸಲಾಗುವುದು. ಇದರಿಂದ ಉತ್ಪಾದನಾ ವಲಯದಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿವೆ” ಎಂದು ತಿಳಿಸಿದರು.

ಡೇಟಾ ಸೆಂಟರ್ ಗಳಲ್ಲಿ ಬಳಕೆಯಾಗುವ ಈ ಸರ್ವರ್ ಗಳಿಗೆ ವಿಪರೀತ ಬೇಡಿಕೆ ಇದ್ದು ಬೇರೆ ಬೇರೆ ದೇಶಗಳಿಗೆ ರಫ್ತು ಕೂಡ ಮಾಡುವುದಾಗಿ ಕಂಪನಿಯವರು ಹೇಳಿದ್ದು, ಅದಕ್ಕೆ ಪೂರ್ಣ ಸಹಕಾರ ನೀಡಲಾಗುವುದು. ಸಹಾಯಧನ ಇತ್ಯಾದಿ ವಿಚಾರಗಳ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಸಲು ಪ್ರಧಾನ ಕಾರ್ಯದರ್ಶಿ ಅವರಿಗೆ ಸಚಿವರು ಸೂಚಿಸಿದರು.

ಇದಲ್ಲದೆ, ಬುರ್ಖಾನ್ ಸಮೂಹವು ಅತ್ಯಾಧುನಿಕ ಸಿಪಿಯು, ಜಿಪಿಯು, ಎಐ-ರೆಡಿ ನೆಟ್ವರ್ಕ್ ಸ್ವಿಚ್ ಉತ್ಪಾದನೆ ಆರಂಭಿಸುವುದಕ್ಕೂ ಬಯಸಿದೆ. ಇದಕ್ಕಾಗಿ ಅದು ಜಾಗತಿಕ ಮಟ್ಟದಲ್ಲಿ ತನ್ನ ತಾಂತ್ರಿಕ ಪಾಲುದಾರ ಕಂಪನಿಗಳಾದ ಸೂಪರ್-ಮೈಕ್ರೋ, ಗಿಗಾಬೈಟ್ ಮತ್ತು ಸೆರಾ ನೆಟ್ವರ್ಕ್ ಜತೆ ರಾಜ್ಯದಲ್ಲಿ ಬಂಡವಾಳ ಹೂಡಲು ಬಯಸಿದೆ. ಸರಕಾರ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದಿದ್ದಾರೆ.

ಬುರ್ಕಾನ್ ಕಂಪನಿಯ ಹೂಡಿಕೆಯಿಂದ ಸೆಮಿಕಂಡಕ್ಟರ್, ಎಐ ಹಾರ್ಡ್-ವೇರ್ ಮತ್ತು ಆಧುನಿಕ ಎಲೆಕ್ಟ್ರಾನಿಕ್ಸ್ ಕಾರ್ಯಪರಿಸರದ ಬಲವರ್ಧನೆಯಾಗಲಿದೆ. ಅದು ಉತ್ಪಾದನಾ ಪ್ರಕ್ರಿಯೆಯಲ್ಲಿ ರೆಸೊಲ್ಯೂಟ್ ಗ್ರೂಪ್ ಮತ್ತು ಕ್ವಾಡ್-ಜೆನ್ ಕಂಪನಿಗಳ ಸಹಯೋಗ ಹೊಂದಲು ಬಯಸಿದೆ. ಇದರಿಂದ ಸ್ಥಳೀಯವಾಗಿಯೇ ಆರ್ & ಡಿ ಅಭಿವೃದ್ಧಿ, ತಂತ್ರಜ್ಞಾನ ವರ್ಗಾವಣೆ, ಶಿಕ್ಷಣ ಸಂಸ್ಥೆಗಳು ಮತ್ತು ಇಲ್ಲಿಯ ಕೈಗಾರಿಕೆಗಳೊಂದಿಗೆ ಸಹಭಾಗಿತ್ವ ಕೈಗೂಡಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಂಪನಿಯು ಭಾರತ ಮತ್ತು ಇಎಂಇಎ ವಲಯಗಳಲ್ಲಿ ತಾನು ಒದಗಿಸಲಿರುವ ಸೇವೆಗಳಿಗೆ ಬೆಂಗಳೂರನ್ನು ಉತ್ಕೃಷ್ಟತಾ ಕೇಂದ್ರವನ್ನಾಗಿ ಮಾಡಿಕೊಳ್ಳಲಿದೆ. ಜತೆಗೆ ರಾಜ್ಯಾದ್ಯಂತ ವಿಶೇಷ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಒಟ್ಟಾರೆಯಾಗಿ ಅದು ನಮ್ಮೊಂದಿಗೆ ಬೃಹತ್ ಕೈಗಾರಿಕೆ, ಐಟಿ-ಬಿಟಿ ಮತ್ತು ಇಎಸ್ಡಿಎಂ ಕ್ಷೇತ್ರಗಳಲ್ಲಿ ಪಾಲುದಾರಿಕೆಯ ಅವಕಾಶಗಳನ್ನು ಪರಿಶೀಲಿಸುತ್ತಿದೆ ಎಂದು ಪಾಟೀಲ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಶಿಗ್ಗಾವ್ ಶಾಸಕ ಯಾಸಿರ್ ಅಹಮದ್ ಪಠಾಣ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ಕ್ವಾಡ್-ಜೆನ್ ಕಂಪನಿ ಅಧ್ಯಕ್ಷ ಸಿ.ಎಸ್.ರಾವ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ದೆಹಲಿ ಸಿಜೆಪಿ ಹೋರಾಟಕ್ಕೆ ಎಸ್‌ಐಆರ್ ವಿರೋಧಿ ಒಕ್ಕೂಟ ಬೆಂಬಲ: ರಾಜ್ಯಾದ್ಯಂತ ಪಂಜಿನ ಮೆರವಣಿಗೆಗೆ ಕರೆ

ಏಕಪಕ್ಷೀಯ ನಿರ್ಧಾರ ಕೈಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...