ಬೆಲೆ ಏರಿಕೆಯಿಂದ ಕಂಗೆಟ್ಟ ಜನರಿಗೆ ಬಸ್ ದರ ಏರಿಕೆ ಬರೆ; ಸರ್ಕಾರದ ವಿರುದ್ಧ ಸಿಪಿಐಎಂ ಆಕ್ರೋಶ

Date:

ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಮೇಲೆ ಮತ್ತೆ ಸಾರಿಗೆ ಪ್ರಯಾಣ ದರ ಹೆಚ್ಚಳದ ಹೊರೆ ಹೊರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ತೀವ್ರವಾಗಿ ಖಂಡಿಸಿದೆ. ಸಾರಿಗೆ ದರಗಳ ಯದ್ವಾತದ್ವಾ ಪರಿಷ್ಕರಣೆಯನ್ನು ತಕ್ಷಣವೇ ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ(ಎಂ) ರಾಜ್ಯ ಸಮಿತಿ ಕಾರ್ಯದರ್ಶಿ ಡಾ. ಪ್ರಕಾಶ್ ಕೆ., ಈಗಾಗಲೇ ಹಾಲು, ಅಕ್ಕಿ, ಬೇಳೆ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನರ ಆರ್ಥಿಕ ಹೊರೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ ಪರ-ವಿರೋಧ ಚರ್ಚೆಗಳಿಗೆ ವೇದಿಕೆ ಸೃಷ್ಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ಚಸ್ಸನ್ನು ಕುಗ್ಗಿಸಲು ಮತ್ತು ಅವರ ತೇಜೋವಧೆ ಮಾಡಲೆಂದೇ ಈ...

ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು...

ರಾಹುಲ್ ಗಾಂಧಿಯವರನ್ನು ರಾಜಕೀಯವಾಗಿ ಅಪ್ರಸ್ತುತಗೊಳಿಸಲು ನಿರಂತರವಾಗಿ ಪ್ರಯತ್ನಿಸಿದವರು, ಅವರ ಹೆಸರನ್ನು ದೇಶದ ರಾಜಕೀಯ ಚರ್ಚೆಯಿಂದ ಅಳಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರ ರಾಜಕೀಯ ಚಟುವಟಿಕೆಗಳು ಮತ್ತು ಅವರು ಎತ್ತುವ ಪ್ರಶ್ನೆಗಳೇ ಸಾರ್ವಜನಿಕ ಚರ್ಚೆಯ ಭಾಗವಾದವು. ರಾಜಕೀಯದಲ್ಲಿ...

ಅಮೆರಿಕದಲ್ಲಿ ಟ್ರಂಪ್ ಬೇಡ – ಭಾರತದಲ್ಲಿ ಮೋದಿ ಬೇಕು;...

ಅಮೆರಿಕದಲ್ಲಿ 2026ರ ನವೆಂಬರ್ ಮಧ್ಯಂತರ ಚುನಾವಣೆ ನಡೆದು, ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಈ ಚುನಾವಣೆಗೂ ಮುನ್ನ ‘ಕಾರ್ನೆಗಿ ಎಂಡೋಮೆಂಟ್ ಫಾರ್ ಇಂಟರ್‌ನ್ಯಾಷನಲ್ ಪೀಸ್ ಮತ್ತು ಯೂಗವ್’ ಸಂಸ್ಥೆ ರಾಜಕೀಯ ಸಮೀಕ್ಷೆಯೊಂದನ್ನು ನಡೆಸಿದೆ. ಮಹತ್ವದ ರಾಜಕೀಯ...

ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರದಲ್ಲಿ ಕನಿಷ್ಠ 9 ರೂ. ಹೆಚ್ಚಳವಾಗಲಿದ್ದು, ದೂರದ ಪ್ರಯಾಣಗಳಿಗೆ ಇನ್ನಷ್ಟು ದರ ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಸಂಚರಿಸುವ ಬಿಎಂಟಿಸಿ ಬಸ್‌ಗಳ ಕನಿಷ್ಠ ಪ್ರಯಾಣ ದರವನ್ನು 6 ರೂ.ನಿಂದ 10 ರೂ.ಗೆ ಹೆಚ್ಚಿಸಲಾಗಿದೆ. ಕೆಲವು ಪ್ರಯಾಣದ ಹಂತಗಳಲ್ಲಿ 10ರಿಂದ 12 ರೂ.ವರೆಗೆ ದರ ಏರಿಕೆಯಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಅನ್ವಯಿಸದ ವಜ್ರ ಬಸ್‌ಗಳ ದರವನ್ನೂ ಹೆಚ್ಚಿಸಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಹೈನುಗಾರಿಕೆ ರೈತರ ಸಂಕಷ್ಟಕ್ಕೆ ಸಬ್ಸಿಡಿ ಹೆಚ್ಚಿಸುವ ಮೂಲಕ ನೆರವಾಗುವ ಬದಲು ಹಾಲಿನ ದರ ಹೆಚ್ಚಿಸಿ ಗ್ರಾಹಕರು ಮತ್ತು ಉತ್ಪಾದಕರ ನಡುವೆ ಅಸಮಾಧಾನ ಸೃಷ್ಟಿಸಲಾಗಿದೆ. ಇದೀಗ ಸಾರಿಗೆ ದರ ಏರಿಕೆಯೂ ಜನರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯ ಶಿಫಾರಸಿನ ಆಧಾರದ ಮೇಲೆ ದರ ಹೆಚ್ಚಳ ಮಾಡಲಾಗಿದೆ. ಆದರೆ, ಸಮಿತಿಯು ಬಡ ಮತ್ತು ದುಡಿಯುವ ಜನರ ಬದುಕಿನ ಸಂಕಷ್ಟಗಳನ್ನು ಪರಿಗಣಿಸದೆ ನಿರ್ಧಾರ ಕೈಗೊಂಡಿದೆ ಎಂದು ಸಿಪಿಐ(ಎಂ) ಟೀಕಿಸಿದೆ.

ಇದನ್ನೂ ಓದಿ: ಉಚಿತ ಬಸ್ ಪ್ರಯಾಣ ಸೌಲಭ್ಯ; ಮಹಿಳೆ ಸಂಚಾರಕ್ಕೆ ರೆಕ್ಕೆಪುಕ್ಕ: NSO ಸಮೀಕ್ಷಾ ವರದಿ

ಸಾರಿಗೆ ನಿಗಮಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಸೋರಿಕೆ ಮತ್ತು ಅವ್ಯವಹಾರಗಳನ್ನು ತಡೆಯಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ಅದರ ಬದಲಿಗೆ ನಿಗಮಗಳ ಆರ್ಥಿಕ ಹೊರೆಯನ್ನು ಪ್ರಯಾಣಿಕರ ಮೇಲೆ ಹೇರುವುದು ಸರಿಯಲ್ಲ. ಜನರನ್ನು ಸುಲಿಗೆ ಮಾಡುವ ಇಂತಹ ಕ್ರಮಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದೆ. ರಾಜ್ಯ ಸರ್ಕಾರ ಕೂಡಲೇ ಸಾರಿಗೆ ಪ್ರಯಾಣ ದರ ಹೆಚ್ಚಳದ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಡಾ. ಪ್ರಕಾಶ್ ಕೆ. ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕಸ ವಿಲೇವಾರಿ ಘಟಕವನ್ನು ಹಸಿರು ಪರಿಸರದ ಮಾದರಿಯಾಗಿಸಿ: ಜಿಲ್ಲಾಧಿಕಾರಿ ಆನಂದ ಕೆ

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಇವಣಗಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ...

ʼಸ್ಟಿಂಗ್‌ʼ ಸರ್ಕಸ್‌ | ಬೇಳೆ ಬೇಯಿಸಿಕೊಂಡವರಾರೋ, ಸಂತ್ರಸ್ತರಾರೋ!

ರಾಜ್ಯಾದ್ಯಂತ ಈಗ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣವು ಹೊಸ...

ವಿಜಯಪುರ | ಅಭಿವೃದ್ಧಿ ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಬೇಡ: ಜಿಲ್ಲಾಧಿಕಾರಿ ಡಾ. ಆನಂದ ಕೆ

ವಿಜಯಪುರ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ಪಟ್ಟಣಗಳಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ...

56% ಮೀಸಲಾತಿಗೆ ಹೈಕೋರ್ಟ್ ತಡೆ: ಶೋಷಿತರ ಸಾಮಾಜಿಕ ನ್ಯಾಯಕ್ಕಾಗಿ ರಾಜ್ಯಮಟ್ಟದ ಬೃಹತ್ ಹಕ್ಕೊತ್ತಾಯ ಸಭೆ

ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು...