ಮಂಗಳೂರಿನಲ್ಲಿ ಸಚಿವ ಸಂಪುಟ; ಕರಾವಳಿ–ಮಲೆನಾಡಿಗೆ ಹೊಸ ರೂಪ: ಸಿಎಂ ಡಿಕೆಶಿ

Date:

ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಹೊಸ ರೂಪ ನೀಡುವ ಮೂಲಕ ಇಲ್ಲಿನ ಮಾನವ ಸಂಪತ್ತು ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

- Advertisement -

ಮಂಗಳೂರು ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕರಾವಳಿ ಭಾಗಕ್ಕೆ 340 ಕಿ.ಮೀ. ಉದ್ದದ ಕರಾವಳಿ ತೀರವಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ಈ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಬೇಕು. ಕರಾವಳಿ ಹಾಗೂ ಮಲೆನಾಡಿನಲ್ಲಿ ವಲಸೆ ಹೋಗುವುದನ್ನು ತಡೆಯುವಂತಹ ಅವಕಾಶಗಳನ್ನು ಸೃಷ್ಟಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಇದನ್ನೂ ಓದಿ: ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

“ಕರ್ನಾಟಕದಲ್ಲೇ ಕರಾವಳಿ–ಮಲೆನಾಡು ಭಾಗದಲ್ಲಿ ಹೆಚ್ಚು ವಿದ್ಯಾವಂತರು, ಪ್ರಜ್ಞಾವಂತರು ಹಾಗೂ ಪ್ರತಿಭಾವಂತ ಮಾನವ ಸಂಪನ್ಮೂಲವಿದೆ. ಈ ಮಾನವ ಸಂಪತ್ತಿಗೆ ಸ್ಥಳೀಯವಾಗಿಯೇ ಅವಕಾಶ ಮತ್ತು ಶಕ್ತಿ ತುಂಬುವ ಅಗತ್ಯವಿದೆ. ಈ ನಾಡು ಯಾವುದಕ್ಕೂ ಕಡಿಮೆಯಿಲ್ಲ” ಎಂದು ಹೇಳಿದರು.

30–40 ವರ್ಷಗಳ ಬೇಡಿಕೆಗಳತ್ತ ಸರ್ಕಾರದ ಗಮನ

ಕರಾವಳಿ ಭಾಗದ ಜನರು ಕಳೆದ 30–40 ವರ್ಷಗಳಿಂದ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಜನಪ್ರತಿನಿಧಿಗಳು, ಪಕ್ಷದವರು ಸೇರಿದಂತೆ ಬಿಜೆಪಿ ಶಾಸಕರು ಹಾಗೂ ಸಂಸದರೂ ತಮ್ಮ ಅಭಿಪ್ರಾಯ ಮತ್ತು ಬೇಡಿಕೆಗಳನ್ನು ತಿಳಿಸಿದ್ದಾರೆ. “ನಾವು ಕೈಹಿಡಿಯದಿದ್ದರೆ ಇನ್ನಾರು ಕೈಹಿಡಿಯುತ್ತಾರೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅವರ ಹಲವು ಬೇಡಿಕೆಗಳನ್ನು ಗಮನದಲ್ಲಿಟ್ಟುಕೊಂಡಿದ್ದೇನೆ” ಎಂದು ಹೇಳಿದರು.

ಈ ಎಲ್ಲ ವಿಚಾರಗಳ ಕುರಿತು ಶುಕ್ರವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಸರ್ಕಾರ ಕೈಗೊಳ್ಳುವ ತೀರ್ಮಾನಗಳನ್ನು ಬಳಿಕ ತಿಳಿಸಲಾಗುವುದು ಎಂದರು.

ಕಸ್ತೂರಿರಂಗನ್ ವರದಿ ಜಾರಿ ವಿಚಾರದಲ್ಲಿ ರೈತರು ಹಾಗೂ ಮಲೆನಾಡು–ಕರಾವಳಿ ಭಾಗದ ಜನರಿಗೆ ಎದುರಾಗಬಹುದಾದ ಸಮಸ್ಯೆಗಳ ಬಗ್ಗೆಯೂ ಪ್ರತಿಕ್ರಿಯೆಸಿದ ಅವರು, ಸರ್ಕಾರ ಈಗಾಗಲೇ ವರದಿಯನ್ನು ತಿರಸ್ಕರಿಸುವ ನಿಲುವು ಹೊಂದಿದ್ದರೂ, ಈ ವಿಚಾರದಲ್ಲಿ ವಿವಿಧ ಒತ್ತಡಗಳು ಮತ್ತು ಅಭಿಪ್ರಾಯಗಳಿವೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನದಲ್ಲಿ ಎಲ್ಲ ಶಾಸಕರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು. ಅಧಿವೇಶನಕ್ಕೂ ಮುನ್ನ ತಾವೇ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಗ್ರೌಂಡ್ ರಿಯಾಲಿಟಿ ಅರಿಯುತ್ತಿರುವುದಾಗಿ ಎಂದು ಹೇಳಿದರು.

“ಅಸೆಂಬ್ಲಿಯಲ್ಲಿ ಚರ್ಚೆ ಮಾಡುವ ಮೊದಲು, ಯಾವುದೇ ಅಂತಿಮ ಅಭಿಪ್ರಾಯಕ್ಕೆ ಬರುವ ಮೊದಲು ವಾಸ್ತವಾಂಶ ತಿಳಿದುಕೊಳ್ಳಬೇಕು. ಸಾಮಾನ್ಯ ರೈತರು, ಸ್ಥಳೀಯ ಜನರು, ಜನಪ್ರತಿನಿಧಿಗಳು ಹಾಗೂ ಹೋರಾಟಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ತಿಳಿದುಕೊಳ್ಳುತ್ತಿದ್ದೇನೆ” ಎಂದರು.

ಬರ, ರೈತರ ಸಮಸ್ಯೆಗೂ ವಿಶೇಷ ಅಧಿವೇಶನ

ವಿಶೇಷ ಅಧಿವೇಶನದಲ್ಲಿ ಕಸ್ತೂರಿರಂಗನ್ ವರದಿ ಮಾತ್ರವಲ್ಲದೆ, ರೈತರ ಸಮಸ್ಯೆಗಳು ಮತ್ತು ಬರ ಪರಿಸ್ಥಿತಿಯ ಬಗ್ಗೆಯೂ ಚರ್ಚಿಸಲಾಗುವುದು. ರೈತರ ಬದುಕಿನ ಮೇಲೆ ನೇರವಾಗಿ ಪರಿಣಾಮ ಬೀರುವ ಸಮಸ್ಯೆಗಳನ್ನು ಅರಿತುಕೊಂಡು ಚರ್ಚಿಸಲು ಅಧಿವೇಶನ ಕರೆದಿರುವುದಾಗಿ ಎಂದು ತಿಳಿಸಿದರು.

ಉಮರ್ ಖಾಲೀದ್ ವಿಚಾರವಾಗಿ ಬಿ.ಕೆ. ಹರಿಪ್ರಸಾದ್ ಅವರು ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಬಿ.ಕೆ. ಹರಿಪ್ರಸಾದ್ ಅವರು ಜೊತೆ ಮಾತನಾಡುತ್ತೇನೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...