ಉಪಚುನಾವಣೆ | ಬಾಗಲಕೋಟೆ, ದಾವಣಗೆರೆಗೆ ಅಭ್ಯರ್ಥಿ ಘೋಷಿಸಿದ ಬಿಜೆಪಿ

Date:

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಿಗದಿಯಾಗಲಿದೆ. ಎರಡೂ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಗುರುವಾರ ಘೋಷಿಸಿದೆ. ಬಾಗಲಕೋಟೆಗೆ ವೀರಣ್ಣ ಚರಂತಿಮಠ್ ಮತ್ತು ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿದೆ.

- Advertisement -

ಬಾಗಲಕೋಟೆ ಶಾಸಕರಾಗಿದ್ದ ಎಚ್.ವೈ. ಮೇಟಿ ಮತ್ತು ದಾವಣೆಗೆರೆ ದಕ್ಷಿಣದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ಹಿನ್ನೆಲೆ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ದಾವಣಗೆರೆಯಲ್ಲಿ ಜಾತಿ ಲೆಕ್ಕಾಚಾರದ ತಂತ್ರ ಹೆಣೆದಿರುವ ಬಿಜೆಪಿ, ಶ್ರೀನಿವಾಸ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಿದೆ. ಎಸ್‌ಟಿ ಸಮುದಾಯಕ್ಕೆ ಸೇರಿದ ಶ್ರೀನಿವಾಸ ಅವರು ಎಸ್‌ಸಿ/ಎಸ್‌ಟಿ ಮತಗಳನ್ನು ಪಡೆದುಕೊಳ್ಳಬಹುದು, ಜೊತೆಗೆ, ಲಿಂಗಾಯತ ಸಮುದಾಯವೂ ಪಕ್ಷಕ್ಕೆ ಮತ ನೀಡಬಹುದು ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿದೆ.

ಅಂತೆಯೇ, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರನ್ನು ಬಾಗಲಕೋಟೆಯಲ್ಲಿ ಕಣಕ್ಕಿಳಿಸಲಾಗಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ, ಗೆಲುವು ಸುಲಭವೆಂದು ಬಿಜೆಪಿ ಭಾವಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...