‘ನಮ್ಮದು ಸಾಮಾಜಿಕ ನ್ಯಾಯದ ಸಂಪುಟ, ಬಿಜೆಪಿಯಿಂದ ಸಂವಿಧಾನದ ಪಾಠ ಕಲಿಯಬೇಕಿಲ್ಲ’: ಬಿ.ಕೆ. ಹರಿಪ್ರಸಾದ್ ತಿರುಗೇಟು

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ ಎಂಬ ಆರೋಪಗಳನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸಚಿವ ಸ್ಥಾನ ಸಿಗದಿದ್ದಾಗ ಬೇಸರವಾಗುವುದು ಸಹಜ; ಮುನಿಸಿಕೊಂಡಿರುವ ಎಲ್ಲ ಶಾಸಕರೊಂದಿಗೂ ಖುದ್ದಾಗಿ ಮಾತನಾಡಿ ಮನವೊಲಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

ಕೆಪಿಸಿಸಿ ಕಚೇರಿ ಇಂದಿರಾಗಾಂಧಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಎಲ್ಲ ವರ್ಗಗಳಿಗೂ ಆದ್ಯತೆ ನೀಡಲಾಗಿದೆ. “ನಮ್ಮಲ್ಲಿ 140 ಶಾಸಕರಿದ್ದು, ಅವರಲ್ಲಿ 48 ಮಂದಿ ಮೊದಲ ಬಾರಿ ಗೆದ್ದವರಾಗಿದ್ದಾರೆ. ಉಳಿದವರೆಲ್ಲರೂ ನಾಲ್ಕೈದು ಬಾರಿ ಗೆದ್ದ ಹಿರಿಯರೇ ಆಗಿದ್ದಾರೆ. ಎಲ್ಲರಿಗೂ ಸಚಿವ ಸ್ಥಾನ ನೀಡುವುದು ಕಷ್ಟ. ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಹಿಂದಿನ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇರಲಿಲ್ಲ. ಆದರೆ ನಾವು ಬಹುತೇಕ ಎಲ್ಲಾ ಜಿಲ್ಲೆಗಳಿಗೂ ಅವಕಾಶ ನೀಡಿದ್ದೇವೆ. ಪೌರಕಾರ್ಮಿಕರ ದಂಪತಿಯ ಮಗನಿಗೆ ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಬರೆದಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಕ್ರೈಸ್ತರು, ಒಕ್ಕಲಿಗರು, ಲಿಂಗಾಯತರು ಸೇರಿದಂತೆ ಪ್ರಾತಿನಿಧ್ಯ ವಂಚಿತ ಸಮುದಾಯಗಳಿಗೆ ಈ ಬಾರಿ ನ್ಯಾಯ ಒದಗಿಸಲಾಗಿದೆ ಎಂದು ಅವರು ವಿವರಿಸಿದರು.

ಸಚಿವ ಸ್ಥಾನ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಎಂ. ಕೃಷ್ಣಪ್ಪ, ಪ್ರಿಯಾ ಕೃಷ್ಣ ಹಾಗೂ ರಾಯಗೌಡ ಪಾಟೀಲ್ ಸೇರಿದಂತೆ ಹಲವರ ಜೊತೆ ಈಗಾಗಲೇ ಮಾತನಾಡಿದ್ದೇನೆ. ಪ್ರಿಯಾ ಕೃಷ್ಣ ಯುವಕರಾಗಿದ್ದು, ಅವರಿಗೆ ಉಜ್ವಲ ಭವಿಷ್ಯವಿದೆ. ಮೈಸೂರು ಭಾಗದಲ್ಲಿ ಶಾಸಕ ತನ್ವೀರ್ ಸೇಠ್ ಅವರಿಗೆ ಅನ್ಯಾಯವಾಗಿರುವುದನ್ನು ಒಪ್ಪುತ್ತೇನೆ. ಆದರೆ, ಅವರ ಸಮುದಾಯಕ್ಕೆ ಈ ಹಿಂದಿಗಿಂತ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಶಾಸಕರು ಸಭೆ ನಡೆಸುತ್ತಿರುವುದರಲ್ಲಿ ತಪ್ಪಿಲ್ಲ, ಅವರಿಗೆ ತಮ್ಮ ಅಭಿಪ್ರಾಯ ತಿಳಿಸುವ ಹಕ್ಕಿದೆ. ರಾಜೀನಾಮೆ ಬೆದರಿಕೆ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದರು.

ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಅಭ್ಯರ್ಥಿಗಳನ್ನು ಎಐಸಿಸಿ ಘೋಷಣೆ ಮಾಡಿರುವ ಬಗ್ಗೆ ಬಿಜೆಪಿ ಮಾಡಿರುವ ಟೀಕೆಗೆ ಹರಿಪ್ರಸಾದ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. “ಸಂವಿಧಾನದ 178ನೇ ವಿಧಿಯಡಿ ಸ್ಪೀಕರ್ ಹಾಗೂ 192ನೇ ವಿಧಿಯಡಿ ಸಭಾಪತಿಯನ್ನು ಸದನವೇ ಆಯ್ಕೆ ಮಾಡುತ್ತದೆ ಎಂಬ ಕನಿಷ್ಠ ಜ್ಞಾನ ಬಿಜೆಪಿಗೆ ಇಲ್ಲ. ನಾವು ಕೇವಲ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದೇವೆಯೇ ಹೊರತು, ನೇರವಾಗಿ ಆ ಸ್ಥಾನದಲ್ಲಿ ಕೂರಿಸಿಲ್ಲ. 2026ರಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ ಸುವೆಂದು ಅಧಿಕಾರಿ ತಾವೇ ಅಭ್ಯರ್ಥಿಗಳನ್ನು ಘೋಷಿಸಿರಲಿಲ್ಲವೇ? ಬಿಜೆಪಿಯವರಿಂದ ನಾವು ಸಂವಿಧಾನದ ಪಾಠ ಕಲಿಯುವ ಅಗತ್ಯವಿಲ್ಲ” ಎಂದು ಹರಿಹಾಯ್ದರು.

ಮಹಿಳೆಯರಿಗೆ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮಹಿಳೆಯರಿಗೆ ಕಾಂಗ್ರೆಸ್ ನೀಡಿದಷ್ಟು ಪ್ರಾಮುಖ್ಯತೆಯನ್ನು ಬೇರೆ ಯಾರೂ ನೀಡಿಲ್ಲ. ಸಂಪುಟದಲ್ಲಿ ಇನ್ನೂ ಒಂದು ಸ್ಥಾನ ಖಾಲಿ ಇದ್ದು, ಅದನ್ನು ಮಹಿಳೆಯರಿಗೆ ನೀಡುವಂತೆ ಹೈಕಮಾಂಡ್‌ಗೆ ಒತ್ತಡ ಹೇರಿದ್ದೇನೆ. ಜೊತೆಗೆ ಶಾಸಕಿ ಉಮಾಶ್ರೀ ಅವರನ್ನು ಉಪಸಭಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ” ಎಂದು ತಿಳಿಸಿದರು.

ಬ್ರಾಹ್ಮಣ ಸಮುದಾಯಕ್ಕೆ ಅವಕಾಶ ಕೈತಪ್ಪಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಕೇವಲ ಒಂದು ಸಮುದಾಯ ಮಾತ್ರವಲ್ಲ, ಇನ್ನೂ ಹಲವು ಸಮುದಾಯಗಳಿಗೆ ಅವಕಾಶ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ತಾವು ಮಂತ್ರಿಯಾಗಲಿದ್ದೇನೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ನಾನು ಮಂತ್ರಿಯಾಗುವುದಿದ್ದರೆ 50 ವರ್ಷ ಕಾಯುವ ಅಗತ್ಯವಿರಲಿಲ್ಲ ಎಂದು ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದರು.

ಸಚಿವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಟಿಎಂಸಿ ಅಭ್ಯರ್ಥಿ ನಾಮಪತ್ರ ವಾಪಸ್; ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ನಂದಿಗ್ರಾಮ ವಿಧಾನಸಭಾ ಕ್ಷೇತ್ರದ...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...