ಸಚಿವ ಸಂಪುಟ ಸಭೆ | ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ

Date:

ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ವಸತಿ ಯೋಜನೆಯಲ್ಲಿ ಅಲ್ಪ ಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಏರಿಸಲು ಸಚಿವ ಸಂಪುಟ ಅಸ್ತು ಎಂದಿದೆ.

- Advertisement -

ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ವಸತಿ ಯೋಜನೆಯಲ್ಲೂ ಮೀಸಲಾತಿಯನ್ನು ಹೆಚ್ಚಿಸುವಂತೆ ವಸತಿ ಇಲಾಖೆ ಸಚಿವ ಜಮೀರ್ ಅಹಮದ್ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಪ್ರಸ್ತಾವನೆಯನ್ನು ಇಂದಿನ ಸಚಿವ ಸಂಪುಟ ಅಂಗೀಕರಿಸಿದೆ. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಜಾರಿಗೊಳಿಸುವ ಎಲ್ಲ ವಸತಿ ಯೋಜನೆಗಳಿಗೆ ಈ ಮೀಸಲಾತಿ ಅನ್ವಯಿಸುತ್ತದೆ.

ಸಚಿವ ಸಂಪುಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಾನೂನು ಸಚಿವ ಹೆಚ್​ ಕೆ ಪಾಟೀಲ್, “ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ಯೋಜನೆ ಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಲಾಗಿದ್ದು, ಶೇಕಡಾ 10ರಿಂದ ಶೇ.15ಕ್ಕೆ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ” ಎಂದು ತಿಳಿಸಿದರು.

Advertisements

ಮುಸ್ಲಿಮರಿಗೆ ಮಾತ್ರವಲ್ಲ ಅಲ್ಪಸಂಖ್ಯಾತರಿಗೂ ಅನ್ವಯ

‘ಎಸ್‌ಸಿ, ಎಸ್‌ಟಿ ಹಾಗೂ ಸಾಮಾನ್ಯ ಕೆಟಗರಿಯಲ್ಲಿ ಮೀಸಲಾತಿ ಇರಲಿದೆ. ಅಲ್ಪ ಸಂಖ್ಯಾತರಲ್ಲಿ ವಸತಿ ಸೌಲಭ್ಯ ಇಲ್ಲದವರ ಸಂಖ್ಯೆಯನ್ನು ಪರಿಗಣಿಸಿ ಈ ನಿರ್ಧಾರವನ್ನು ಮಾಡಲಾಗಿದೆ. ಈ ಬಗ್ಗೆ ಅಧ್ಯಯನ ವರದಿ ಇದೆ. ಇದನ್ನೆಲ್ಲಾ ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದರು.

“ನ್ಯಾಯಮೂರ್ತಿ ಸಾಚಾರ್ ಕಮಿಟಿ ವರದಿಯನ್ನೂ ಕೂಡ ಈಗ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ. ನಿಯಮಗಳಿಗೆ ಕ್ಯಾಬಿನೆಟ್ ಅನುಮೋದನೆ ಸಾಕು. ಇದು ಎಲ್ಲ ಅಲ್ಪಸಂಖ್ಯಾತರಿಗೂ ಅನ್ವಯವಾಗುತ್ತದೆ. ಮುಸ್ಲಿಂ, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ” ಎಂದರು.

“ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ರಹಿತರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶ” ಎಂದು ಹೇಳಿದರು.

ಬಡ ವರ್ಗದ ಜನರಿಗೆ ನೆರವು: ಡಿ.ಕೆ. ಶಿವಕುಮಾರ್

“ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಸಚಿವ ಸಂಪುಟ ಸಭೆ ಬಳಿಕ ಪ್ರತಿಕ್ರಿಯೆ ನೀಡಿ, “ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳಿಗೆ ಹಣ ಪಾವತಿ ಮಾಡಬೇಕು. ಇತರರು ಇದಕ್ಕೆ ಹೆಚ್ಚಿನ ಆಸಕ್ತಿ ತೋರಿಲ್ಲ. ಬೆಂಗಳೂರಿನಲ್ಲೂ ಅನೇಕ ವಸತಿ ಕಟ್ಟಡಗಳಲ್ಲಿ ಮನೆಗಳು ಖಾಲಿ ಇವೆ. ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಸಹಾಯಧನ ತೀರಾ ಕಡಿಮೆ ಇದೆ. ಈ ಮನೆಗಳನ್ನು ಕಟ್ಟಿದ ನಂತರ ಖಾಲಿ ಬಿದ್ದಿವೆ. ಇವುಗಳನ್ನು ಯಾರಿಗೆ ನೀಡಬೇಕು” ಎಂದು ಪ್ರಶ್ನಿಸಿದರು.

ಮಂಡ್ಯದಲ್ಲಿಯೂ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿಗೆ ಯಾರು ಹೋಗದೇ ಖಾಲಿ ಬಿದ್ದಿವೆ. ಈ ಮನೆಗಳಿಗೆ ಹೋಗಲು ಅಲ್ಪಸಂಖ್ಯಾತರು ಮುಂದಾಗಿದ್ದಾರೆ. ಹೀಗಾಗಿ ಸರ್ಕಾರ ಈ ತೀರ್ಮಾನ ಮಾಡಿದೆ” ಎಂದರು.

ಇದು ಓಲೈಕೆ ರಾಜಕಾರಣ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಯಾರು ಏನಾದರೂ ಹೇಳಿಕೊಳ್ಳಲಿ. ನಾವು ಬಡ ವರ್ಗದ ಜನರಿಗೆ ನೆರವು ನೀಡುತ್ತಿದ್ದೇವೆ. ಈ ಮನೆಗಳಿಗೆ ಯಾರೂ ಅರ್ಜಿ ಹಾಕದೇ ಇದ್ದಾಗ ನಾವು ಏನು ಮಾಡಬೇಕು? ಮನೆಯನ್ನು ಹಾಗೇ ಖಾಲಿ ಬಿಡಬೇಕೇ? ಉಳಿದ ವಿಚಾರವನ್ನು ಕಾನೂನು ಸಚಿವರು ವಿವರಿಸಲಿದ್ದಾರೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...