ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂಪಾಯಿ ಸಂಪುಟ ಅನುಮೋದನೆ

Date:

ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ, ಜಿಲ್ಲಾ ಪ್ರಮುಖ ರಸ್ತೆಗಳು, ಸೇತುವೆಗಳ ನಿರ್ಮಾಣಕ್ಕೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.

- Advertisement -

ಸಂಪುಟ ಸಭೆಯ ಬಳಿಕ ವಿವರ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ, ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದ್ದು, ರಾಜ್ಯದ ವಿವಿಧ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಮ್ಮತಿಸಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಂತ 5, ಘಟ್ಟ 2 ರಲ್ಲಿ, ಒಟ್ಟು 1897 ಕಿ.ಮೀ. ಉದ್ದದ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು. ಅನುಬಂಧ- ಇ ಅಡಿಯಲ್ಲಿ 6000 ಕೋಟಿ ರೂ. ಅಂದಾಜು ವೆಚ್ಚದಲ್ಲಿ ವಿವಿಧ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರಸ್ತೆ, ಸೇತುವೆ ಮತ್ತು ಕಟ್ಟಡ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆಶಿ ವಿವರಿಸಿದರು.

Advertisements

ಇದನ್ನೂ ಓದಿ: ಶೇ.15ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಜತೆಗೆ 3000 ಕೋಟಿ ರೂ ಹೆಚ್ಚುವರಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲೂ ಸಂಪುಟ ಸಮ್ಮತಿಸಿದ್ದು, ಒಂದು ಜಿಲ್ಲಾ ಕೇಂದ್ರದಿಂದ ಮತ್ತೊಂದು ಜಿಲ್ಲಾ ಕೇಂದ್ರಕ್ಕೆ, ಜಿಲ್ಲಾ ಕೇಂದ್ರದಿಂದ ತಾಲ್ಲೂಕು ಕೇಂದ್ರಕ್ಕೆ ಮತ್ತು ತಾಲ್ಲೂಕು ಕೇಂದ್ರದಿಂದ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 3986 ಕಿ.ಮೀ. ರಸ್ತೆ ಅಭಿವೃದ್ಧಿಯನ್ನು 6000 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಹೊಸ ಯೋಜನೆಗೂ ಸಚಿವ ಸಂಪುಟ ತನ್ನ ಅನುಮೋದನೆ ನೀಡಿದೆ ಎಂದರು.

ಬೆಂಗಳೂರು ಸುತ್ತಮುತ್ತಲ 155 ಕಿ.ಮೀ ರಸ್ತೆಗಳ ಅಭಿವೃದ್ಧಿಗೂ ಒಪ್ಪಿಗೆ: ಈಶ್ವರ ಖಂಡ್ರೆ

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ವತಿಯಿಂದ ಬೆಂಗಳೂರು ಸುತ್ತಮುತ್ತಲಿನ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು 10 ಪ್ಯಾಕೇಜ್‌ ಗಳಲ್ಲಿ ಕೈಗೊಳ್ಳಲು 3409.02 ಕೋಟಿ ರೂ. ಪರಿಷ್ಕೃತ ಅಂದಾಜು ವೆಚ್ಚಕ್ಕೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.

ಬೆಂಗಳೂರು ನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಮತ್ತು ಬೆಂಗಳೂರು ನಗರದ ರಸ್ತೆ ಜಾಲವನ್ನು ಬಲಪಡಿಸಲು ಈ ಯೋಜನೆ ಪೂರಕವಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಬೆಂಗಳೂರು ಸುತ್ತಮುತ್ತಲಿನ 155 ಕಿ.ಮೀ. ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಇ.ಪಿ.ಸಿ. ಮಾದರಿಯಲ್ಲಿ 2095 ಕೋಟಿ ರೂ. ಗಳಲ್ಲಿ ಕೈಗೆತ್ತಿಕೊಳ್ಳಲು 2017ರಲ್ಲಿಯೇ ಅನುಮೋದನೆ ನೀಡಲಾಗಿತ್ತು. ಈ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು 2019 ರಲ್ಲಿ ಪ್ರಾರಂಭಿಸಲಾಗಿದ್ದು, ಪರಿಷ್ಕೃತ 142.27 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೈಕಿ 121.78 ಕಿ.ಮೀ. ರಸ್ತೆ ಪೂರ್ಣಗೊಂಡಿದೆ ಎಂದೂ ವಿವರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು...

ಬೀದರ್‌ | ಜನಗಣತಿಯಲ್ಲಿ ನಿಖರ ದತ್ತಾಂಶ ಸಂಗ್ರಹಿಸಿ : ಅಪರ ಜಿಲ್ಲಾಧಿಕಾರಿ ಸುರೇಖಾ

2027ರ ಜನಗಣತಿಯಲ್ಲಿ ಯಾವುದೇ ಮನೆ ಅಥವಾ ವ್ಯಕ್ತಿ ಹೊರಗುಳಿಯದಂತೆ ಅಧಿಕಾರಿಗಳು ಮತ್ತು...

ಪ್ರತಿ ರೈತನಿಗೆ ಬರ ಪರಿಹಾರವಾಗಿ ಗರಿಷ್ಠ 5000 ರೂ. ನೀಡಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

“ದಸರಾ ಮುಗಿದು ದೀಪಾವಳಿ ಬಂದಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಅವರ ಬದುಕಿಗೆ ಬೆಳಕು...